ಆಧುನಿಕ ತಂತ್ರಜ್ಞಾನ ಶಿಕ್ಷಣ ಬದುಕಿಗೆ ಹೆದ್ದಾರಿ
ಶಾಲಾ ದಿನಗಳಲ್ಲಿಯೇ ಮಕ್ಕಳಿಗೆ ವಿಜ್ಞಾನದ ಅರಿವು ಮೂಡಿಸಿ
Team Udayavani, Aug 5, 2019, 9:37 AM IST
ಗಜೇಂದ್ರಗಡ: ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ನಡೆದ ವಿಜ್ಞಾನ, ಗಣಿತ ವಿಷಯದ ಚಿತ್ರಗಳ ರಂಗೋಲಿ ಸ್ಪರ್ಧೆಯನ್ನು ಶಾಸಕ ಕಳಕಪ್ಪ ಬಂಡಿ ವೀಕ್ಷಿಸಿದರು.
ಗಜೇಂದ್ರಗಡ: ತಾಂತ್ರಿಕ ಯುಗದಲ್ಲಿ ಆಧುನಿಕ ತಂತ್ರಜ್ಞಾನ ಶಿಕ್ಷಣ ಬದುಕಿಗೆ ಹೆದ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಶಾಲಾ ದಿನಗಳಲ್ಲಿಯೇ ಮಕ್ಕಳಿಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಇದಕ್ಕೆ ಶಿಕ್ಷಣ ಇಲಾಖೆ ಪ್ರೋತ್ಸಾಹ ನೀಡಲಾಗುವುದು ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ವಿಜ್ಞಾನ, ಗಣಿತ ವಿಷಯದ ಚಿತ್ರಗಳ ರಂಗೋಲಿ ಸ್ಪರ್ಧೆ ವೀಕ್ಷಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ವಿಜ್ಞಾನ ಸಹ ಬದಲಾವಣೆಯಾಗುತ್ತಿದೆ. ವಿಶ್ವವೇ ಇದರ ಮೇಲೆ ನಿಂತಿದೆ. ವಿದ್ಯಾರ್ಥಿಗಳು ಯಾವುದೇ ಸಣ್ಣ ಸಮಸ್ಯೆಯನ್ನು ಅಂತರ್ಜಾಲ ತಾಣದಲ್ಲಿ ಹುಡುಕಿ ಪರಿಹಾರ ಕಂಡುಕೊಳ್ಳುವಷ್ಟರ ಮಟ್ಟೆಗೆ ವಿಜ್ಞಾನ ಕ್ಷಿಪ್ರ ಕ್ರಾಂತಿಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಭವಿಷ್ಯ ಭಾರತದ ಬುನಾದಿಯಾಗಿದೆ. ವಿಜ್ಞಾನ ತಂತ್ರಜ್ಞಾನಗಳ ಪರಿಚಯ, ವಿಜ್ಞಾನ ಗೋಷ್ಠಿ, ಪ್ರಾಯೋಗಿಕ ಪ್ರಾತ್ಯಕ್ಷಿಕೆ ಸೇರಿ ಇನ್ನಿತರ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರತರಲು ಶಿಕ್ಷಕರು ಹಾಗೂ ಪಾಲಕರು ಶ್ರಮಿಸಬೇಕಾಗಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂದರ್ಭದಲ್ಲಿ ವಿಜ್ಞಾನ ವಿಷಯ ಕಠಿಣ ಆಗಬಾರದು ಎನ್ನುವ ಉದ್ದೇಶದಿಂದ ಇಂಥಹ ಸ್ಪರ್ಧೆಗಳನ್ನು ಪ್ರತಿಯೊಂದು ಸರಕಾರಿ ಶಾಲೆಗಳಲ್ಲಿ ಹಮ್ಮಿಕೊಳ್ಳುವ ಮೂಲಕ ವಿದ್ಯಾಭ್ಯಾಸಕ್ಕೆ ಪೂರಕವಾಗುವಂತಹ ವಾತಾವರಣ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಮುಖ್ಯೋಪಾಧ್ಯಾಯ ಜಾಲಿಹಾಳ ಮಾತನಾಡಿ, ವಿದ್ಯಾರ್ಥಿಗಳಿಗೆ ವೈಜ್ಞಾನಿಕ ವಿಷಯಗಳ ಸ್ಥೂಲ ಪರಿಚಯ ತೀರಾ ಅವಶ್ಯಕವಾಗಿದೆ. ವಿಜ್ಞಾನ ಎಂದರೆ ನಿಖರವಾದ ಮತ್ತು ಸಂದೇಹಗಳಿಲ್ಲದ ವಿಶೇಷ ಜ್ಞಾನವಾಗಿದೆ. ವಿಜ್ಞಾನ ಮೂಲಕ ನಿರೀಕ್ಷಿತ ಫಲ ಕಂಡುಕೊಳ್ಳಬಹುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿಜ್ಞಾನ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಕರಾದ ಕೆ.ಎಸ್. ರಾಜೂರ, ಐ.ಎಸ್. ಬದಾಮಿ ಎಫ್.ಎಚ್. ಡಾಲಾಯತ್, ಎಸ್.ಡಿ. ಕುರಿ, ಎಸ್.ಡಿ. ಕೋಲಕಾರ, ಎನ್.ಜಿ. ಹೊಸಮನಿ, ಎಂ.ವಿ. ಲೂತಿಮಠ, ಕೆ.ಸಿ. ಲಮಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.