13 ಜಿಲ್ಲೆಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಲಿ
Team Udayavani, Aug 14, 2018, 6:35 AM IST
ಗದಗ: ಗದಗ ಜಿಲ್ಲೆ ಸೇರಿ ರಾಜ್ಯದ 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬರಗಾಲ ಆವರಿಸಿದೆ. ಈ ಹಿನ್ನೆಲೆಯಲ್ಲಿ 13 ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಮುಂಗಾರು ಆರಂಭಕ್ಕೂ ಮುನ್ನ ಮಳೆ ಅಬ್ಬರಿಸಿತ್ತು. ಆದರೆ, ಕಳೆದ ಜೂನ್ ಆರಂಭದಿಂದ ಈವರೆಗೂ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಹೀಗಾಗಿ ಮಳೆ ಕೊರತೆಯಿರುವ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಿಸಬೇಕು ಎಂದರು.
ಖರೀದಿ ಕೇಂದ್ರ :
ಮಳೆ ಕೊರತೆ ನಡುವೆಯೂ ಹೆಸರು ಬೆಳೆ ಬಂದಿದ್ದು, ಮಾರುಕಟ್ಟೆಯಲ್ಲೀಗ ಕೇವಲ 4ಸಾವಿರ ರೂ.ಗಳಲ್ಲಿ ಮಾರಾಟಗೊಳ್ಳುತ್ತಿದೆ. ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿಗದಿಗೊಳಿಸಿರುವ 6,975 ರೂ. ಕನಿಷ್ಠ ಬೆಂಬಲ ಬೆಲೆಯಲ್ಲಿ ತಕ್ಷಣವೇ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಜಿಲ್ಲೆಗೆ 2017ರ ಮುಂಗಾರಿಗೆ 55 ಕೋಟಿ ರೂ. ಗಳು ಬಿಡುಗಡೆಯಾಗಿದ್ದು, ರೈತರ ಅನುಕೂಲಕ್ಕಾಗಿ ಸರ್ಕಾರ ಜಿಲ್ಲೆಗೊಂದು ಫಸಲ್ ಭಿಮಾ ಯೋಜನೆಯ ಸೇವಾ ಕೇಂದ್ರ ಆರಂಭಿಸಬೇಕೆಂದು ಹೇಳಿದರು.
ಮರಳಿಗಾಗಿ ಪರದಾಟ:
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅ ಧಿಕಾರಕ್ಕೆ ಬಂದು ಮೂರು ತಿಂಗಳು ಕಳೆದರೂ ಮರಳು ನೀತಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಇದರಿಂದ ಅಕ್ರಮ ಮರಳು ಸಾಗಾಟ ಹೆಚ್ಚಿದೆ. ಬಡವರು, ಮಧ್ಯಮ ವರ್ಗದ ಜನರು ಮರಳು ಸಿಗದೇ ಪರದಾಡುವಂತಾಗಿದೆ. ಕೂಡಲೇ ನೂತನ ಮರಳು ನೀತಿ ಜಾರಿಗೊಳಿಸಬೇಕು ಎಂದರು.
ಜನರಿಗೆ ಅನುಕೂಲ:
ಇತ್ತೀಚೆಗೆ ಸಂಸತ್ತಿನಲ್ಲಿ ಅಂಗೀಕರಿಸಿರುವ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನದತ್ತ ಅ ಧಿಕಾರ ನೀಡಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಾರೆ. 1999ರಿಂದ ಹೋರಾಟ ನಡೆಯುತ್ತಿದ್ದರೂ, ಯಾವುದೇ ಸರ್ಕಾರಗಳು ಸ್ಪಂದಿಸಿರಲಿಲ್ಲ. ಆದರೆ, ಎನ್‌ಡಿಎ ನೇತೃತ್ವದ ಸರ್ಕಾರದ ತೀರ್ಮಾನದಿಂದ 60 ಕೋಟಿ ಜನತೆಗೆ ಅನುಕೂಲವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.