13ರಿಂದ ಮಹಾಂತ ಶ್ರೀಗಳ ಜಾತ್ರೆ
ರಾಣಿಬೆನ್ನೂರಿನ ಗುರುಬಸವ ಸ್ವಾಮೀಜಿ, ಅಧ್ಯಕ್ಷತೆಯನ್ನು ಶಿವಣ್ಣ ನೀಲಗುಂದ ವಹಿಸುವರು.
Team Udayavani, Feb 10, 2022, 6:26 PM IST
ಮುಳಗುಂದ: ಪಟ್ಟಣದ ಆರಾಧ್ಯ ದೈವ, ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 163ನೇ ಸ್ಮರಣೋತ್ಸವದ ಅಂಗವಾಗಿ ಜಾತ್ರಾ ಮಹೋತ್ಸವವನ್ನು ಫೆ.13 ರಿಂದ 15ರ ವರೆಗೆ ಕೋವಿಡ್ ಮಾರ್ಗಸೂಚಿ ಅನ್ವಯ ಸರಳವಾಗಿ ಗವಿಮಠಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ ಸಮ್ಮುಖದಲ್ಲಿ ಆಚರಿಸಲಾಗುವುದು ಎಂದು ಜಾತ್ರಾ ಸಮಿತಿ ಅಧ್ಯಕ್ಷ ಬಸವರಾಜ ಬಡ್ನಿ ಹೇಳಿದರು.
ಈ ಕುರಿತು ಶ್ರೀ ಮಠದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಫೆ.13 ರಂದು ಬೆಳಗ್ಗೆ 8.30 ಕ್ಕೆ ಷಟಸ್ಥಲ ಧ್ವಜಾರೋಹಣವನ್ನು ಅಗಡಿ ಗುತ್ತಲ ಪ್ರಭುಸ್ವಾಮಿ ಮಠದ ಗುರುಸಿದ್ಧ ಸ್ವಾಮೀಜಿ ನೆರವೇರಿಸಲಿದ್ದು, ಕಂಪ್ಲಿ ಕಲ್ಮಠದ ಪ್ರಭು ಸ್ವಾಮೀಜಿ, ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ಶ್ರೀಗಳು ಸಮ್ಮುಖ ವಹಿಸುವರು ಎಂದು ತಿಳಿಸಿದರು.
ಸಾಯಂಕಾಲ 7 ಗಂಟೆಗೆ ಜಾತ್ರಾ ಮಹೋತ್ಸವ ಉದ್ಘಾಟನೆ ಹಾಗೂ ಅನುಭಾವ ಗೋಷ್ಠಿಯ ಸಾನ್ನಿಧ್ಯವನ್ನು ಯರನಾಳ ವಿರಕ್ತಮಠದ ಅಭಿನವ ರೇವಣ ಸಿದ್ಧೇಶ್ವರ ಸ್ವಾಮೀಜಿ, ರಾಣಿಬೆನ್ನೂರಿನ ಗುರುಬಸವ ಸ್ವಾಮೀಜಿ, ಅಧ್ಯಕ್ಷತೆಯನ್ನು ಶಿವಣ್ಣ ನೀಲಗುಂದ ವಹಿಸುವರು. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಫೆ.14 ರಂದು ಮಧ್ಯಾಹ್ನ 1ಗಂಟೆಗೆ ಮಹಾದಾಸೋಹ, ಸಾಯಂಕಾಲ 5 ಗಂಟೆಗೆ ರಥೋತ್ಸವ, ಸಾಯಂಕಾಲ 7 ಗಂಟೆಗೆ ಅನುಭಾವ
ಗೋಷ್ಠಿ 2 ರ ಸಾನ್ನಿಧ್ಯವನ್ನು ಹುಬ್ಬಳ್ಳಿ ಮೂರುಸಾವಿರ ಮಠದ ಜ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ವಹಿಸುವರು. ಅತಿಥಿಗಳಾಗಿ ಡಿ.ಆರ್. ಪಾಟೀಲ, ಎಸ್.ಎಸ್. ಪಾಟೀಲ ಇತರರು ಭಾಗವಹಿಸುವರು.
ಫೆ.15 ರಂದು ಮಧ್ಯಾಹ್ನ 1ಕ್ಕೆ ಮಹಾ ದಾಸೋಹ, ಸಾಯಂಕಾಲ 5 ಗಂಟೆಗೆ ಮಲ್ಲಿಕಾರ್ಜುನ ಶ್ರೀಗಳಿಂದ ಕಡುಬಿನ ಕಾಳಗ, ಸಾಯಂಕಾಲ 7 ಗಂಟೆಗೆ ಅನುಭಾವಗೋಷ್ಠಿ 3 ರ ಸಾನ್ನಿಧ್ಯವನ್ನು ಗದಗ ತೋಂಟದಾರ್ಯ ಮಠದ ಡಾ| ತೋಂಟದ ಸಿದ್ಧಾರಾಮ ಸ್ವಾಮೀಜಿ ವಹಿಸುವರು. ಸಮ್ಮುಖ ಹಾಗೂ ಗೌರವ ಅಭಿನಂದನೆ ಬಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದೇವರು ನೆರವೇರಿಸುವರು. ಅತಿಥಿಗಳಾಗಿ ಶಿವಕುಮಾರ ಉದಾಸಿ, ಅನಿಲ ಮೆಣಸಿನಕಾಯಿ, ಮಹಾಂತಪ್ಪ ಬಡ್ನಿ ಭಾಗವಹಿಸುವರು. ಅನುಭಾವಗೋಷ್ಠಿ ವಿಶೇಷಿತರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ, ಸಂಗೀತ ಕಾರ್ಯಕ್ರಮಗಳು ಜರುಗುವವು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಡಾ|ಎಸ್.ಸಿ. ಚವಡಿ, ಬಸವರಾಜ ಹಾರೋಗೇರಿ, ಮಹಾಂತೇಶ ಕೋರಿ, ಬಸವರಾಜ ಬಾತಾಖಾನಿ, ಈರಣ್ಣ ತಡಸದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.