ಕೊಪ್ಪಳ: ಗೋಡೆ ಬರಹ ಬರೆದ ಆರೋಪಿ ಬಂಧನ- ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ

ಸಾಮಾಜಿಕ ಜಾಲತಾಣಗಳ ಬಗ್ಗೆಯೂ ಹೆಚ್ಚು ನಿಗಾ ವಹಿಸಬೇಕು

Team Udayavani, Jul 28, 2023, 6:23 PM IST

ಕೊಪ್ಪಳ: ಗೋಡೆ ಬರಹ ಬರೆದ ಆರೋಪಿ ಬಂಧನ-ಯಶೋಧಾ

ಕೊಪ್ಪಳ: ಕನಕಗಿರಿಯಲ್ಲಿ ಅಪ್ರಾಪ್ತೆಯ ಹೆಸರಿನೊಂದಿಗೆ ಅಶ್ಲೀಲವಾಗಿ ಗೋಡೆ ಬರಹ ಬರೆದ ಪ್ರಕರಣದ ಆರೋಪಿ ಮಹೆಬೂಬ್‌ ಹಸನಸಾಬ್‌ ಸಿಕಲಗಾರನನ್ನು ಪೊಲೀಸರು ಬಂಧಿಸಿದ್ದಾರೆ. ತಾಂತ್ರಿಕವಾಗಿ ಹಾಗೂ ವಿವಿಧ ಆಯಾಮದಲ್ಲಿ ವಿಚಾರಣೆ ನಡೆಸಿ ದಾಖಲೆ ಸಮೇತ ಬಂಧಿಸಲಾಗಿದೆ ಎಂದು ಎಸ್ಪಿ ಯಶೋಧಾ ವಂಟಗೋಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನಕಗಿರಿಯಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿನಿಯ ಹೆಸರನ್ನು ಉಲ್ಲೇಖೀಸಿ ಶಾಲೆ, ಕಾಲೇಜು ಗೋಡೆಯ ಮೇಲೆ ಅಶ್ಲೀಲವಾಗಿ ಬರೆದ ಘಟನೆ ನಡೆದಿತ್ತು. ಈ ಬಗ್ಗೆ ಅಪ್ರಾಪೆ¤ಯ ಪಾಲಕರು ಕನಕಗಿರಿ ಠಾಣೆಯಲ್ಲಿ ದೂರು ನೀಡಿದ್ದರು.

ಇದಲ್ಲದೇ ಇನ್ನೊಂದು ದೂರು ದಾಖಲಾಗಿತ್ತು. ಈ ಎರಡು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸ್‌ ಅ ಧಿಕಾರಿಗಳಾದ ಅಮರೇಶ ಹಾಗೂ ಜಗದೀಶ ಅವರ ಎರಡು ವಿಶೇಷ ತಂಡ ರಚನೆ ಮಾಡಿ ತನಿಖೆ ನಡೆಸಲಾಗಿತ್ತು. ತನಿಖೆ ವೇಳೆ ಇದೊಂದು ಸವಾಲಿನ ವಿಷಯವಾಗಿತ್ತು.

ತಾಂತ್ರಿಕ ತಂಡ ಬಳಕೆ ಮಾಡಿಕೊಂಡು ವಿವಿಧ ಆಯಾಮದಲ್ಲಿ ತನಿಖೆ ಕೈಗೊಂಡಾಗ ಆರೋಪಿ ಮಹೆಬೂಬ್‌ ಸಿಕಲಗಾರ ಇನಾrಗ್ರಾಂನಲ್ಲಿ ಬೇರೆಯ ಹೆಸರಿನ ಫೇಕ್‌ ಅಕೌಂಟ್‌ ಕ್ರಿಯೆಟ್‌ ಮಾಡಿ ಅದರಲ್ಲಿ ಬೇರೊಬ್ಬರ ಅಶ್ಲೀಲವಾಗಿ ಪೋಸ್ಟ್‌ಗಳನ್ನು ಹಾಕಿದ್ದನು. ಇದನ್ನು ಪತ್ತೆ ಮಾಡಿದ ತಂಡವು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿದಾಗಲೂ ಆತನ ಬಗ್ಗೆ ಸಂಭಾವಿತ ಎನ್ನುವ ಮಾತು ಕೇಳಿ ಬಂದಿದ್ದವು. ಬಳಿಕ ತಾಂತ್ರಿಕವಾಗಿ ದಾಖಲೆ ದೊರೆತ ಬಳಿಕ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಗೋಡೆ ಬರಹ ಬರೆದಿದ್ದು ಒಪ್ಪಿಕೊಂಡಿದ್ದಾನೆ ಎಂದರು.

ಈ ಆರೋಪಿ ಆ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದನು. ತನ್ನೊಂದಿಗೆ ಆ ಬಾಲಕಿ ಮಾತನಾಡದೇ ಹೋದಾಗ ಈ ರೀತಿ ಗೋಡೆ
ಬರಹ ಬರೆಯುತ್ತಿದ್ದನು. ಆ ಬಾಲಕಿ ತನ್ನ ಸ್ನೇಹಿತೆಗೆ ಇದೆಲ್ಲವನ್ನು ಹೇಳಿಕೊಳ್ಳುತ್ತಿದ್ದಳು. ಈ ಆರೋಪಿ ಬಾಲಕಿಯ ಮನೆಯವರೊಂದಿಗೂ ಒಡನಾಟ ಹೊಂದಿದ್ದ. ಅಲ್ಲದೇ ಅವರ ಸಂಬಂ ಧಿಕನೂ ಆಗಿದ್ದಾನೆ ಎಂದರು.

ಅಪ್ರಾಪ್ತೆ ಕಳೆದ ಕೆಲವು ತಿಂಗಳ ಹಿಂದೆ ನನ್ನ ಜತೆ ಮಾತುಕತೆ ಬಿಟ್ಟು ಬಿಡು, ನನಗೆ ಸರ್ಕಾರಿ ನೌಕರಿ ಇರುವ ವ್ಯಕ್ತಿ ಜತೆ ಮದುವೆ ಮಾಡುತ್ತಾರೆಂದು ಹೇಳಿದ್ದಳಂತೆ. ವಿದ್ಯಾರ್ಥಿನಿಯನ್ನು ಒಬ್ಬಂಟಿ ಮಾಡಬೇಕು. ಬಾಲಕಿಯನ್ನು ಯಾರೂ ಮಾತನಾಡಿಸಬಾರದು ಎನ್ನುವ ಕಾರಣಕ್ಕೆ ಹೀಗೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಕೊನೆಗೂ ಪ್ರಕರಣ ಸುಖಾಂತ್ಯ ಕಂಡಿದೆ. ಅಪ್ರಾಪ್ತರು ಈ ಬಗ್ಗೆ ಕಾಳಜಿ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಬಗ್ಗೆಯೂ ಹೆಚ್ಚು ನಿಗಾ ವಹಿಸಬೇಕು ಎಂದು ಎಸ್ಪಿ ತಿಳಿಸಿದ್ದಾರೆ. ಗಂಗಾವತಿ ಡಿಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.