ಪಟ್ಟಿ ಪರಿಷ್ಕರಣೆ ನಿಖರವಾಗಿರಲಿ


Team Udayavani, Dec 3, 2020, 2:44 PM IST

ಪಟ್ಟಿ  ಪರಿಷ್ಕರಣೆ ನಿಖರವಾಗಿರಲಿ

ಗದಗ: ಜಿಲ್ಲಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ನಿಯೋಜಿತ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆದ್ಯತೆ ವಹಿಸಿ, ನಿಖರವಾಗಿ ತಯಾರಿಸಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಡಾ| ಎಸ್‌. ಬಸವರಾಜ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಜರುಗಿದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ನಿಯೋಜಿತ ಎಲ್ಲ ಅಧಿಕಾರಿಗಳುಸೂಚನೆ ಮೇರೆಗೆ ಉತ್ತಮ ಮತದಾರರ ಪಟ್ಟಿ ಸಿದ್ಧಗೊಳಿಸಬೇಕು. ಮತದಾರರ ಪಟ್ಟಿಪರಿಷ್ಕರಣೆಯಲ್ಲಿ ಅಧಿಕಾರಿಗಳಿಗಿರುವ ಗೊಂದಲಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರಕಂಡುಕೊಂಡು ನಿಖರ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲ ಅರ್ಹ ಮತದಾರರಿಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದಹಕ್ಕು ದೊರೆಯುವಂತೆ ಅವಕಾಶಕಲ್ಪಿಸಬೇಕು. ಈ ನಿಟ್ಟಿನಲ್ಲಿ ಮತದಾರರಪಟ್ಟಿ ಪರಿಷ್ಕರಣೆ ಪ್ರಮುಖವಾಗಿದೆ. ಈ ಕಾರ್ಯವನ್ನು ಅಧಿಕಾರಿಗಳು ಆದ್ಯತೆ ಮೇರೆಗೆ ಆಸಕ್ತಿ ವಹಿಸಿ ನಿರ್ವಹಿಸುವಮೂಲಕ ನಕಲಿ ಮತದಾರರನ್ನು ಗುರುತಿಸಿಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಮೂಲಕ ಪರಿಷ್ಕರಿಸುವಂತೆ ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಒಂದೇ ಪ್ರದೇಶದ ಹಲವರ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿರುವ ಉದಾಹರಣೆಗಳಿವೆ. ಅಲ್ಲದೇ ವಲಸೆ ಸಂತ್ರಸ್ತರ ಹೆಸರುಗಳು ದಿಢೀರನೇ ಮತದಾರರ ಪಟ್ಟಿಯಲ್ಲಿ ನೋಂದಾವಣೆಯಾಗುವುದೂ ಅಲ್ಲಲ್ಲಿ ಕಂಡುಬರುವುದನ್ನು ಗಮನದಲ್ಲಿರಿಸಿಕೊಂಡು ಅವ್ಯವಸ್ಥೆಗೆ ಅವಕಾಶ ನೀಡದೇ ನಿಖರ ಮತದಾರರ ಪಟ್ಟಿ ಪರಿಷ್ಕರಣೆಗೆ ತಾವು ಸಹಕರಿಸುವಂತೆ ಸೂಚಿಸಿದರು. ಮತದಾರರ ಪಟ್ಟಿಯಿಂದ ಮೃತರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ತೆಗೆದು ಹಾಕುವ ಹಾಗೂ ಹೊಸ ಮತದಾರರಿಗೆ ನೋಂದಾಯಿಸುವ ಕಾರ್ಯವನ್ನು ಅತ್ಯಂತ ಸೂಕ್ಷ್ಮವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ್‌ ಎಂ. ಮಾತನಾಡಿ, ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ನ. 18ರವರೆಗಿನ ಮಾಹಿತಿ ಯಂತೆ 4,33,675 ಪುರುಷ, 4,29,238 ಮಹಿಳೆಯರು ಹಾಗೂ 45 ಇತರರು ಸೇರಿದಂತೆ ಒಟ್ಟು 8,62,958 ಮತದಾರರಿದ್ದಾರೆ. ನಗರ ಪ್ರದೇಶದಲ್ಲಿ 348 , ಗ್ರಾಮೀಣ ಪ್ರದೇಶದಲ್ಲಿ 611 ಮತಗಟ್ಟೆ ಸೇರಿದಂತೆ ಒಟ್ಟು 959 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಒಟ್ಟು 959 ಬಿಎಲ್‌ಒಗಳನ್ನು ನೇಮಿಸಿ ಅವರಿಗೆ ನಿಯಮಿತವಾಗಿ ತರಬೇತಿನೀಡಲಾಗಿದೆ. ಅವರೆಲ್ಲರೂ ಮತದಾರರ ಪಟ್ಟಿ ನಿಖರ ತಯಾರಿಕೆಗೆ ಕರ್ತವ್ಯನಿರ್ವಹಿಸುತ್ತಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಆಯಾ ತಾಲೂಕಿನತಹಶೀಲ್ದಾರರು ಹಾಜರಿದ್ದರು.ಸಭೆ ನಂತರ ಗದಗ ಜಿಲ್ಲೆಯ ಮತದಾರರಪಟ್ಟಿ ವೀಕ್ಷಕ ಡಾ| ಎಸ್‌. ಬಸವರಾಜಚುನಾವಣೆ ಶಾಖೆಗೆ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಪರಿಶೀಲಿಸಿದರು

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.