ಲಕ್ಕುಂಡಿ ಪ್ರಾಧಿಕಾರ ಕನ್ನಡಿಯೊಳಗಿನ ಗಂಟು

Team Udayavani, Dec 23, 2019, 12:22 PM IST

gadaga-tdy-1

ಗದಗ: ವಿಶ್ವವಿಖ್ಯಾತ ಐತಿಹಾಸಿಕ ಹಾಗೂ ಉತ್ತರ ಕರ್ನಾಟಕದ ಪ್ರವಾಸಿ ತಾಣವಾಗಿರುವ ಲಕ್ಕುಂಡಿ ಗ್ರಾಮವನ್ನು ಹಂಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಸರಕಾರದ ಚಿಂತನೆ ಕಾರ್ಯರೂಪಕ್ಕೆ ಬಂದಿಲ್ಲ. ಹಿಂದಿನ ಕಾಂಗ್ರೆಸ್‌ ಸರಕಾರ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿ, 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿತ್ತು. ಆದರೆ, ಅನುದಾನ ಬಳಕೆಗೆ ಮಾರ್ಗವಿಲ್ಲದೇ ಸರಕಾರಕ್ಕೆ ವಾಪಸಾಗಿದೆ.

ತಾಲೂಕಿನ ಲಕ್ಕುಂಡಿ ಗ್ರಾಮ ಚಾಲುಕ್ಯರ ಸಾಮ್ರಾಜ್ಯದ ರಾಜಧಾನಿ ಹಾಗೂ ಕನ್ನಡ ಸಾಹಿತ್ಯದ ಪೋಷಕಿಯಾಗಿದ್ದ ಅತ್ತಿಮಬ್ಬೆಯವರ ಸ್ಥಳವಾಗಿದೆ. ನೂರೊಂದು ಬಾವಿ ಹಾಗೂ ನೂರೊಂದು ಗುಡಿ ಹೊಂದಿದ ಕೀರ್ತಿ ಲಕ್ಕುಂಡಿಯದು. ಪ್ರಾಚೀನ ಕಾಲದಲ್ಲಿ ಲಕ್ಕುಂಡಿ ಪ್ರಮುಖ ಧಾರ್ಮಿಕ ಹಾಗೂ ಶೈಕ್ಷಣಿಕ ಕೇಂದ್ರವಾಗಿತ್ತು. ಶತಮಾನಗಳ ಹಿಂದೆ ನಿರ್ಮಿಸಿರುವ ಇಲ್ಲಿನ ಬ್ರಹ್ಮಜಿನಾಲಯ, ನಾಗನಾಥ, ನೀಲಕಂಠೇಶ್ವರ, ವಿದ್ಯಾಶಂಕರ, ನಾರಾಯಣ, ಕಲ್ಮೇಶ್ವರ, ಕಾಶಿವಿಶ್ವನಾಥ, ನನ್ನೇಶ್ವರ, ಹಾಲುಗುಂಡಿ ಬಸವೇಶ್ವರ, ಮಲ್ಲಿಕಾರ್ಜುನ, ವಿರೂಪಾಕ್ಷೇಶ್ವರ, ಕುಂಬಾರೇಶ್ವರ, ವೀರಭದ್ರೇಶ್ವರ, ಚಂದ್ರಮೌಳೇಶ್ವರ ಸೇರಿದಂತೆ ಹಲವು ಗುಡಿಗಳು ದೇಶದ ವಾಸ್ತುಶಿಲ್ಪ, ಧಾರ್ಮಿಕ ಹಾಗೂ ಸಾಂಸ್ಕೃತಿ ವೈಭವವನ್ನು ಸಾರುತ್ತವೆ.

ಇಲ್ಲಿ ನೂರೊಂದು ದೇವಸ್ಥಾನಗಳಿದ್ದವು ಎನ್ನಲಾಗುತ್ತಿದ್ದರೂ, ಸದ್ಯ 30ಕ್ಕಿಂತ ಹೆಚ್ಚು ದೇಗುಲಗಳು ಕಾಣಸಿಗದು. ಹಲವು ದೇಗುಲಗಳು ಇತಿಹಾಸದ ಗರ್ಭದಲ್ಲಿ ಹುದುಗಿ ಹೋಗಿದ್ದರೆ, ಬೆರಳೆಣಿಕೆಯಷ್ಟು ಸ್ಥಳೀಯರ ನಿರ್ಲಕ್ಷ್ಯದಿಂದ ಹಾಳಾಗಿವೆ. ಹೀಗಾಗಿ ಹಂಪಿ ಮಾದರಿಯಲ್ಲಿ ಪ್ರತ್ಯೇಕವಾಗಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು. ಸ್ಮಾರಕಗಳ ರಕ್ಷಣೆ, ಅಭಿವೃದ್ಧಿ, ಉತ್ಖನನದೊಂದಿಗೆ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕು. ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸಬೇಕು ಎಂಬುದು ಜನಾಗ್ರಹವಾಗಿದೆ.

