ರಸ್ತೆಗಳಲ್ಲಿ ಹೊಂಡಗಳದ್ದೇ ಕಾರಬಾರು

•ಜನರ ನಿದ್ದೆಗೆಡಿಸಿದ ಜಿಟಿಜಿಟಿ ಮಳೆ •ರಸ್ತೆಗಳನ್ನೇ ನುಂಗಿ ಹಾಕಿದ ಚರಂಡಿ ಕಾಮಗಾರಿ

Team Udayavani, Aug 7, 2019, 5:09 PM IST

gadaga-tdy-4

ಗದಗ: ಬೆಟಗೇರಿಯ ಕನ್ಯಾಳ ಹಗಸಿ ಭಾಗದಲ್ಲಿ ಒಳಚರಂಡಿ ಕಾಮಗಾರಿಗಳಿಂದಾಗಿ ರಸ್ತೆಗಳು ಹದಗೆಟ್ಟಿವೆ.

ಗದಗ: ಅವಳಿ ನಗರದಲ್ಲಿ ನಡೆದ 24*7 ಹಾಗೂ ಒಳಚರಂಡಿ ಕಾಮಗಾರಿಗಳು ಸುಸ್ಥಿತಿಯಲ್ಲಿದ್ದ ರಸ್ತೆಗಳನ್ನೇ ನುಂಗಿ ಹಾಕಿದೆ. ಪರಿಣಾಮ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಇಲ್ಲಿನ ಗಂಗಿಮಡಿ ಹಾಗೂ ಬೆಟಗೇರಿಯ ಒಕ್ಕಲಗೇರಿ ಭಾಗದ ರಸ್ತೆಗಳು ಅಕ್ಷರಶಃ ಹೊಂಡಗಳಾಗಿ ಪರಿವರ್ತನೆಗೊಂಡಿದೆ. ಹದಗೆಟ್ಟ ರಸ್ತೆಗಳಲ್ಲಿ ವಾಹನ ಸವಾರರು ಹಾಗೂ ಪಾದಚಾರಿಗಳ ಸಂಚಾರಕ್ಕೆ ಪರದಾಡುವಂತಾಗಿದೆ. ಕಾಲಿಟ್ಟರೆ ಸಾಕು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಇಲ್ಲಿನ ಬೆಟಗೇರಿಯ ಕನ್ನಾಳಹಗಸಿ, ಒಕ್ಕಲಿಗರ ಓಣಿಯಲ್ಲಿ ಈ ಹಿಂದೆ ಸಂಪೂರ್ಣ ಡಾಂಬರ್‌ ಹಾಗೂ ಸಿಸಿ ರಸ್ತೆ ನಿರ್ಮಿಸಲಾಗಿತ್ತು. ಆದರೆ, ಒಂದು ವರ್ಷದಿಂದ ಹಿಂದೆ ಆರಂಭಗೊಂಡಿದ್ದ 24*7 ಕುಡಿಯುವ ನೀರಿನ ಯೋಜನೆ ಹಾಗೂ ಒಳಚರಂಡಿ ಕಾಮಗಾರಿಗಳು ಈ ಭಾಗದ ಜನರ ನಿದ್ದೆಗೆಡಿಸಿದ್ದವು. ಆಮೆಗತಿಯಲ್ಲಿ ತಿಂಗಳು ಕಾಲ ನಡೆದ ಕಾಮಗಾರಿಗಳಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು.

ಆದರೆ, ಕಾಮಗಾರಿ ಪೂರ್ಣಗೊಂಡ ಬಳಿಕ ಮತ್ತೂಮ್ಮೆ ರಸ್ತೆ ನಿರ್ಮಿಸದೇ ಬೇಕಾಬಿಟ್ಟಿಯಾಗಿ ಮುಚ್ಚಿದ್ದರಿಂದ ರಸ್ತೆಯುದ್ದಕ್ಕೂ ಬೃಹತ್‌ ಗುಂಡಿಗಳು ಬಿದ್ದಿವೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ರಸ್ತೆಗಳ ಗುಂಡಿಗಳಲ್ಲಿ ನೀರು ತುಂಬಿದ್ದು, ಸಣ್ಣ ಹೊಂಡಗಳಾಗಿ ಪರಿವರ್ತನೆಗೊಂಡಿವೆ. ಗುಂಡಿಗಳ ಆಳ ಅಂದಾಜಿಸಲಾಗದೇ ವಾಹನ ಸವಾರರು ಪರದಾಡುವಂತಾಗಿದೆ. ಈ ನಡುವೆ ವಾಹನಗಳ ನಿಯಂತ್ರಣ ತಪ್ಪಿ, ಕೆಲವರು ಜಾರಿ ಬಿದ್ದು ಗಾಯಗೊಂಡಿದ್ದಾರೆ. ರಸ್ತೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಹಲವು ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂಬುದು ಸ್ಥಳೀಯರ ದೂರು.

