ಸಿಎಂ ವಿರುದ್ಧ ದೂರು ಸರಿಯಲ್ಲ


Team Udayavani, Apr 2, 2021, 4:56 PM IST

ಸಿಎಂ ವಿರುದ್ಧ ದೂರು ಸರಿಯಲ್ಲ

ಗದಗ: ರಾಜ್ಯದ ಉಪ ಚುನಾವಣೆ ಸಂದರ್ಭದಲ್ಲಿ ಕೆ.ಎಸ್‌.ಈಶ್ವರಪ್ಪ ಅವರು ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಹಾಗೂ ಪಕ್ಷದ ವರಿಷ್ಠರಿಗೆ ಪತ್ರಬರೆದಿರುವುದು ಸರಿಯಲ್ಲ. ಅವರ ನಡೆಯಿಂದ ಪಕ್ಷಕ್ಕೆ ಮುಜುಗರ ಉಂಟಾಗುತ್ತದೆ ಎಂದು ಸಣ್ಣ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತೀವ್ರವಾಗಿ ಖಂಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಹಾಗೂ ವಿರೋಧ ಪಕ್ಷದ ಎಲ್ಲ ಶಾಸಕರ ವಿಶ್ವಾಸ ಗಳಿಸುವುದು ಎಲ್ಲ ಇಲಾಖೆಗಳ ಮಂತ್ರಿಗಳಿಗಿಂತಮುಖ್ಯಮಂತ್ರಿಗಳಿಗೆ ಹೆಚ್ಚಿನ ಹೊಣೆಗಾರಿಕೆ ಇರುತ್ತದೆ.ಕೆಲ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತಮಗಿರುವ ಪರಮಾಧಿಕಾರವನ್ನೂ ಬಳಸುತ್ತಾರೆ. ಅದನ್ನು ಸ್ವಪಕ್ಷದಹಾಗೂ ಸರಕಾರದ ಪ್ರಮುಖ ಸಚಿವರಾಗಿದ್ದುಕೊಂಡು ಮುಖ್ಯಮಂತ್ರಿಗಳ ನಡೆಯನ್ನು ವಿರೋಧಿಸುವುದರೊಂದಿಗೆ ಚರ್ಚೆಗೆ ಅವಕಾಶ ನೀಡಿರುವುದು ಸರಿಯಲ್ಲ ಎಂದು ಟೀಕಿಸಿದರು.

ಕೋವಿಡ್‌ ಪ್ರಯುಕ್ತ ಅನುದಾನ ಕೊರತೆ ಹಾಗೂ ಮುಂಬರುವ ತಾ.ಪಂ., ಜಿ.ಪಂ., ಚುನಾವಣೆಎದುರಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳ ಶಾಸಕರುತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೇಳಿರುವುದು ಸಹಜ. ಅದಕ್ಕೆ ಸ್ಪಂದಿಸಿ ಮುಖ್ಯಮಂತ್ರಿಗಳು ಗ್ರಾಮೀಣಾಭಿವೃದ್ಧಿಇಲಾಖೆಯ ಅನುದಾನವನ್ನು ವರ್ಗಾಯಿಸಿದ್ದಾರೆ. ಮುಖ್ಯಮಂತ್ರಿಗಳ ಈ ಕ್ರಮದ ವಿರುದ್ಧ ರಾಜ್ಯಪಾಲರುಮತ್ತು ಕೇಂದ್ರ ವರಿಷ್ಠರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ದೂರು ನೀಡಿದ್ದಾರೆ. ಈ ವಿಚಾರದಲ್ಲಿ ರಾಜ್ಯಪಾಲರು ಏನು ಮಾಡಲು ಸಾಧ್ಯ ಎಂದು ಖಾರವಾಗಿ ಪ್ರಶ್ನಿಸಿದರು.

ಶಾಸಕರು ಅನುದಾನ ಕೇಳುವುದು, ಕೊಡುವುದು ತಪ್ಪಾ? ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲ ಪಕ್ಷದ ಶಾಸಕರಿಗೆ ಸರಿಸಮಾನವಾಗಿ ಅನುದಾನ ನೀಡಿದ್ದಾರೆ ಎಂಬ ಹೆಮ್ಮೆ ಇದೆ. ಮುಖ್ಯಮಂತ್ರಿಗಳ ಪರಮಾಧಿಕಾರವನ್ನು ಪ್ರಶ್ನಿಸಲು ಸಂವಿಧಾನದಲ್ಲಿ ಅವಕಾಶವಿದೆಯೇ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಇತಿಮಿತಿಯಲ್ಲಿ ಟೀಕೆ ಟಿಪ್ಪಣಿ ಮಾಡಬೇಕು. ಇಂತಹ ಹೇಳಿಕೆಯಿಂದ ವಿಪಕ್ಷ ನಾಯಕನಸ್ಥಾನದ ಗೌರವ ಕಡಿಮೆಯಾಗುತ್ತದೆ ಎಂದು ಟಾಂಗ್‌ ನೀಡಿದರು.

ಇದೇ ಈಶ್ವರಪ್ಪ ಅವರು ಕಾಂಗ್ರೆಸ್‌ ವಿರುದ್ಧ ಮಾತನಾಡಿದಾಗ ಮೆದುಳಿಲ್ಲ ಎನ್ನುವ ಸಿದ್ದರಾಮಯ್ಯ, ಈಗ ಬಿಜೆಪಿಗೆ ಮುಜುಗರ ತಂದಾಗ ಈಶ್ವರಪ್ಪ ಅವರಿಗೆಭೇಷ್‌ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರ ದ್ವಂದ್ವಅಭಿಪ್ರಾಯವನ್ನು ರಾಜ್ಯದ ಜನತೆ ನಿರ್ಧರಿಸುತ್ತಾರೆ ಎಂದು ತಿರುಗೇಟು ನೀಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಿರಿಯಸಚಿವ ಕೆ.ಎಸ್‌.ಈಶ್ವರಪ್ಪ ಅವರೂ ಒಂದೇ ಜಿಲ್ಲೆಯವರು. ಅವರಲ್ಲಿ ಏನಾದರೂ ಅಭಿಪ್ರಾಯ ಭೇದವಿದ್ದರೆ ಚರ್ಚೆಮೂಲಕ ಬಗೆಹರಿಸಿ ಕೊಳ್ಳಬೇಕಿತ್ತು. ಆದರೂ, ಈಬೆಳವಣಿಗೆಯಿಂದ ರಾಜ್ಯ ಉಪಚುನಾವಣೆ ಮೇಲೆಯಾವುದೇ ರೀತಿಯ ಪರಿಣಾಮ ಬೀರದು. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ನಿಶ್ಚಿತಎಂದು ವಿಶ್ವಾಸ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಸಂಗಮೇಶ್‌ ದುಂದೂರ್‌, ಎಂ.ಎಸ್‌.ಕರಿಗೌಡರ, ವಸಂತ ಮೇಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.