ಮಲೇರಿಯಾ ಮುಕ್ತ ಜಿಲ್ಲೆಯಾಗಿಸಿ
Team Udayavani, Apr 26, 2019, 4:06 PM IST
ಗದಗ: ನಗರ ಮತ್ತು ಗ್ರಾಮೀಣ ಪ್ರದೇಶದ ಜನರಲ್ಲಿ ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯನ್ನು ಮಲೇರಿಯಾ ಮುಕ್ತವನ್ನಾಗಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ವಿರುಪಾಕ್ಷರೆಡ್ಡಿ ಮಾದಿನೂರ ಹೇಳಿದರು.
‘ಶೂನ್ಯ ಮಲೇರಿಯಾ ನನ್ನಿಂದ ಪ್ರಾರಂಭ’ ಘೋಷಣೆಯಡಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವ ಮಲೇರಿಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೊಳಚೆ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಕೊಳಚೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ: ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಅರುಂಧತಿ ಕೆ. ಮಾತನಾಡಿ, ಮಲೇರಿಯಾ ಅನಾದಿ ಕಾಲದಿಂದಲೂ ಬಂದಿರುವ ಸಾಂಕ್ರಾಮಿಕ ರೋಗ. ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮಲೇರಿಯಾ ತಡೆಗಟ್ಟಬಹುದು ಎಂದರು.
ಜಾಗೃತಿವಹಿಸಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯಕರ ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮಲೇರಿಯಾ ಕುರಿತು ಜಾಗೃತಿ ವಹಿಸಬೇಕು. ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಮಲೇರಿಯಾ ರೋಗಕ್ಕೆ ಉಚಿತ ಚಿಕಿತ್ಸೆ ಲಭ್ಯವಿದ್ದು, ಅಗತ್ಯವಿದ್ದವರು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಹಾಯಕ ಕೀಟಶಾಸ್ತ್ರಜ್ಞೆ ಅನ್ನಪೂರ್ಣ ಶೆಟ್ಟರ್ ಮಾತನಾಡಿ, ಮಲೇರಿಯಾ ಅನಾಫಿಲಿಸ್ ಹೆಣ್ಣು ಸೊಳ್ಳೆಯಿಂದ ಬರುವ ಸಾಂಕ್ರಾಮಿಕ ರೋಗವಾಗಿದ್ದು, ಜವಳು ಪ್ರದೇಶದಲ್ಲಿ ನಿಂತ ನೀರಲ್ಲಿ ಮಲೇರಿಯಾ ರೋಗ ಹರಡುವ ಸಾಧ್ಯತೆ ಹೆಚ್ಚು. ತೀವ್ರ ಜ್ವರ, ತಲೆನೋವು, ವಾಂತಿ ಮಲೇರಿಯಾ ರೋಗದ ಸ್ವರೂಪಗಳಾಗಿವೆ. ಮಲೇರಿಯಾ ಪ್ರಕರಣ ಸಂಶಯಾಸ್ಪದ, ಖಚಿತ ರೋಗ ಹಾಗೂ ತೀವ್ರತರ ಎಂದು ಗುರುತಿಸಲಾಗುತ್ತದೆ. ತಕ್ಷಣವೇ ಚಿಕಿತ್ಸೆ ಪಡೆಯುವುದರಿಂದ ಬೇಗ ಗುಣಮುಖರಾಗಲು ಸಾಧ್ಯ ಎಂದು ಸಲಹೆ ನೀಡಿದರು.
ಮಲೇರಿಯಾ ಜೈವಿಕ ನಿಯಂತ್ರಣ ಕ್ರಮಗಳ ಅಡಿಯಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳಲ್ಲಿ ಲಾರ್ವಾಹಾರಿ ಮೀನು ಬಿಡುವ ಮೂಲಕ, ದೀರ್ಘ ಕಾಲಿಕ ಕೀಟನಾಟಕ ಉಪಚರಿತ ಸೊಳ್ಳೆ ಪರದೆ ಉಪಯೋಗಿಸಬೇಕು. ಬೇವಿನ ಸೊಪ್ಪು ಹೊಗೆ ಹಾಕುವುದು, ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮಲೇರಿಯಾ ರೋಗ ತಡೆಗಟ್ಟಬಹುದು ಎಂದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ಸತೀಶ ಬಸರಿಗಿಡದ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಎಸ್.ಎಂ. ಹೊನಕೇರಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ವೈ.ಕೆ. ಭಜಂತ್ರಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ| ರೇಣುಕಾ ಕೊರನವರ, ರೋಣ ತಾಲೂಕು ಆರೋಗ್ಯಾಧಿಕಾರಿ ಡಾ| ಭಜಂತ್ರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಎಚ್, ಡಿ.ಎಚ್.ಎಸ್. ಮಹಾಜನ ವಿವಿ, ಗೀತಾ ಕಾಂಬಳೆ, ಯರಗುಡಿ, ಎಂ.ಎಚ್. ಕದಾಂಪುರ, ಅಜಯ ಕುಮಾರ್ ಕಲಾಲ, ಆರ್.ಎ. ಬಿಲ್ಲಾಳ, ವೈ.ವೈ. ಹಕ್ಕಿ, ಅನಿತಾ, ಪರಮೇಶ್ವರಪ್ಪ, ಮೃತ್ಯುಂಜಯ ಹಿರೇಮಠ, ಐ.ಎಸ್. ಚಿಲ್ಮಿ, ಅನಿತಾ , ಎಸ್.ಎಸ್. ಕುಬಸದ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.