ಭರ್ತಿಯಾಗಬೇಕಿದೆ ಬಹುತೇಕ ಕೆರೆಗಳು; ಬಳಕೆಗೆ ಸೀಮಿತವಾದ ಕೆರೆಗಳು-192
Team Udayavani, Jun 20, 2024, 5:23 PM IST
ಉದಯವಾಣಿ ಸಮಾಚಾರ
ಗದಗ: ಜಿಲ್ಲೆ ಕಳೆದ ಕೆಲ ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿ ಜತೆಗೆ ನೆರೆ ಹಾಗೂ ಬರಗಾಲದಂತಹ ಪರಿಸ್ಥಿತಿ ಅನುಭವಿಸಿದೆ. ಇದರಿಂದ ಕೆಲ ಕೆರೆಗಳು ಭರ್ತಿಯಾಗಿ ಕೋಡಿ ಹರಿದಿದ್ದರೆ, ಇನ್ನೂ ಕೆಲವು ಕೆರೆಗಳು ನೀರಿಲ್ಲದೇ ಬತ್ತಿ ಹೋದ ಉದಾಹರಣೆ ಸಾಕಷ್ಟಿವೆ. ಜಿಲ್ಲೆಯಲ್ಲಿ ನೀರಾವರಿ ಮತ್ತು ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ 22 ಕುಡಿಯಲು ಯೋಗ್ಯವಾದ ಕೆರೆಗಳು, 192 ಬಳಕೆಗೆ ಸೀಮಿತವಾದ ಕೆರೆಗಳು ಸೇರಿ ಒಟ್ಟು 214 ಕೆರೆಗಳಿದ್ದು, ಬಹುತೇಕ ಕೆರೆಗಳು ಮಳೆಯ ನೀರನ್ನೇ ನೆಚ್ಚಿಕೊಂಡಿವೆ. ಆದರೆ ಸದ್ಯ ಮುಂಗಾರು ಚಾಲ್ತಿಯಲ್ಲಿದ್ದು, ಕಳೆದ 15 ದಿನಗಳಲ್ಲಿ ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಬಹುತೇಕ
ಕೆರೆಗಳು ತುಂಬದಿದ್ದರೂ ತಕ್ಕಮಟ್ಟಿನ ನೀರು ಶೇಖರಣೆಯಾಗಿದೆ.
ಇನ್ನು ತುಂಗ-ಭದ್ರಾ ಎಡದಂಡೆ ಕಾಲುವೆ ಮೂಲಕ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ, ಡಂಬಳ, ಶಿರೋಳ, ತಾಮ್ರಗುಂಡಿ, ನಾಗರಳ್ಳಿ, ಜಂತ್ಲಿ ಶಿರೂರು ಸೇರಿ 15 ಕೆರೆಗಳು, 20ಕ್ಕೂ ಹೆಚ್ಚು ಚೆಕ್ ಡ್ಯಾಂಗಳಿಗೆ ಹಾಗೂ ಗದಗ ತಾಲೂಕಿನ ಲಕ್ಕುಂಡಿ, ಸಂಭಾಪುರ, ಕಳಸಾಪುರ, ಕಣಗಿನಹಾಳ ಸೇರಿ 8 ಗ್ರಾಮದ ಕೆರೆಗಳಿಗೆ ಕಳೆದ ಕೆಲ ವರ್ಷಗಳ ಹಿಂದೆ ನದಿ ನೀರು ಹರಿಸಿದ್ದರಿಂದ ಪುನಶ್ಚೇತನಗೊಂಡಿದ್ದವು. ಆದರೆ ಕಳೆದ ವರ್ಷ ಬರಗಾಲ ಆವರಿಸಿದ್ದರಿಂದ ಕೆರೆಗಳು ನದಿ ನೀರನ್ನು ಕಂಡಿಲ್ಲ.
