ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಈ ಕ್ರೀಡಾಕೂಟದಲ್ಲಿ ಸಾಧನೆಗೈದವರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ.

Team Udayavani, Sep 21, 2022, 6:26 PM IST

ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಗದಗ: ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ಸದೃಢ ಆರೋಗ್ಯ ಹೊಂದಿ ಸಶಕ್ತ ರಾಷ್ಟ್ರ ನಿರ್ಮಾಣ ಮಾಡುವುದರ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಬೇಕೆಂದು ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಪ್ಪ ಪಲ್ಲೇದ ಹೇಳಿದರು.

ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜರುಗಿದ ಬೆಳಗಾವಿ ವಿಭಾಗ ಮಟ್ಟದ ದಸರಾ ಸಿ.ಎಂ. ಕಪ್‌ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ ಅನುದಾನ ಒದಗಿಸುತ್ತಿದೆ. ಜೊತೆ ಜೊತೆಗೆ ನೂತನ ಕ್ರೀಡಾ ನೀತಿ ಜಾರಿಗೊಳಿಸುವುದರ ಮೂಲಕ ಕ್ರೀಡಾಕೂಟಗಳಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದರು.

ಯುವ ಸಂಘಗಳ ಒಕ್ಕೂಟದ ಜಿಲ್ಲಾ ಧ್ಯಕ್ಷ ರವಿಕಾಂತ ಅಂಗಡಿ ಕಾರ್ಯಕ್ರಮ ಉದ್ಘಾಟಿಸಿ, ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿ, ಇಂದಿನ ಯುವ ಜನತೆ ಮೊಬೈಲ್‌ ಗೀಳಿನಿಂದ ಹೊರಬಂದು ಕ್ರೀಡೆಗಳಲ್ಲಿ ಭಾಗವಹಿಸುವುದರ ಜೊತೆಗೆ ಉತ್ತಮ ಆರೋಗ್ಯ ಪಡೆದು, ಸಶಕ್ತ ರಾಷ್ಟ್ರ ನಿರ್ಮಾಣ ಮಾಡಲು ಮಂದಾಗಬೇಕೆಂದರು.

ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠಲ ಜಾಬಗೌಡರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಗದಗ ಜಿಲ್ಲಾ ಮಟ್ಟದಲ್ಲಿ ಈಗಾಗಲೇ ದಸರಾ ಕ್ರೀಡಾಕೂಟವನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಸಾಧನೆಗೈದವರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ.

ಬೆಳಗಾವಿ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಈ ಭಾಗದ 7 ಜಿಲ್ಲೆಗಳ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಗದಗ ಜಿಲ್ಲೆಯಲ್ಲಿ ವಿಭಾಗ ಮಟ್ಟದ ದಸರಾ ಸಿ.ಎಂ. ಕ್ರೀಡಾಕೂಟ ಏರ್ಪಡಿಸಿದ್ದು, ಖೋಖೋ, ಟೆಕ್ವಾಂಡೋ ಹಾಗೂ ನೆಟ್‌ಬಾಲ್‌ ಸ್ಪರ್ಧೆಗಳು ನಡೆಯಲಿವೆ ಎಂದರು. ನಿರ್ಣಾಯಕರಾಗಿ ಅನುಭವಿಗಳನ್ನು ನಿಯೋಜಿಸಲಾಗಿದೆ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿದ್ದು, ನಿರ್ಣಾಯಕರು ಪಕ್ಷಪಾತ ಮಾಡದೇ ಆರೋಗ್ಯಯುತ ಕ್ರೀಡಾ ಸ್ಫೂರ್ತಿ ಮೆರೆ
ಯುವ ಉತ್ತಮ ನಿರ್ಣಯ ನೀಡಲಿ ದ್ದಾರೆ ಎಂಬ ವಿಶ್ವಾಸ ಹೊಂದಿದ್ದೇವೆ.

ಕ್ರೀಡಾಪಟುಗಳಿಗೆ ನಿರ್ಣಾಯಕರ ತೀರ್ಮಾನದ ಕುರಿತು ಅನುಮಾನಗಳಿದ್ದಲ್ಲಿ ತಕ್ಷಣ ಲಿಖಿತವಾಗಿ ಸಲ್ಲಿಸುವ ಮೂಲಕ ಪರಿಹಾರ ಕಂಡುಕೊಳ್ಳಬೇಕು. ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಎಲ್ಲ ಸ್ಪರ್ಧಾಳುಗಳಿಗೆ ಶುಭವಾಗಲಿ ಎಂದರು.

ವಾರ್ತಾಧಿ ಕಾರಿ ವಸಂತ ಮಡೂರ, ನಿರ್ಣಾಯಕರಾದ ಶ್ರೀಪಾದ ರವಿರಾವ್‌, ಪ್ರಭಾಕರ ಶೇಡಬಾಳ, ಪರಪ್ಪ ಕ್ಷೇತ್ರತೇಜ, ವೈ.ಎಫ್‌. ಕಲಕಂಬಿ, ವೈ.ಕೆ. ಚೌಡಾಪುರ, ಎಚ್‌.ಜಿ. ಕಾಂಬಳೇಕರ, ಎಸ್‌.ಬಿ. ಪೂಜಾರ, ಎಸ್‌.ಬಿ. ಆಲೂರ ಇದ್ದರು.

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.