ಅವಳಿ ನಗರದಲ್ಲಿ ಒಂದು ಗಂಟೆಗೂ ಅಧಿಕ ಮಳೆ
Team Udayavani, Jul 12, 2020, 12:22 PM IST
ಗದಗ: ಅವಳಿ ನಗರದಲ್ಲಿ ವರುಣನ ಆರ್ಭಟ ಶನಿವಾರವೂ ಮುಂದುವರಿದಿದೆ. ಅವಳಿ ನಗರದಲ್ಲಿ ಒಂದೂವರೆ ಗಂಟೆ ಕಾಲ ಬಿರುಸಿನ ಮಳೆ ಸುರಿಯಿತು.
ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಮನೆ ಮಾಡಿತ್ತು. ಸಂಜೆ 4 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಸುಮಾರು ಒಂದೂವರೆ ಗಂಟೆಗಳ ಕಾಲ ಬಿಟ್ಟು ಬಿಡದಂತೆ ಬಿರುಸಿನಿಂದ ಮಳೆಯಾಯಿತು. ಮಳೆಯಿಂದ ಇಲ್ಲಿನ ಹೊಂಬಳ ನಾಕಾ ಜನತಾ ಕಾಲೋನಿ, ಎಸ್.ಎಂ. ಕೃಷ್ಣಾ ನಗರ, ಅಂಬೇಡ್ಕರ್ ನಗರ, ಸಿದ್ರಾಮೆಶ್ವರ ನಗರ, ಕಂಬಾರ ಸಾಲ, ಜವಳಗಲಿ ಹಾಗೂ ಬೆಟಗೇರಿ ವ್ಯಾಪ್ತಿಯ ತಗ್ಗು ಪ್ರದೇಶದ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗಿದ್ದರಿಂದ ಅವಾಂತರ ಸೃಷ್ಟಿಯಾಯಿತು. ಮಳೆ ನೀರು ಮನೆಗೆ ನುಗ್ಗಿದ್ದರಿಂದ ಜನರು ಅಗತ್ಯ ವಸ್ತುಗಳು ಹಾಗೂ ಪಾತ್ರೆಗಳನ್ನು ರಕ್ಷಿಸಿಕೊಳ್ಳಲು ಪರದಾಡುವಂತಾಯಿತು. ಇದೇ ವೇಳೆ ಭಾರಿ ಮಳೆಯಿಂದಾಗಿ ಇಲ್ಲಿನ ಜನರಲ್ ಕಾರ್ಯಪ್ಪ ವೃತ್ತ, ಮಹೇಂದ್ರಕರ ಸರ್ಕಲ್ ಹಾಗೂ ರೈಲ್ವೇ ಬ್ರಿಡ್ಜ್ ಮತ್ತಿತರೆ ಭಾಗದಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ಅದರಂತೆ ತಾಲೂಕಿನ ಹುಲಕೋಟಿ, ಕುರ್ತಕೋಟಿ, ಹರ್ತಿ ಹಾಗೂ ನಾಗಾವಿ ಭಾಗದಲ್ಲೂ ಉತ್ತಮ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.