ಮುಂಡರಗಿ: ಅಕ್ರಮ ಸಾಗುವಳಿ ಭೂಮಿಯ ತೆರವು ವಿರೋಧಿಸಿ ವಿಷ ಸೇವಿಸಿದ್ದ ಮಹಿಳೆ ಸಾವು
Team Udayavani, Mar 7, 2022, 7:45 PM IST
ಮುಂಡರಗಿ: ಅರಣ್ಯ ಇಲಾಖೆ ನಡೆಸುತ್ತಿರುವ ಅಕ್ರಮ ಸಾಗುವಳಿ ಭೂಮಿಯ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ವಿಷ ಸೇವಿಸಿದ ಇಬ್ಬರು ಮಹಿಳೆಯರಲ್ಲಿ ಒಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೆಲೂರು ಗ್ರಾಮದ ನಿರ್ಮಲಾ ಪಾಟೀಲ (34) ಮೃತ ಮಹಿಳೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಅರಣ್ಯ ಇಲಾಖೆಯ ವಾಹನಕ್ಕೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ನಲ್ಲಿದ್ದಾರೆ.
ಘಟನೆ ಹಿನ್ನೆಲೆ: ಕಪ್ಪತ್ತಹಿಲ್ಸ್ ಅರಣ್ಯ ಇಲಾಖೆ ನಡೆಸುತ್ತಿರುವ ಅಕ್ರಮ ಸಾಗುವಳಿ ಭೂಮಿಯ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಇಬ್ಬರು ಮಹಿಳೆಯರು ಕ್ರೀಮಿನಾಶಕ ವಿಷ ಸೇವಿಸಿದ್ದರು. ತಕ್ಷಣ ಇಬ್ಬರನ್ನು ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಅವರಲ್ಲಿ ನಿರ್ಮಲಾ ಪಾಟೀಲ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.