ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವಿರೋಧಿ
Team Udayavani, Jun 15, 2020, 4:24 PM IST
ಗಜೇಂದ್ರಗಡ: ರೈತರ ಪರವಾದ ಕಾಯ್ದೆಗಳನ್ನು ತರುವುದರ ಬದಲು ಬಂಡವಾಳ ಶಾಹಿಗಳ ತಾಳಕ್ಕೆ ತಕ್ಕಂತೆ ರಾಜ್ಯ ಸರ್ಕಾರ ಕುಣಿಯುವ ಮೂಲಕ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ತರುತ್ತಿರುವುದು ಖಂಡನೀಯ. ಕೂಡಲೇ ಸರ್ಕಾರ ಕಾಯ್ದೆಯನ್ನು ಕೈ ಬಿಡಬೇಕು ಎಂದು ತಾಪಂ ಸದಸ್ಯ, ರೈತ ಮುಖಂಡ ಶಶಿಧರ ಹೂಗಾರ ಒತ್ತಾಯಿಸಿದರು.
ರಾಜೂರ ಗ್ರಾಮದ ಸುರೇಶಗೌಡ ಪಾಟೀಲ ಅವರ ಜಮೀನಿನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರ ರೈತ ಪರವಾದ ಸರ್ಕಾರ ಎಂದು ಹೇಳುತ್ತಾರೆ. ಆದರೆ ಅನ್ನ ನೀಡುವ ರೈತರ ಭೂಮಿಯನ್ನು ಉಳ್ಳವರು ಕಸಿದುಕೊಳ್ಳುವಂತಹ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದ್ದಾರೆ. ಇದ್ಯಾವ ರೈತರ ಪರವಾದ ಸರ್ಕಾರ ಎಂದು ಪ್ರಶ್ನಿಸಿದರು.
ರೈತ ಮುಖಂಡ ವಿ.ಬಿ. ಹಪ್ಪಳ ಮಾತನಾಡಿ, ಕೃಷಿ ಭೂಮಿಯನ್ನು ಉಳ್ಳವರು, ಕಾರ್ಪೊರೇಟ್ ಉದ್ಯಮಿಗಳು ಮತ್ತು ಬಲಾಡ್ಯ ಉದ್ಯಮಿಗಳು ಮನಸೋ ಇಚ್ಛೇ ಖರೀದಿ ಮಾಡಿ, ರೈತರನ್ನು ಬೀದಿಗೆ ತಳ್ಳುವ ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಪ್ರಗತಿ ಪರ ರೈತ ಮುಖಂಡರಾದ ಸುರೇಶಗೌಡ ಪಾಟೀಲ, ಮುದಿಯಪ್ಪ ಜೋಗಿನ, ಈಶಪ್ಪ ಗೂಳಿ, ಶರಣಪ್ಪ ಹಾದಿಮನಿ, ಹನಮಂತ ಹಿತ್ತಲಮನಿ, ಪ್ರಭು ಹುಡೇದ, ಶೇಖಪ್ಪ ಮಳಗಿ, ಕಳಕಪ್ಪ ಮಾಗಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.