ಕೋವಿಡ್‌ ವಿರುದ್ಧ ಶಾಸಕ ರಾಮಣ್ಣ ಕಹಳೆ

Team Udayavani, May 26, 2021, 9:09 PM IST

25gadag 2a

ಪ್ರಕಾಶ ಮೇಟಿ

ಶಿರಹಟ್ಟಿ: ಶಾಸಕ ರಾಮಣ್ಣ ಲಮಾಣಿ ಕ್ಷೇತ್ರದ ಮೂರೂ ತಾಲೂಕುಗಳ ಕೋವಿಡ್‌ ಆಸ್ಪತ್ರೆಗಳಿಗೆ ಭೇಟಿ ನೀಡುವ ಮೂಲಕ ಸೋಂಕು ನಿವಾರಣೆಗೆ ವಿಶೇಷ ಪ್ರಯತ್ನ ನಡೆಸಿದ್ದಾರೆ.

ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಶಿರಹಟ್ಟಿ, ಲಕ್ಷ್ಮೇಶ್ವರ ಮತ್ತು ಮುಂಡರಗಿ ತಾಲೂಕುಗಳಿಗೊಳಪಟ್ಟಿವೆ. ಈ ಪೈಕಿ ಶಿರಹಟ್ಟಿ-ಲಕ್ಷ್ಮೇಶ್ವರ ತಾಲೂಕುಗಳಲ್ಲಿ 590, ಮುಂಡರಗಿ ತಾಲೂಕಿನ 297 ಸಕ್ರಿಯ ಪ್ರಕರಣಗಳಿವೆ. ಆದರೂ, ಜಿಲ್ಲೆಯ ಇತರೆ ಭಾಗಕ್ಕೆ ಹೋಲಿಸಿದರೆ ಈ ಭಾಗದಲ್ಲಿ ಸೋಂಕಿನ ಪ್ರಮಾಣ ಕಡಿಮೆ. ಗ್ರಾಮೀಣ ಭಾಗಕ್ಕಿಂತ ಪಟ್ಟಣಗಳಲ್ಲಿ ಸೋಂಕಿತರ ಸಂಖ್ಯೆ ತುಸು ಹೆಚ್ಚಿದೆ. ಆದರೂ ಈ ಬಾರಿ ಹಳ್ಳಿಗಳ್ಳಿಗೂ ಸೋಂಕಿನ ಕೆನ್ನಾಲಿಗೆ ಹಬ್ಬಿರುವುದು ಆತಂಕಕಾರಿ ಬೆಳವಣಿಗೆ.

ಕ್ಷೇತ್ರದ ಬಹುಭಾಗ ಲಮಾಣಿ ತಾಂಡಾಗಳನ್ನು ಹೊಂದಿದ್ದು, ಇಲ್ಲಿಯವರು ಪಟ್ಟಣ ಪ್ರದೇಶಗಳಿಗೆ ಗುಳೆ ಹೋಗುವವರ ಸಂಖ್ಯೆಗೆ ಕಡಿಮೆ ಇಲ್ಲ. ಈ ಬಾರಿ ಲಾಕ್‌ಡೌನ್‌ ಘೋಷಣೆಗೂ ಮುನ್ನ ಈ ಭಾಗದಲ್ಲಿ ಕೊರೊನಾ ಸೋಂಕು ಹೇಳಿ ಕೊಳ್ಳುವಷ್ಟಿರಲಿಲ್ಲ. ಆದರೆ, ವಲಸೆ ಕಾರ್ಮಿಕರು ಪುನಃ ತಮ್ಮ ಸ್ವಗ್ರಾಮಗಳಿಗೆ ಮರಳಿರುವುದು ಮತ್ತು ಸೋಂಕಿತರು ಬೇಕಾಬಿಟ್ಟಿ ಸಂಚರಿಸಿದ್ದರಿಂದ ಇತರರಿಗೆ ವ್ಯಾಪಿಸಿದೆ ಎಂದೇ ಹೇಳಲಾಗಿದೆ.

ಸೋಂಕಿನ ವಿರುದ್ಧ ಲಮಾಣಿ ಕಹಳೆ:

ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯಕ್ಕಿಂತ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಶಾಸಕ ರಾಮಣ್ಣ ಲಮಾಣಿ ಸೋಂಕಿನ ವಿರುದ್ಧ ಕಹಳೆ ಮೊಳಗಿಸಿದ್ದಾರೆ. ಮೂರು ತಾಲೂಕುಗಳಲ್ಲಿ ಕಾಲಕಾಲಕ್ಕೆ ಸಂಚರಿಸಿ ವೈದ್ಯರು ಹಾಗೂ ಸಿಬ್ಬಂದಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅನೇಕ ರೀತಿಯಲ್ಲಿ ಸಹಾಯ- ಸಹಕಾರ ನೀಡಿ ರೋಗಿಗಳು ಮತ್ತು ವಾರಿರ್ಯರ್ ಗಳಲ್ಲೂ ಆತ್ಮಸ್ಥೈರ್ಯ ತುಂಬುತ್ತಿದ್ದಾರೆ. ಪಿಪಿಇ ಕಿಟ್‌ ಧರಿಸಿ ಆಸ್ಪತ್ರೆಗೆ ಭೇಟಿ: ಜಿಲ್ಲೆಯಲ್ಲಿ ಮೊದಲ ಬಾರಿಗೆ ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ನಾಲ್ವರು ಮೃತಪಟ್ಟ ನಾಲ್ಕೈದು ದಿನಗಳ ಬಳಿಕ ಶಾಸಕ ರಾಮಣ್ಣ ಲಮಾಣಿ ಅವರು ಆಸ್ಪತ್ರೆಗೆ ಭೇಟಿ ನೀಡಿದರು.

