Gadag; ಜಿಮ್ಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ
Team Udayavani, Aug 27, 2023, 1:30 PM IST
ಗದಗ: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ರವಿವಾರದಂದು ನಗರದ ದುಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ದುಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಪ್ರಥಮಾದ್ಯತೆ ನೀಡುವಂತೆ ಸೂಚಿಸಿದರು. ಆಸ್ಪತ್ರೆಗೆ ನಿಯೋಜನೆಗೊಂಡಂತಹ ವೈದ್ಯರು ಸಮಯಕ್ಕೆ ಸರಿಯಾಗಿ ಹಾಜರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುವ ಮಹಿಳೆಯರು ಮತ್ತು ಮಕ್ಕಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ತಿಳಿಸಿದರು.
ತದನಂತರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿನ ಒಳರೋಗಿಗಳ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳ ಬಗ್ಗೆ ಅಸಡ್ಡೆ ಭಾವನೆ ತೊರದೆ ಉತ್ತಮ ಚಿಕಿತ್ಸೆ ನೀಡಲು ಪ್ರತಿಯೊಬ್ಬ ವೈದ್ಯರು ಮುಂದಾಗಬೇಕು. ಆಸ್ಪತ್ರೆಗೆ ಆಗಮಿಸುವ ರೋಗಿಗಳನ್ನು ವಿನಾಕಾರಣ ಅಲೆದಾಡಿಸುವ ಕಾರ್ಯ ಮಾಡದೆ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಗುಣಮಟ್ಟದ ಚಿಕಿತ್ಸೆಗೆ ಆದ್ಯತೆ ನೀಡುವಂತೆ ತಿಳಿಸಿದರು.
ಇದನ್ನೂ ಓದಿ:Nayanthara-Vignesh: ಅವಳಿ ಮಕ್ಕಳೊಂದಿಗೆ ಮೊದಲ ಓಣಂ; ಸ್ಪೆಷೆಲ್ ಫೋಟೋ ಹಂಚಿಕೊಂಡ ದಂಪತಿ
450 ಹಾಸಿಗೆಗಳ ಹೊಸ ಕಟ್ಟಡ ಉತ್ತಮವಾಗಿ ನಿರ್ಮಾಣವಾಗಿದ್ದು, ಈ ಆಸ್ಪತ್ರೆ ಪೂರ್ಣಪ್ರಮಾಣದ ಚಿಕಿತ್ಸೆ ರೋಗಿಗಳಿಗೆ ದೊರಕಬೇಕು. ಅದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೇ, ಕಟ್ಟಡ ನಿರ್ವಹಣೆ ಉತ್ತಮ ರೀತಿಯಲ್ಲಿ ಆಗಬೇಕೆಂಬ ನೀರಿಕ್ಷೆ ಹೊಂದಲಾಗಿದ್ದು ಈ ನಿಟ್ಟಿನಲ್ಲಿ ಆಡಳಿತ ವೈದ್ಯಾಧಿಕಾರಿಗಳು ಗಮನಹರಿಸಬೇಕು ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಕರಿಗೌಡರ, ಜಿಮ್ಸ್ ಹಣಕಾಸು ಅಧಿಕಾರಿ ಜೆ.ಸಿ.ಪ್ರಶಾಂತ, ಮಾಜಿ ಶಾಸಕ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಗುರಣ್ಣ ಬಳಗಾನೂರ, ಸೇರಿದಂತೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.