ನೆರೆ ಪರಿಹಾರಕ್ಕೆ ಸಚಿವ ಪಾಟೀಲ ಯತ್ನ


Team Udayavani, Oct 24, 2020, 1:34 PM IST

Gadaga-tdy-1

ಗದಗ: ಜಿಲ್ಲೆಯ ನೆರೆ ಹಾಗೂ ಪ್ರವಾಹ ಸಂತ್ರಸ್ತರ ಪಾಲಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಸದಾ ಆಸರೆಯಾಗಿದ್ದು, ಕಳೆದ ಎರಡು ತಿಂಗಳಿಂದೀಚೆಗೆ ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ತಕ್ಷಣಕ್ಕೆ ಸ್ಪಂದಿಸುತ್ತಿದ್ದಾರೆ. ಈ ನಡುವೆ ಕೋವಿಡ್ ಭಯದಿಂದ ಹೆಚ್ಚಾಗಿ ಆನ್‌ಲೈನ್‌ ಮೂಲಕವೇ ಜಿಲ್ಲಾಡಳಿತಕ್ಕೆ ಅಗತ್ಯ ಸಲಹೆ, ಸೂಚನೆ ನೀಡುವ ಮೂಲಕ ಪ್ರವಾಹ ಪೀಡಿತ ಜನರ ಕಷ್ಟಗಳಿಗೆ ನೆರವಾಗುತ್ತಿದ್ದಾರೆ.

ಈ ಬಾರಿ ಜಿಲ್ಲೆಯಲ್ಲಿ ಪ್ರವಾಹಕ್ಕಿಂತ ಅತಿವೃಷ್ಟಿಯಿಂದ ಹೆಚ್ಚಿನ ಹಾನಿ ಸಂಭವಿಸಿದೆ. ಆಗಸ್ಟ್‌ ಎರಡನೇ ವಾರದಲ್ಲಿಮಲಪ್ರಭಾ ಮೇಲ್ಭಾಗದಲ್ಲಿ ಭಾರೀ ಮಳೆ ಸುರಿದಿತ್ತು. ನವಿಲುತೀರ್ಥ ಜಲಾಶಯದಲ್ಲಿ ಗರಿಷ್ಟ ಮಟ್ಟಕ್ಕೆ ನೀರು ತಲುಪಿದ್ದರಿಂದ ಸಾವಿರಾರು ಕ್ಯೂಸೆಕ್‌ ನೀರು ನದಿಗೆ ಹರಿಸಲಾಗಿತ್ತು. ಇದರಿಂದ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪುರ, ಬೆಳ್ಳೇರಿ, ಕೊಣ್ಣೂರು, ಬೂದಿಹಾಳ ಸೇರಿದಂತೆ ನರಗುಂದ ಮತ್ತು ರೋಣ ತಾಲೂಕಿನ ತಲಾ 7 ಗ್ರಾಮಗಳು ಸೇರಿ ಒಟ್ಟು 14 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ.

ನದಿ ಪಾತ್ರದಲ್ಲಿ ನೀರು ಹೆಚ್ಚುತ್ತಿದ್ದಂತೆ ಲಖಮಾಪುರ ಗ್ರಾಮಸ್ಥರು ಬೆಳ್ಳೇರಿ ಕ್ರಾಸ್‌ಗೆ ಸ್ಥಳಾಂತರಗೊಂಡಿದ್ದರು. ಈ ಕುರಿತು ಸುದ್ದಿ ತಿಳಿಯುತ್ತಿದ್ದಂತೆ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದರು. ತಾತ್ಕಾಲಿಕ ಶೆಡ್‌ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಾದರೂ, ಶೆಡ್‌ ನಿರ್ಮಾಣಕ್ಕೆ ಮೂರು ದಿನ ವಿಳಂಬವಾಯಿತು. ಅಲ್ಲದೇ, ಲಖಮಾಪುರದ ಗ್ರಮಸ್ಥರಿಗಾಗಿ ಬೆಳ್ಳೇರಿಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಜಿಲ್ಲಾಡಳಿತ ಕಾಳಜಿ ಆರಂಭಿಸಿತ್ತಾದರೂ, ಅದೇ ಆವರಣದಲ್ಲಿ ಕೋವಿಡ್‌ ಸೋಂಕಿತರಿಗೆ ನಿಗಾ ಘಟಕ ತೆರೆದಿದ್ದರಿಂದ ಅನೇಕರು ಹಿಂದೇಟು ಹಾಕಿದರು. ಅಲ್ಲದೇ, ಅಲ್ಲಿ ಸ್ಯಾನಿಟೈಸರ್‌ ಹಾಗೂ ಸ್ವಚ್ಛತೆ ಕೊರತೆಯ ಆರೋಪಗಳೂ ಕೇಳಿ ಬಂದವು. ಅ.2 ರಂದು ನರಗುಂದ ತಾಲೂಕಿನ ಬೂದಿಹಾಳ ನವ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದಾಗಲೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಕ್ಷಣ ಭೇಟಿ ನೀಡಿದ್ದರು. ಅಲ್ಲದೇ, ಗ್ರಾಮಸ್ಥರಿಗೆ ತಕ್ಷಣ ಅಗತ್ಯ ದವಸ ಧಾನ್ಯ ಒದಗಿಸುವ ವ್ಯವಸ್ಥೆ ಮಾಡಿದರು.

ಆದರೆ, ಅತಿವೃಷ್ಟಿಯಿಂದಾಗಿ ಜಿಲ್ಲೆಯ ಇತರೆ ಭಾಗದಲ್ಲಿ ಸಾಕಷ್ಟು ಮನೆಗಳು ಕುಸಿದು, ಜನರು ಸಂಕಷ್ಟಕ್ಕೆ ಸಿಲುಕಿದರೂ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬ ಆರೋಪಗಳಿವೆ. ಪ್ರವಾಹ ಹಾಗೂ ಅತಿವೃಷ್ಟಿಯಿಂದ ಸಂಭವಿಸಿದ ಹಾನಿ ಮತ್ತು ಪರಿಹಾರ ಕುರಿತಂತೆ ಜಿಲ್ಲಾಡಳಿತದೊಂದಿಗೆ ಆನ್‌ಲೈನ್‌ನಲ್ಲಿ ಸಭೆ ನಡೆಸಿದ್ದೇ ಹೆಚ್ಚು.

ಟಾಪ್ ನ್ಯೂಸ್

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.