ಹಿರಿವಯಸ್ಸಿನಲ್ಲೂ ಪಿಪಿಕಿಟ್‌ ಧರಿಸಿ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರೊಂದಿಗೆ ಸಂವಾದ ನಡೆಸಿ ದರು. ಆಸ್ಪತ್ರೆಯಲ್ಲಿರುವ ವ್ಯವಸ್ಥೆ, ವೈದ್ಯಕೀಯ ಸೇವೆಗಳ ಕುರಿತು ರೋಗಿಗಳಿಂದ ಸಮಾಲೋಚನೆ ನಡೆಸಿದರು. ಅದರಂತೆ ಶಿರಹಟ್ಟಿ-ಲಕ್ಷೆ¾àಶ್ವರ ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದ ಶಾಸಕರು, ಸೋಂಕಿತರ ಬಗ್ಗೆ ಆರೋಗ್ಯಾಧಿ ಕಾರಿಗಳಿಂದ ಮಾಹಿತಿ ಪಡೆದರು. ಸೋಂಕಿತರಿಗೆ ಉತ್ತಮ ವೈದ್ಯಕೀಯ ಸೇವೆ ಕಲ್ಪಿಸುವುದರ ಜತೆಗೆ ಪೌಷ್ಟಿಕ ಆಹಾರ ಒದಗಿಸಬೇಕು. ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ರೀತಿಯ ಲೋಪ ಸಹಿಸಲಾಗದೆಂದು ಎಚ್ಚರಿಸಿದರು.

ಸೋಂಕಿತರು, ಬಡವರಿಗೆ ನೆರವಿನ ಹಸ್ತ: ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸೋಂಕು ನಿವಾರಣೆ ಮತ್ತು ಲಾಕ್‌ ಡೌನ್‌ ಸಮಯದಲ್ಲಿ ಬಡವರಿಗೆ ಶಾಸಕ ರಾಮಣ್ಣ ಲಮಾಣಿ ನೆರವಿನ ಹಸ್ತಚಾಚಿ ದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಒಡೆಯರ ಮಲ್ಲಾಪೂರದ ಮುರಾರ್ಜಿ ವಸತಿ ಶಾಲೆ ಭೇಟಿ ನೀಡಿದ್ದ ಶಾಸಕರು ಸೋಂಕಿತರ ಅಹವಾಲು ಆಲಿಸಿದ್ದಾರೆ. ಸೋಂಕಿತರು ಬಿಸಿ ನೀರಿನ ಹಬೆ ತೆಗೆದುಕೊಳ್ಳಲು ಅನುಕೂಲವಾಗುವಂತೆ ಸ್ಟೀಮರ್‌ಗಳನ್ನು ಒದಗಿಸಿದ್ದಾರೆ.

ಸುಮಾರು 500 ಸ್ಟೀಮರ್‌ಗಳನ್ನು ಖರೀದಿಸಿದ್ದ ಶಾಸಕರು, ವಿವಿಧ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿರುವ ಸೋಂಕಿತರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಕೆಲ ಪೊಲೀಸರಿಗೂ ವಿತರಿಸಿದ್ದಾರೆ. ಬಡವರಿಗೆ ಮತ್ತು ಗುಡಿಸಲು ನಿವಾಸಿಗಳಿಗೆ ಆಹಾರ ಕಿಟ್‌ ವಿತರಿಸಿದ್ದಾರೆ. ವಾರಿಯರ್ಸ್‌ಗಳಾದ ಪೊಲೀಸ್‌ ಸಿಬ್ಬಂದಿಗೆ ಉಪಹಾರ ವ್ಯವಸ್ಥೆ ಮಾಡಿದ್ದಾರೆ. ಅ ಧಿಕಾರಿಗಳಿಗೆ ಎಚ್ಚರಿಕೆ: ಲಕ್ಷೆ ¾àಶ್ವರ ಸಮುದಾಯ ಆರೋಗ್ಯ ಕೇಂದ್ರದ ಕೆಲ ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಹಾಜರಾಗುತ್ತಿಲ್ಲ ಎಂದು ಸಚಿವ ಸುಧಾಕರ್‌ ಎದುರು ಪ್ರಸ್ತಾಪಿಸುವ ಮೂಲಕ ಆಲಸಿ ವೈದ್ಯಕೀಯ ಸಿಬ್ಬಂದಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಟಾಪ್ ನ್ಯೂಸ್

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.