ಸೋಂಕಿತರ ಆರೈಕೆ ಬಗ್ಗೆ ನಿಗಾ ವಹಿಸಿ


Team Udayavani, Aug 28, 2020, 6:28 PM IST

ಸೋಂಕಿತರ ಆರೈಕೆ ಬಗ್ಗೆ ನಿಗಾ ವಹಿಸಿ

ಗದಗ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕು ನಿಯಂತ್ರಿಸುವ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅವುಗಳ ಸರಿಯಾದ ಪಾಲನೆಯೊಂದಿಗೆ ಸೋಂಕಿತರ ಆರೈಕೆ ಬಗ್ಗೆ ಸೂಕ್ತ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಯುಷ್‌ ಆಸ್ಪತ್ರೆ ಹಾಗೂ ಜಿಮ್ಸ್‌ ಆಸ್ಪತ್ರೆಗಳನ್ನು ಜಿಲ್ಲಾ ನಿಗದಿತ ಕೋವಿಡ್‌ ಆಸ್ಪತ್ರೆಗಳಾಗಿ ಗುರುತಿಸಿ, ಕೋವಿಡ್‌ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ಸೋಂಕಿತರ ಚಿಕಿತ್ಸೆಗೆ ಹಾಗೂ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ನೀಡಲಿದೆ ಎಂದರು.

ಕೋವಿಡ್‌ ಸೋಂಕು ಪತ್ತೆಯಾದವರನ್ನು ಆಸ್ಪತ್ರೆಗೆ ಕರೆ ತರಲು ಇರುವ ಆಂಬ್ಯುಲೆನ್ಸ್‌ಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು. ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಆಹಾರ ನೀಡಬೇಕು. ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡಬಾರದು. ಕೋವಿಡ್‌ ಮಾರ್ಗಸೂಚಿಗಳನ್ವಯ ಮೃತರ ಅಂತ್ಯಸಂಸ್ಕಾರ ನೆರವೇರಿಸಬೇಕು.

ಇಲಾಖೆಯಲ್ಲಿ ಈಗಿರುವ ಆಂಬ್ಯುಲೆನ್ಸ್‌ ಸೇರಿದಂತೆ ಇನ್ನಿತರೆ ಸಾಮಗ್ರಿಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಜಿಲ್ಲೆಯ ಎಲ್ಲಾ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್‌ ಸೋಂಕು ಪರೀಕ್ಷೆಮಾಡಲಾಗುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸರ್ಕಾರದ ಆದೇಶದನ್ವಯ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಬೆಡ್‌ ಕಾಯ್ದಿರಿಸಿ ಚಿಕಿತ್ಸೆ ನೀಡಲು ಸೂಚಿಸಿ ಕ್ರಮ ವಹಿಸಲಾಗಿದೆ. ಸರ್ಕಾರ ನಿಗದಿ ಪಡಿಸಿದ ದರದಂತೆ ಸೂಕ್ತ ಚಿಕಿತ್ಸೆ ನೀಡಬೇಕು.ಈ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ನಿರ್ದೇಶಿಸಿದರು.

ಜಿಮ್ಸ್‌ ನಿರ್ದೇಶಕ ಡಾ| ಭೂಸರೆಡ್ಡಿ ಮಾತನಾಡಿ, ಆಸ್ಪತ್ರೆಯಲ್ಲಿ ಒಟ್ಟು 133 ಆಕ್ಸಿಜನ್‌ ಬೆಡ್‌ ಸಾಮರ್ಥ್ಯ ಹೊಂದಿದ್ದು, ಸೋಂಕಿತರ ಸಂಖ್ಯೆಗೆ ಅಗನುಗುಣವಾಗಿ ಆಕ್ಸಿಜನ್‌ ಬೆಡ್‌ಗಳ ಸಾಮರ್ಥ್ಯವನ್ನು233ಕ್ಕೆ ಹೆಚ್ಚಿಸುವ ಅಗತ್ಯವಿದೆ. ಪ್ರತಿದಿನ 300 ಆಕ್ಸಿಜನ್‌ ಸಿಲಿಂಡರ್‌ ಬಳಕೆಯಾಗುತ್ತಿದ್ದು, 6 ಕೆಎಲ್‌ ಸಾಮರ್ಥ್ಯದಹೆಚ್ಚುವರಿ ಸಿಲಿಂಡರ್‌ ಅಗತ್ಯವಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ ಬಸರೀಗಿಡದ ಮಾತನಾಡಿ, ತಾಲೂಕು ಆಸ್ಪತ್ರೆ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಸೋಂಕು ಪತ್ತೆಗೆ ಗಂಟಲು ದ್ರವ ಪರೀಕ್ಷೆಗಾಗಿ ಸಂಗ್ರಹಿಸಲು ಇಂದು3200 ಆರ್‌ಟಿ ಕಿಟ್‌ಗಳನ್ನು ವಿತರಿಸಲಾಗಿದೆ. ಅಗತ್ಯ ಬೇಡಿಕೆಗೆ ಅನುಗುಣವಾಗಿ ಪೂರೈಸಲು ಕ್ರಮ ವಹಿಸಲಾಗುತ್ತಿದೆ. ಪ್ರತಿಬಂಧಿತ ಪ್ರದೇಶಗಳಲ್ಲಿ ಸರ್ವೇ ಕಾರ್ಯ ಶೇ. 93ರಷ್ಟಾಗಿದೆ ಎಂದು ಸಭೆಗೆ ಮಾಹಿತಿ ಒದಗಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ| ಆನಂದ ಕೆ., ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ್‌, ಉಪವಿಭಾಗಾ ಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಕರೇಗೌಡ್ರ ಉಪಸ್ಥಿತರಿದ್ದರು

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.