ಸರಕಾರಕ್ಕೆ ಅನುದಾನ ವಾಪಸ್‌: ಸ್ಥಳೀಯರ ಒತ್ತಾಸೆಯಂತೆ 2017ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರವನ್ನು ಘೋಷಿಸಿದರು. ಬಳಿಕ ಪ್ರಾಧಿಕಾರ ರಚನೆ ಕುರಿತು ಕರಡು ರೂಪಿಸಿ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಅದರಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆ, ಜಿಲ್ಲಾ ಉಸ್ತುವಾರಿ ಸಚಿವರ ಉಪಾಧ್ಯಕ್ಷತೆ, ಸ್ಥಳೀಯ ಶಾಸಕರು, ಲಕ್ಕುಂಡಿ ಜಿಪಂ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳನ್ನೊಳಗೊಂಡ 18 ಸದಸ್ಯರ ಸಮಿತಿಗೆ ಸರಕಾರ ಒಪ್ಪಿಗೆ ಸೂಚಿಸಿತ್ತು. ಈಗಾಗಲೇ ಪ್ರಾಧಿಕಾರದ ಭೌಗೋಳಿಕ ವ್ಯಾಪ್ತಿ ಗುರುತಿಸಲಾಗಿದೆ.

ವಿವಿಧ 7 ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿ 3 ಕೋಟಿ ರೂ. ಬಿಡುಗಡೆಗೆ ಸರಕಾರ ಆಡಳಿತಾತ್ಮಕ ಮಂಜೂರಾತಿ ನೀಡಿ, ಮೊದಲ ಕಂತಿನಲ್ಲಿ 50 ಲಕ್ಷ ರೂ. ಬಿಡುಗಡೆ ಮಾಡಿತ್ತು. ಆದರೆ, ಪ್ರಾಧಿಕಾರಕ್ಕೆ ಪ್ರತ್ಯೇಕ ಆಯುಕ್ತರು, ಸಿಬ್ಬಂದಿ ಹಾಗೂ ಕಚೇರಿಯನ್ನು ಒದಗಿಸಲಿಲ್ಲ. ಪ್ರಾಧಿಕಾರ ರಚನೆಗೆ ಸರಕಾರ ಮಸೂದೆಯನ್ನೂ ಅಂಗೀಕರಿಸಿಲ್ಲ. ಹೀಗಾಗಿ ಅನುದಾನ ಬಳಕೆಯಾಗದೇ ಸರಕಾರಕ್ಕೆ ಹಿಂದಿರುಗಿದೆ ಎನ್ನುತ್ತಾರೆ ಮೈಸೂರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಉನ್ನತಾಧಿಕಾರಿಗಳು.

ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಘೊಷಣೆಯಾಗಿ ವರ್ಷಗಳೇ ಕಳೆದರೂ ಕಾರ್ಯರೂಪಕ್ಕೆ ಬಂದಿಲ್ಲ. ಒಟ್ಟಾರೆ, ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಗಿದೆ ಸ್ಥಿತಿ.

ಲಕ್ಕುಂಡಿಯ ಮೂರ್ತ, ಅಮೂರ್ತ ಹಾಗೂ ನೈಸಗಿಕ ಪರಂಪರೆಯನ್ನು ಉದ್ದೇಶಿತ ಪ್ರಾ ಧಿಕಾರ ವ್ಯಾಪ್ತಿಯಲ್ಲಿ ಗುರುತಿಸಿದೆ. ಆದರೆ, ಪ್ರಾಧಿಕಾರಕ್ಕೆ ಸಂಬಂಧಿಸಿ ಮಸೂದೆ ಅಂಗೀಕಾರವಾಗಿಲ್ಲ. ಪ್ರಾಧಿಕಾರ ರಚನೆಯಾಗದ
ಕಾರಣ ಅನುದಾನ ವಾಪಸ್‌ ಆಗಿದೆ. – ನಿಮರ್ಲಾ ಮಠಪತಿ, ನಿರ್ದೇಶಕರು, ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.