ಶಾಲಾ ಆವರಣದಲ್ಲಿ ಭೂ ಕುಸಿತ
Team Udayavani, Aug 30, 2020, 3:27 PM IST
ಗದಗ: ನಗರದ ಐತಿಹಾಸಿಕ ಶ್ರೀ ವೀರನಾರಾಯಣ ದೇವಸ್ಥಾನ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂ. 2ರ ಆವರಣದಲ್ಲಿ ಭೂ ಕುಸಿತ ಉಂಟಾಗಿದ್ದು, ಶಾಲೆ ರಜೆಯಿಂದಾಗಿ ಅನಾಹುತ ತಪ್ಪಿದಂತಾಗಿದೆ.
ಶುಕ್ರವಾರ ಸಂಜೆಯಿಂದ ಶನಿವಾರ ಬೆಳಗಿನ ಅವಧಿಯಲ್ಲಿ ಭೂ ಕುಸಿತ ಉಂಟಾಗಿದೆ ಎನ್ನಲಾಗಿದೆ. ಸುಮಾರು 10 ಅಡಿಗಿಂತ ಹೆಚ್ಚು ಆಳಕ್ಕೆ ಕುಸಿತವಾಗಿದೆ. ಭೂ ಕುಸಿತದ ಸ್ಥಳ ಹೊಂಡದಂತೆ ಗೋಚರಿಸುತ್ತಿದ್ದು, ನಾಲ್ಕೈದು ಅಡಿಗೆ ನೀರು ಕಾಣಿಸುತ್ತಿರುವುದು ಶಾಲೆಯ ಶಿಕ್ಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ನಗರಸಭೆ ಅಭಿಯಂತರ ಬಂಡಿವಡ್ಡರ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಭೂ ಕುಸಿತ ಉಂಟಾದ ಸ್ಥಳವನ್ನು ಮುಚ್ಚಿಸುವಂತೆ ಇದೇ ವೇಳೆ ಶಾಲೆಯ ಶಿಕ್ಷಕರು ಮನವಿ ಮಾಡಿದರು. ನವೆಂಬರ್‌ನಲ್ಲಿ ಇದೇಪ್ರದೇಶದ ಅಕ್ಕಪಕ್ಕದ ಎರಡು ಮನೆಗಳಲ್ಲಿ ಭೂ ಕುಸಿತ ಉಂಟಾಗಿ, ಅಂತರ್ಜಲ ಮೇಲಕ್ಕೆ ಬಂದಿತ್ತು. ಅದೇ ಘಟನೆ ಇದೀಗ ಮರುಕಳಿಸಿರುವುದು ಅವಳಿ ನಗರದ ಜನತೆಯಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.