ಸಣ್ಣ ನೀರಾವರಿ ವ್ಯಾಪ್ತಿಯ ಕೆರೆಗಳು 32: ಜಿಲ್ಲೆಯ ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಮುಂಡರಗಿ ತಾಲೂಕಿನಲ್ಲಿ 11, ಗಜೇಂದ್ರಗಡ 9, ಶಿರಹಟ್ಟಿ ತಾಲೂಕಿನಲ್ಲಿ 5, ಗದಗ ತಾಲೂಕಿನಲ್ಲಿ 4 ಹಾಗೂ ಲಕ್ಷ್ಮೇಶ್ವರ ತಾಲೂಕಿನಲ್ಲಿ 3 ಸೇರಿ ಜಿಲ್ಲಾದ್ಯಂತ 32 ಕೆರೆಗಳಿದ್ದು, ಇವುಗಳಲ್ಲಿ ಮುಂಡರಗಿ ತಾಲೂಕಿನ ಡಂಬಳ, ಜಂತ್ಲಿಶಿರೂರ, ಪೇಠಾಲೂರ ಹಾಗೂ ಶಿರೋಳ ಕೆರೆಗಳಿಗೆ ಮಾತ್ರ ನದಿ ಮೂಲಕ ನೀರು ಹರಿಸಲಾಗುತ್ತಿತ್ತು. ಕಳೆದ ವರ್ಷ ಬರಗಾಲದಿಂದ ನದಿಯಲ್ಲೇ ನೀರಿಲ್ಲದ ಕಾರಣ ನೀರು ಹರಿಸಲಾಗಿಲ್ಲ. ಇದರಿಂದ ಕೆರೆಗಳು ಸಂಪೂರ್ಣ ಖಾಲಿಯಾಗಿವೆ.
ಸಣ್ಣ ನೀರಾವರಿ ಕೆರೆಗಳ ವಿಸ್ತೀರ್ಣ-ಅಚ್ಚುಕಟ್ಟು ಪ್ರದೇಶ: ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಮುಂಡರಗಿ ತಾಲೂಕಿನ 11 ಕೆರೆಗಳ 776.76 ಹೆಕ್ಟೇರ್ ಪ್ರದೇಶದಲ್ಲಿ 4,330.88 ಹೆಕ್ಟೇರ್ ಅಚ್ಚು ಪ್ರದೇಶವಿದೆ. ಶಿರಹಟ್ಟಿ ತಾಲೂಕಿನ 5 ಕೆರೆಗಳ 243.50 ಹೆಕ್ಟೇರ್ ಪ್ರದೇಶದಲ್ಲಿ 1,294.70 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ.
ಗಜೇಂದ್ರಗಡ-ರೋಣ ತಾಲೂಕಿನ 9 ಕೆರೆಗಳ 170.78 ಹೆಕ್ಟೇರ್ ಪ್ರದೇಶವಿದ್ದು, 905.31 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ. ತಾಲೂಕಿನ 4 ಕೆರೆಗಳ 126.97 ಹೆಕ್ಟೇರ್ ಪ್ರದೇಶವಿದ್ದು, 967 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ. ಲಕ್ಷೇ¾ಶ್ವರ ತಾಲೂಕಿನ 3 ಕೆರೆಗಳ 61.92 ಹೆಕ್ಟೇರ್ ಪ್ರದೇಶವಿದ್ದು, 222.69 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ. ಜಿಲ್ಲೆಯಲ್ಲಿ ಒಟ್ಟಾರೆ 32 ಕೆರೆಗಳ ವಿಸ್ತೀರ್ಣ 1,379.93 ಹೆಕ್ಟೇರ್ ಪ್ರದೇಶ ಹೊಂದಿದೆ. ಅದರಲ್ಲಿ 7,520.58 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಹೊಂದಿದೆ.
ಕಳೆದ ಎರಡು ವರ್ಷಗಳಿಂದ ಯಾವುದೇ ಅನುದಾನವಿರದ ಕಾರಣ ಜಿಲ್ಲೆಯ ಸಣ್ಣ ನೀರಾವರಿ ವ್ಯಾಪ್ತಿಯ ಕೆರೆಗಳ ಹೂಳೆತ್ತುವುದು ಮತ್ತು ಬೌಂಡರಿಂಗ್ ಕ್ರಂಚ್ ಹಾಕುವುದು ಸೇರಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಅನುದಾನ ಬಿಡುಗಡೆಗೊಂಡ ನಂತರ ಆದ್ಯತೆ ಮೇರೆಗೆ ಹೂಳೆತ್ತುವುದು ಸೇರಿ ಕೆರೆಗಳ ಬೌಂಡರಿಂಗ್ ಕ್ರಂಚ್ ಹಾಕಲು ಸೂಕ್ತ
ಕ್ರಮ ಕೈಗೊಳ್ಳಲಾಗುವುದು.
●ಎನ್. ಚಂದ್ರಶೇಖರ, ಸಹಾಯಕ
ಕಾರ್ಯನಿರ್ವಾಹಕ ಎಂಜಿನಿಯರ್, ಸಣ್ಣ ನೀರಾವರಿ.
■ ಅರುಣಕುಮಾರ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.