![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 11, 2019, 10:50 AM IST
ಮುಂಡರಗಿ: ಜ| ತೋಂಟದಾರ್ಯ ಪ್ರಥಮ ಕಾಲೇಜಿನಲ್ಲಿ ಆರು ಕೊಠಡಿ ನಿರ್ಮಾಣ ಕಾಮಗಾರಿಗೆ ಸಂಸದ ಶಿವಕುಮಾರ ಉದಾಸಿ ಭೂಮಿಪೂಜೆ ನೆರವೇರಿಸಿದರು.
ಮುಂಡರಗಿ: ರಾಜ್ಯದಲ್ಲಿ ಕಳೆದ ಸಾಲಿಗಿಂತಲೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ತರಗತಿಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಅರ್ಧದಷ್ಟು ಕಡಿಮೆಯಾಗಿದೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಅಧ್ಯಯನ ಸಮಿತಿ ರಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಆಗ್ರಹಿಸಿದರು.
ಪಟ್ಟಣದ ಜ| ತೋಂಟದಾರ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿರುವ ಪದವಿ ಕಾಲೇಜಿನ ಕಲಾ, ವಾಣಿಜ್ಯ, ವಿಜ್ಞಾನ ವಿಷಯಗಳ ಪದವಿಗೆ ಐದು ವರ್ಷಗಳಲ್ಲಿ ಸರಾಸರಿ ಪ್ರತಿ ವರ್ಷ ಮೂರು ಲಕ್ಷದಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದರು. ಆದರೆ ಈ ವರ್ಷ ಪದವಿ ತರಗತಿಗೆ ದಾಖಲಾತಿ ಪ್ರಮಾಣ ಅರ್ಧಕ್ಕೆ ಇಳಿದಿದೆ. ಸುಮಾರು 1.59 ಲಕ್ಷ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪಡೆದಿದ್ದಾರೆ. ಆದ್ದರಿಂದ ಉನ್ನತ ಶಿಕ್ಷಣ ಖಾತೆ ಸಚಿವರು ಈ ಕುರಿತು ಅಧ್ಯಯನ ಮಾಡಲು ಸಮಿತಿ ರಚಿಸಬೇಕು. ಕಾಂಗ್ರೆಸ್ -ಜೆಡಿಎಸ್ ಸಮಿಶ್ರ ಸರಕಾರದ ಕೊನೆ ದಿನಗಳಲ್ಲಿ ಒಂದು ಸಾವಿರದಷ್ಟು ಪದವಿ ಕಾಲೇಜಿನ ಉಪನ್ಯಾಸಕರನ್ನು ಬೇರೆಡೆಗೆ ನಿಯೋಜನೆ ಮಾಡಲಾಗಿದೆ. ರಾಜ್ಯದಲ್ಲಿ ಎರಡು ಸಾವಿರದಷ್ಟು ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ನಮ್ಮ ಸರಕಾರದ ಅವಧಿಯಲ್ಲಿ ತುಂಬುವ ಪ್ರಯತ್ನ ಮಾಡಲಾಗುವುದು. ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕ ಒದಗಿಸಲಾಗುವುದು ಎಂದು ಹೇಳಿದರು.
ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಕೇಂದ್ರ ಸರಕಾರ ತರಲು ಇಚ್ಚಿಸಿರುವ ಹೊಸ ಶಿಕ್ಷಣ ನೀತಿಯಲ್ಲಿ ಕಂಠ ಪಾಠ ಮಾಡುವ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯಾಗಲಿದೆ. ಹೊಸ ಶಿಕ್ಷಣ ನೀತಿ ಶಿಕ್ಷಣದೊಂದಿಗೆ ತಂತ್ರಜ್ಞಾನ ಜೋಡಿಸುವ, ಜಾಗತೀಕ ವಿದ್ಯಮಾನಕ್ಕೆ ಅನುಗುಣವಾಗಿ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅಮೂಲಾಗ್ರ ಬದಲಾವಣೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಶಾಸಕ ರಾಮಣ್ಣ ಲಮಾಣಿ ಮಾತನಾಡಿ, ಪದವಿ ಕಾಲೇಜಿನಲ್ಲಿ 1.60 ಕೋಟಿ ರೂ. ವೆಚ್ಚದಲ್ಲಿ ಆರು ಕೊಠಡಿ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿದೆ. ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ಅನುದಾನ ಹಾಕಿ ಕಾಲೇಜು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಆರ್.ಎಲ್. ಪೊಲೀಸ್‌ಪಾಟೀಲ ಮಾತನಾಡಿದರು. ಹೇಮಗಿರೀಶ ಹಾವಿನಾಳ, ಕರಬಸಪ್ಪ ಹಂಚಿನಾಳ, ಶ್ರೀನಿವಾಸ ಉಪ್ಪಿನಬೆಟಗೇರಿ, ಆನಂದ ಬನ್ನಿಕೊಪ್ಪ, ದೇವಪ್ಪ ಕಂಬಳಿ, ಆರ್.ಎಂ. ತಪ್ಪಡಿ, ಪ್ರದೀಪ ಗುಡದಪ್ಪನವರ, ಮಹಾಂತೇಶ ಕೊರಡಕೇರಿ, ನಾಗೇಶ ಹುಬ್ಬಳ್ಳಿ, ಎಚ್.ಎಂ. ಹೊಸಗಾಣಿಗೇರ, ಪ್ರಕಾಶ ಪಾಟೀಲ, ಎಸ್.ವಿ. ಪಾಟೀಲ, ಬುಡ್ಡಾ ಹೊಸಮನಿ ಇದ್ದರು. ಪ್ರಾಚಾರ್ಯ ಎಸ್.ಆರ್. ಚಿಗರಿ ಸಂಸದರು, ಉಭಯ ಶಾಸಕರಿಗೆ ಮನವಿ ಸಲ್ಲಿಸಿದರು. ಕಾವೇರಿ ಕಾರ್ಯಕ್ರಮ ನಿರೂಪಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
You seem to have an Ad Blocker on.
To continue reading, please turn it off or whitelist Udayavani.