ಬೆಳಗಾವಿ ನಾಗನೂರು ಮಠಕ್ಕೆ ಸಚಿವ ಪ್ರಹ್ಲಾದ ಜೋಶಿ ಭೇಟಿ
Team Udayavani, Dec 6, 2020, 5:05 PM IST
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆ ನಾಗನೂರು ರುದ್ರಾಕ್ಷಿಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ ನೀಡಿ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಹಾಗೂ ಅಲ್ಲಮ ಪ್ರಭು ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
ವಚನ ಸಾಹಿತ್ಯ ಮತ್ತು ಉಪನಿಷತ್ತುಗಳ ತೌಲನಿಕ ಅಧ್ಯಯನ, ಬಸವಣ್ಣನವರ ವಚನಗಳಲ್ಲಿ ಮಾನವೀಯತೆ, ವಚನಗಳಲ್ಲಿ ತತ್ವ ಮೀಮಾಂಸೆ, ವಚನಗಳಲ್ಲಿ ಧರ್ಮ ಮತ್ತು ನೀತಿ ವಚನ ಸಾಹಿತ್ಯ ಸಂಗ್ರಹ, ಕರ್ತಾರನ ಕಮ್ಮಟ ಮುಂತಾದ ಧಾರ್ಮಿಕ ಕೃತಿಗಳು ಪ್ರಸ್ತುತ ಪ್ರಕಟವಾಗುತ್ತಿರುವ ಮತ್ತು ನಿಂತುಹೋದ ಅಪರೂಪದ ನಿಯತಕಾಲಿಕೆಗಳ ಸಂಚಿಕೆಗಳನ್ನು ಸಂಗ್ರಹಿಸಿ ಮಠದಲ್ಲಿ ಸಂರಕ್ಷಿಸಲಾಗಿದೆ. ಶಿವಾನುಭವ ಪತ್ರಿಕೆಯ 35 ಸಂಪುಟಗಳು ಒಂದೆಡೆ ಲಭ್ಯವಿರುವುದು ಈ ಗ್ರಂಥಾಲಯದಲ್ಲಿ ಮಾತ್ರ. ಹಳೆಯ ಅಪರೂಪದ ಗ್ರಂಥಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಶ್ರೀಗಳು ಸಚಿವ ಪ್ರಹ್ಲಾದ ಜೋಶಿ ಅವರಿಗೆ ತೋರಿಸಿದರು.
ಇದನ್ನೂ ಓದಿ:ಗ್ರಾಮೀಣ ಜನರಿಂದಲೇ ಸಂಸ್ಕೃತಿ ರಕ್ಷಣೆ
1995ರಲ್ಲಿ ಬೆಳಗಾವಿ ನಗರದ ರುದ್ರಾಕ್ಷಿಮಠದ ಆವರಣದಲ್ಲಿ ಡಾ| ಸಿದ್ಧರಾಮ ಸ್ವಾಮೀಜಿ ಅವರಿಂದ ಸ್ಥಾಪನೆಗೊಂಡಿರುವ ವಚನ ಅಧ್ಯಯನ ಕೇಂದ್ರವು ವಚನಗಳ ತಲಸ್ಪರ್ಶಿ ಅಧ್ಯಯನಕ್ಕಾಗಿ ಮೀಸಲಾದ ಸಂಸ್ಥೆ. ಪ್ರಾತಿನಿ ಧಿಕ ವಚನಗಳನ್ನು ಸಂಗ್ರಹಿಸುವುದಷ್ಟೇ ಅಲ್ಲದೆ ಇತರೆ ಭಾಷೆಗೆ ಅನುವಾದಿಸಿ ಪ್ರಕಟಿಸುವ ಕೆಲಸ ಮಾಡುತ್ತಿದೆ ಎಂದು ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಹಾಗೂ ಅಲ್ಲಮ ಪ್ರಭು ಸ್ವಾಮೀಜಿ ಹೇಳಿದರು. ಶಾಸಕರಾದ ಅರವಿಂದ ಬೆಲ್ಲದ, ಕವಟಗಿಮಠ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.