ಕನ್ನಡ ಸಾಹಿತ್ಯ ಬಾನೆತ್ತರಕ್ಕೆ ಹಾರಿಸಿದ ಕುವೆಂಪು; ಸಂತೋಷ ತುರನೂರ

ಜಾತಿಯಿಂದ ಮುಖ್ಯರಾಗಬಾರದು ಬದಲಾಗಿ ನೈತಿಕ ವ್ಯಕ್ತಿತ್ವದಿಂದ ಮುಖ್ಯರಾಗಬೇಕು

Team Udayavani, Jan 1, 2024, 1:20 PM IST

ಕನ್ನಡ ಸಾಹಿತ್ಯ ಬಾನೆತ್ತರಕ್ಕೆ ಹಾರಿಸಿದ ಕುವೆಂಪು; ಸಂತೋಷ ತುರನೂರ

ನರಗುಂದ: 20ನೇ ಶತಮಾನದ ದೈತ್ಯ ಪ್ರತಿಭೆಯಾದ ಕುವೆಂಪು ಅವರು ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಯುಗದ ಕವಿ. ನಿಸರ್ಗ ಪ್ರೇಮಿಗಳಾಗಿದ್ದ ಅವರ ಸಾಹಿತ್ಯದಲ್ಲಿ ನೈಸರ್ಗಿಕ ಸಂಪತ್ತಿನ ವರ್ಣನೆಯಿದೆ,ಪ್ರಾಣಿ ಪಕ್ಷಿಗಳ ಮೇಲೆ ಪ್ರೀತಿಯಿದೆ ಎಂದು ಕೊಣ್ಣೂರಿನ ಸಿಆರ್‌ಪಿ ಸಂತೋಷ ತುರನೂರ ಬಣ್ಣಿಸಿದರು.

ಪಟ್ಟಣದ ಲಯನ್ಸ್‌ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಭೆ„ರನಹಟ್ಟಿ ದೊರೆಸ್ವಾಮಿ  ವಿರಕ್ತಮಠದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಲಯನ್ಸ್‌ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಏಕೀಕರಣ ಯೋಧರ ಯಶೋಗಾಥೆ-7 ಹಾಗೂ ಕುವೆಂಪುರವರ ಜಯಂತಿ ನಿಮಿತ್ಯ ವಿಶ್ವಮಾನವ ದಿನಾಚರಣೆ ಸಮಾರಂಭದಲ್ಲಿ ಕುವೆಂಪುರವರ ಬದುಕು-ಬರಹ ವಿಷಯವಾಗಿ ಅವರು ಉಪನ್ಯಾಸ ನೀಡಿದರು.

20ನೇ ಶತಮಾನದಲ್ಲಿ ಮಹಾಕಾವ್ಯ ರಚಿಸಿ ಕನ್ನಡ ಸಾರಸ್ವತ ಲೋಕಕ್ಕೆ ಕಳಶವನ್ನಿಟ್ಟ ಶ್ರೇಷ್ಠ ಕವಿ ಕುವೆಂಪು. ಮಾನಸ ಗಂಗೋತ್ರಿ ವಿಶ್ವವಿದ್ಯಾಲಯ ಸ್ಥಾಪಿಸಿ ಅದರಲ್ಲಿ ಮೂರು ವಿಭಾಗಗಳನ್ನಾಗಿ ವಿಭಾಗಿಸಿ ಉನ್ನತ ಶಿಕ್ಷಣಕ್ಕೆ ಹೊಸದೊಂದು ರೂಪ ಕೊಟ್ಟ ಅವರು, ಪ್ರತಿಯೊಬ್ಬರು ಜಾತಿಯಿಂದ ಮುಖ್ಯರಾಗಬಾರದು ಬದಲಾಗಿ ನೈತಿಕ ವ್ಯಕ್ತಿತ್ವದಿಂದ ಮುಖ್ಯರಾಗಬೇಕೆಂದರು. ಜಾತಿ ಸಂಕೋಲೆಯನ್ನು ಬಲವಾಗಿ ವಿರೋಧಿಸಿ ವಿಶ್ವಮಾನವ ಸಂದೇಶ ಸಾರಿದ ಮಹಾ ಮಾನವತಾವಾದಿ. ತಮ್ಮ ಜೀವಿತಾವಧಿವರೆಗೂ ಕನ್ನಡವನ್ನೇ ಉಸಿರಾಗಿಸಿಕೊಂಡು ಬದುಕಿದ ಕುವೆಂಪು ಅವರು ಕನ್ನಡದ ಅನರ್ಘ್ಯ ರತ್ನ ಎಂದರು.

ಅಧ್ಯಕ್ಷತೆ ವಹಿಸಿದ್ದ ಲಯನ್ಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜಿ.ಟಿ.ಗುಡಿಸಾಗರ ಮಾತನಾಡಿ, ವಿದ್ಯಾರ್ಥಿಗಳು ಭತ್ತ ತುಂಬುವ ಗೋಣೆ ಚೀಲಗಳಾಗಬಾರದು. ಬದಲಾಗಿ ಭತ್ತ ಬೆಳೆಯುವ ಗದ್ದೆಗಳಾಗಬೇಕು. ರೈತಗೀತೆ ನೀಡಿದ ಕುವೆಂಪುರವರ ಸಾಹಿತ್ಯ ಸರ್ವಕಾಲಿಕವಾಗಿದೆ. ಜಾತ್ಯತೀತ ಮನೋಭಾವದವರಾಗಿದ್ದ ಅವರು ಬುದ್ಧ-ಬಸವ- ಅಂಬೇಡ್ಕರ್‌ ರಂತೆ ವೈಚಾರಿಕ ದೃಷ್ಟಿಕೋನ ಬೆಳೆಸಿಕೊಳ್ಳಬೇಕೆಂದರು.

ಸಾನಿಧ್ಯ ವಹಿಸಿದ್ದ ದೊರೆಸ್ವಾಮಿ ವಿರಕ್ತಮಠದ ಪೂಜ್ಯ ಶಾಂತಲಿಂಗ ಸ್ವಾಮಿಗಳು ಆಶೀರ್ವಚನ ನೀಡಿ, ವೈಚಾರಿಕ ಪ್ರಜ್ಞೆ ಹೊಂದಿದ್ದ ಕುವೆಂಪುರವರು ಕಾರ್ತಿಕದ ಕತ್ತಲಲ್ಲಿ ಆಕಾಶದೀಪವಾಗಿ ಬಂದೆ ಎಂದು ವಿಶ್ವ ಗುರು ಬಸವಣ್ಣನವರನ್ನು ಹೃದಯ ತುಂಬಿ ಹೊಗಳಿದರು. ಬಸವಾದಿ ಶಿವಶರಣರ ತತ್ವ-ಸಿದ್ಧಾಂತಗಳನ್ನು ಒಪ್ಪಿ ಅಪ್ಪಿಕೊಂಡಿದ್ದರು ಎಂದರು.

ಲಯನ್ಸ್‌ ಕ್ಲಬ್‌ ಕಾರ್ಯದರ್ಶಿ ಜಯಪ್ರಕಾಶ ಕಂಠಿ, ಖಜಾಂಚಿ ಸಿದ್ಧನಗೌಡ ಪಾಟೀಲ, ಪ್ರಾಚಾರ್ಯ ಎಸ್‌.ಜಿ.ಜಕ್ಕಲಿ ಉಪಸ್ಥಿತರಿದ್ದರು.ಡಾ|ಬಸವರಾಜ ಹಲಕುರ್ಕಿ ನಿರ್ವಹಿಸಿದರು.

ಟಾಪ್ ನ್ಯೂಸ್

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.