ಚಿಂಚಲಿ ಗ್ರಾಮದ ಗ್ರಂಥಾಲಯ ಕಟ್ಟಡ ಅರ್ಧಂಬರ್ಧ
Team Udayavani, Nov 4, 2019, 2:38 PM IST
ಮುಳಗುಂದ: ಸಮೀಪದ ಚಿಂಚಲಿ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಹೊಸ ಕಟ್ಟಡ ಭಾಗ್ಯ ದೊರೆತಿದ್ದರೂ ಕಾಮಗಾರಿ ಅರ್ಧಕ್ಕೆ ನಿಂತಿದೆ. ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕಾಗಿ ಗ್ರಾಮ ವಿಕಾಸ ಯೋಜನೆಯಡಿ ಶೇ.12 ಅನುದಾನ ಮೀಸಲಿಟ್ಟು ಹೊಸ ಸುಸಜ್ಜಿತ ಕಟ್ಟಡ ನಿರ್ಮಿಸಬೇಕೆಂಬ ಯೋಜನೆ ಉದ್ದೇಶ ಈಡೇರದೇ ಅರ್ಧಕ್ಕೆ ನಿಂತ ಕಟ್ಟಡವೀಗ ಅನೈತಿಕ ಚಟುವಟಿಕೆಗಳ ತಾಣವಾಗಿದೆ.
ಸ್ಥಳೀಯ ಗ್ರಾಮ ಪಂಚಾಯತಿ ಜಾಗೆಯಲ್ಲಿ ಸುಮಾರು 12 ಲಕ್ಷ ರೂ.ಗಳ ವೆಚ್ಚದಲ್ಲಿ ಕಟ್ಟಡ ಪ್ರಾರಂಭಿಸಲು ಯೋಜನೆ ರೂಪಿಸಿತ್ತಾದರೂ ಮೀಸಲಾದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿದ್ದರಿಂದ ಕಟ್ಟಡ ಅರ್ಧಂಬರ್ಧವಾಗಿದೆ. ಅಲ್ಲದೆ ಕಾಮಗಾರಿ ಕಳಪೆಯಾಗಿದ್ದರಿಂದ ಎಲ್ಲವೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. 2001ರಿಂದ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳ ಕಟ್ಟಡದ ಸಣ್ಣ ಕೋಣೆಯಲ್ಲೇ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರ ಇಲ್ಲಿಯೂ ನೆಲೆ ಕಾಣದೆ ಇಂದು ಗ್ರಾಮದ ಸಂಘವೊಂದರ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿ 350 ಜನ ಓದುಗ ಸದಸ್ಯರಿದ್ದು, 3093 ಪುಸ್ತಕಗಳಿವೆ. ಮೂರು ಗ್ರಾಮಗಳ ನೂರಾರು ಯುವಕರು, ವಿದ್ಯಾರ್ಥಿಗಳು ಈ ಗ್ರಂಥಾಲಯದ ಸಹಾಯದಿಂದ ಸ್ವಾವಲಂಬಿಗಳಾಗಿದ್ದಾರೆ. ಉನ್ನತ ಹುದ್ದೆಗೇರಲು ಈ ಗ್ರಂಥಾಲಯ ಅನುಕೂಲವಾಗಿದೆ.
ಚಿಂಚಲಿ ಗ್ರಾಪಂ ವತಿಯಿಂದ ಗ್ರಂಥಾಲಯ ಕಟ್ಟಡಕ್ಕೆ ಜಾಗೆ ಮಂಜೂರಾಗಿದ್ದು, ಮೂರು ಗ್ರಾಮಗಳಿಗೆ ಅಗತ್ಯವಾಗಿ ಬೇಕಾದ ಸುಸಜ್ಜಿತ ಕಟ್ಟಡವಿಲ್ಲದೆ ಓದುಗರಿಗೆ ನಿರಾಶೆಯಾಗಿದೆ. – ಮಂಜುನಾಥ ಹೂಗಾರ, ಗ್ರಂಥಪಾಲಕ
ಚಿಂಚಲಿ ಗ್ರಂಥಾಲಯ ಹೊಸ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯ ಗ್ರಾಪಂ ಸೇರಿದಂತೆ ಯಾರೊಬ್ಬರೂ ಗಮನ ಹರಿಸುತ್ತಿಲ್ಲ. ಕೂಡಲೇ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕು. – ರಾಜು ನದಾಫ, ಓದು
-ಎಂ.ಎಂ. ನೀಲಗುಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.