ಪಾದರಾಯಣಪುರ ಘಟನೆಗೆ ಸಚಿವ ಪಾಟೀಲ ಖಂಡನೆ
Team Udayavani, Apr 21, 2020, 4:24 PM IST
ಗದಗ: ಕೋವಿಡ್ 19 ತಡೆಯಲು ಹಾಗೂ ಜನರ ಆರೋಗ್ಯ ರಕ್ಷಣೆಗಾಗಿ ತಮ್ಮ ಪ್ರಾಣದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಇಲಾಖೆ, ವೈದ್ಯಕೀಯ ಸಿಬ್ಬಂದಿ ಮೇಲೆ ಬೆಂಗಳೂರಿನ ಪಾದರಾಯಣಪುರದಲ್ಲಿ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ನೀಡಿರುವ ಅವರು, ಕಳೆದ 27 ದಿನಗಳಿಂದ ಕೋವಿಡ್ 19 ವೈರಸ್ ಜನರಿಗೆ ಹರಡದಂತೆ ಪೊಲೀಸರು, ವೈದ್ಯಕೀಯ ಸಿಬ್ಬಂದಿ ತಮ್ಮ ಜೀವನವನ್ನೂ ಲೆಕ್ಕಸಿದೇ ಜನ ಸೇವೆಯಲ್ಲಿ ತೊಡಗಿದ್ದಾರೆ. ಅಂತವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಅಧಿಕಾರಿಗಳು ಶೀಘ್ರವೇ ಆರೋಪಿಗಳನ್ನು ಬಂ ಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಜನರ ಜೀವ ಸಂರಕ್ಷಣೆಗಾಗಿ ಕಳೆದ 27 ದಿನಗಳಿಂದ ನಿರಂತರವಾಗಿ ಕೊರೊನಾ ಯುದ್ಧದಲ್ಲಿ ತೊಡಗಿರುವ ಪೊಲೀಸ್, ಆರೋಗ್ಯ ಹಾಗೂ ಇತರ ಇಲಾಖೆಗಳ ಅಧಿಕಾರಿ ಸಿಬ್ಬಂದಿ, ಸೇನಾನಿಗಳನ್ನು ಅಭಿನಂದಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.