Laxmeshwar ಮಗನ ಹಠಕ್ಕೆ ಮುಸ್ಲಿಮರ ಮನೆಯಲ್ಲಿ ಗಣೇಶ ಹಬ್ಬ !
ಗದಗ ಜಿಲ್ಲೆ ಸೂರಣಗಿ ಗ್ರಾಮದಲ್ಲಿ ವಿಶೇಷ ಘಟನೆ
Team Udayavani, Sep 8, 2024, 11:01 PM IST
ಲಕ್ಷ್ಮೇಶ್ವರ: ಮುಸ್ಲಿಂ ವ್ಯಕ್ತಿಯೊಬ್ಬರು ಮಗನ ಆಸೆ, ಪ್ರೀತಿ, ಹಠದಿಂದ ಮನೆಯಲ್ಲಿ ಗಣೇಶ ಚತುರ್ಥಿಯಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮುಸ್ತಾಫ್ ಮಾಬುಸಾಬ್ ಕೋಲ್ಕಾರ ಹಾಗೂ ಯಾಸ್ಮಿನಾಬಾನು ದಂಪತಿಗೆ ಐವರು ಮಕ್ಕಳು. ಕೊನೆಯ ಮಗ ಮೂರು ವರ್ಷದ ಹಜರತಲಿಗೆ ಗಣೇಶ ಮೂರ್ತಿಯೆಂದರೆ ಪ್ರೀತಿ. ಗಣೇಶನನ್ನು ಮನೆಗೆ ತೆಗೆದುಕೊಂಡು ಹೋಗಬೇಕು, ಎಲ್ಲರಂತೆ ಪೂಜಿಸಬೇಕು, ಪಟಾಕಿ ಹೊಡೆಯಬೇಕು, ಕುಣಿದು ಕುಪ್ಪಳಿಸಬೇಕೆಂಬ ಹಂಬಲ. ಈ ಬಗ್ಗೆ ತಂದೆ-ತಾಯಿ ಹತ್ತಿರ ಕೇಳಿ ಅತ್ತು ಕರೆದು ಹಠ ಮಾಡಿದ್ದರೂ ತಂದೆ ಹೇಗೋ ಸಮಾಧಾನ ಮಾಡಿ ಮಾತು ಮರೆಸಿದ್ದರು. ಆದರೆ ಗಣೇಶ ಚತುರ್ಥಿ ದಿನ ಎಲ್ಲರೂ ಮನೆಗೆ ಗಣೇಶ ಮೂರ್ತಿ ತರುವುದನ್ನು ಗಮನಿಸಿದ ಹಜರತಲಿ ಅಣ್ಣನೊಂದಿಗೆ ಗಣೇಶನ ಮೂರ್ತಿ ಮನೆಗೆ ತಂದಿದ್ದು, ತಂದೆ-ತಾಯಿ ಮಗನ ಬಗ್ಗೆ ಬೇಸರಿಸಿಕೊಳ್ಳದೆ ಗಣೇಶನ ಮೂರ್ತಿಯನ್ನು ಮನೆಯಲ್ಲಿ ಪ್ರತಿಷ್ಠಾಪಿಸಿ ಪೂಜಿಸಿದ್ದಾರೆ.
ಮಗ ಹಜರತಲಿಗೆ ಗಣೇಶನ ಮೂರ್ತಿ ಎಂದರೆ ತುಂಬಾ ಇಷ್ಟ. ದೇವರೇ ಮನೆಗೆ ಬಂದಂತಾಗಿದ್ದು ಶ್ರದ್ಧಾ-ಭಕ್ತಿಯಿಂದ ಗಣೇಶನ ಮೂರ್ತಿ ಪೂಜಿಸುತ್ತೇವೆ. ಪ್ರತಿ ವರ್ಷವೂ ನಮ್ಮ ಮನೆಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸುತ್ತೇವೆ ಎಂದು ಹಜರತಲಿ ತಂದೆ ಮುಸ್ತಫಾ, ತಾಯಿ ಯಾಸ್ಮಿನಾಬಾನು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.