ಮಹದಾಯಿ ಹೋರಾಟಗಾರರ ಪಾದಯಾತ್ರೆ-ವಿಜಯೋತ್ಸವ
Team Udayavani, Feb 29, 2020, 4:34 PM IST
ನರಗುಂದ: ಮಹದಾಯಿ ಯೋಜನೆಗೆ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿರುವುದನ್ನು ಸ್ವಾಗತಿಸಿ ಮಹದಾಯಿ ಹೋರಾಟಗಾರರು ಶುಕ್ರವಾರ ಪಾದಯಾತ್ರೆ ಕೈಗೊಂಡು ವಿಜಯೋತ್ಸವ ಆಚರಿಸಿದರು.
ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ನೇತೃತ್ವದಲ್ಲಿ ಪಟ್ಟಣದ ಪುರಸಭೆ ಆವರಣದಲ್ಲಿ ಜಮಾಯಿಸಿದ ಮಹದಾಯಿ ಹೋರಾಟಗಾರರು ನರಗುಂದ ಸಂಸ್ಥಾನದ ಅರಸ ಬಾಬಾಸಾಹೇಬ ಭಾವೆ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿದರು. ಬಳಿಕ ಮಹಿಳೆಯರು ಸೇರಿದಂತೆ ಮಹದಾಯಿ ಹೋರಾಟಗಾರರು ಪಟ್ಟಣದ ಪುರಸಭೆ ರಸ್ತೆ, ಗಾಂಧಿ ವೃತ್ತ, ಸರ್ವಜ್ಞ ವೃತ್ತ ಮಾರ್ಗವಾಗಿ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಪ್ರವೇಶಿಸಿ ಶಿವಾಜಿ ವೃತ್ತದಿಂದ ಮಹದಾಯಿ ಹೋರಾಟ ವೇದಿಕೆವರೆಗೆ ಪಾದಯಾತ್ರೆ ನಡೆಸಿ ಗಮನ ಸೆಳೆದರು. ಮಾರ್ಗದುದ್ದಕ್ಕೂ ಪಟಾಕಿ ಸಿಡಿಸಿ ಸಂಭ್ರಮಿಸಿದ ಮಹದಾಯಿ ಹೋರಾಟಗಾರರು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ತುಂಬು ಹೃದಯದಿಂದ ಸ್ವಾಗತಿಸಿ, ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.
ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ, ಉಪಾಧ್ಯಕ್ಷ ರಮೇಶ ನಾಯ್ಕರ, ಕಾರ್ಯದರ್ಶಿ ಫಕೀರಪ್ಪ ಜೋಗಣ್ಣವರ, ವೆಂಕಟೇಶ ಸಾಬಳೆ, ವೆಂಕಪ್ಪ ಹುಜರತ್ತಿ, ಲಕ್ಷ್ಮಣ ಮುನೇನಕೊಪ್ಪ, ಮಾರುತಿ ಬಡಿಗೇರ, ಮಲ್ಲಪ್ಪ ಐನಾಪೂರ, ಕಲ್ಲಪ್ಪ ಮೊರಬದ, ಯಮನಪ್ಪ ಕುರಿ, ಗಿರಡ್ಡಿ ಕಿಲಬನೂರ, ವಾಸು ಚವ್ಹಾಣ, ಯಲ್ಲಪ್ಪ ಗುಡದರಿ, ಅರ್ಜುನ ಮಾನೆ, ಹನಮಂತ ಸರನಾಯ್ಕರ, ವಿರುಪಾಕ್ಷ ಪಾರಣ್ಣವರ, ಈರಣ್ಣ ಗಡಗಿ, ಸುಭಾಷ ಗಿರೆಣ್ಣವರ, ಶಿವಾನಂದ ಹಳಕಟ್ಟಿ, ರಿಯಾಜ ಪಠಾಣ, ಹನಮಂತ ಕೋರಿ, ಎಚ್.ಸಿ. ಹಿರೇಹೊಳಿ, ಎಂ.ಎಂ.ನಂದಿ, ಲಚ್ಚವ್ವ ಜೋತೆಣ್ಣವರ, ನಾಗರತ್ನ ಸವಳಭಾವಿ, ಅನಸಮ್ಮ ಶಿಂಧೆ, ಮಾಬೂಬಿ ಕೆರೂರ, ದೇವಕ್ಕ ತಾಳಿ, ಬಸಮ್ಮ ಐನಾಪೂರ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.