ಗಂಗಡಿಮಡಿ ಆಶ್ರಯ ಕಾಲೋನಿ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಒಳಚರಂಡಿ ಹಾಗೂ 24*7 ಜೊತೆಗೆ ಇತ್ತೀಚೆಗೆ ಆರಂಭಗೊಂಡಿರುವ ತೆರೆದ ಸಿಸಿ ಚರಂಡಿಗಳ ನಿರ್ಮಾಣ ಕಾರ್ಯ ಸ್ಥಳೀಯರಿಗೆ ಸಮಸ್ಯೆಯಾಗಿ ಕಾಡುತ್ತಿದೆ. ಈ ಭಾಗದ ವಿವಿಧೆಡೆ ತೆರೆದ ಚರಂಡಿಗಳ ನಿರ್ಮಾಣಕ್ಕಾಗಿ ತಗ್ಗುತೋಡಿ ಬಿಡಲಾಗಿದೆ. ತಿಂಗಳುಗಳು ಕಳೆದರೂ ಚರಂಡಿ ನಿರ್ಮಾಣ ಕಾರ್ಯ ಆರಂಭವಾಗಿಲ್ಲ. ಹೀಗಾಗಿ ಈ ಭಾಗದ ಜನರು ತಗ್ಗು-ಗುಂಡಿಗಳನ್ನು ದಾಟಲು ಪ್ರತಿನಿತ್ಯ ಹರಸಾಹಸ ನಡೆಸುವಂತಾಗಿದೆ. ಶಾಲಾ ಮಕ್ಕಳು ಹಾಗೂ ಹಿರಿಯ ನಾಗರಿಕರು ಜೀವ ಕೈಯಲ್ಲಿಡಿದು ಸಂಚರಿಸುವಂತಾಗಿದೆ. ಗಂಗಿಮಡಿ ಸಮಸ್ಯೆಗಳ ಪರಿಹಾರಕ್ಕೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.

ಸೋರುತಿದೆ ಮನೆಯ ಮಾಳಗಿ: ಗಂಗಿಮಡಿ ನಿವಾಸಿಗಳಿಗೆ ರಸ್ತೆ, ಚರಂಡಿಗಿಂತ ಸ್ವಂತ ಮನೆಗಳೇ ಸಮಸ್ಯೆಯಾಗಿ ಕಾಡುತ್ತಿದೆ. ಮನೆಯ ಛಾವಣಿಗಳು ಸೋರುತ್ತಿದ್ದು, ಅಲ್ಪಸ್ವಲ್ಪ ಮಳೆಯಾದರೂ ಮಕ್ಕಳು, ಮರಿಗಳೊಂದಿಗೆ ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆ ಜನರ ನಿದ್ದೆಗೆಡಿಸಿದೆ. 2003ರಲ್ಲಿ ಗಂಗಿಮಡಿಯಲ್ಲಿ ಸುಮಾರು 2 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಬಡಾವಣೆಯಲ್ಲಿ ಬಡ ಹಾಗೂ ಕೂಲಿ ಕಾರ್ಮಿಕ ಕುಟುಂಬಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಅನೇಕ ಮನೆಗಳ ಮೇಲ್ಛಾವಣಿ ಬಿರುಕು ಬಿಟ್ಟಿದ್ದು, ಮಳೆಗೆ ಸೋರುತ್ತಿವೆ. ಮಳೆ ನೀರು ಬೀಳುವ ಸ್ಥಳದಲ್ಲಿ ಸಣ್ಣ- ಪುಟ್ಟ ಪಾತ್ರೆಗಳನ್ನಿಟ್ಟು ಮಳೆ ನಿಲ್ಲುವುದನ್ನೇ ಕಾಯುವಂತಾಗಿರುವುದು ಶೋಚನೀಯ.

ಬೆಟಗೇರಿಯ ಒಕ್ಕಲಗೇರಿ ಓಣಿಯ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಆರು ತಿಂಗಳಿಂದ ಪೌರಾಯುಕ್ತರಿಗೆ ಮನವಿ ಮಾಡುತ್ತಿದ್ದೇವೆ. ಶಾಸಕ ಎಚ್.ಕೆ. ಪಾಟೀಲ ಗಮನಕ್ಕೆ ತಂದಾಗಲೂ ಪೌರಾಯುಕ್ತರು ಸರಿಪಡಿಸುವ ಭರವಸೆ ನೀಡಿ ಕೈತೊಳೆದುಕೊಂಡರು. ಆದರೆ, ಸಮಸ್ಯೆಗೆ ನೈಜವಾಗಿ ಯಾರೂ ಸ್ಪಂದಿಸುತ್ತಿಲ್ಲ.•ಪ್ರಕಾಶ ಶಿವಪ್ಪ ಮಾನೇದ,ಒಕ್ಕಲಗೇರಿ ಓಣಿ ನಿವಾಸಿ

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.