Mundargi; ನೀರಾವರಿ ಇಲಾಖೆ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ
Team Udayavani, Jun 27, 2024, 7:58 PM IST
ಮುಂಡರಗಿ: ಕಾಲುವೆ ನೀರು ಜಮೀನಿಗೆ ನುಗ್ಗಿ ಭತ್ತದ ಬೆಳೆ ಹಾಳಾದ ಹಿನ್ನಲೆಯಲ್ಲಿ ರೈತನೊಬ್ಬ ನೀರಾವರಿ ಇಲಾಖೆ ಕಚೇರಿಗೆ ತೆರಳಿ ಅಧಿಕಾರಿಗಳ ಎದುರೇ ಫ್ಯಾನಿಗೆ ಹಗ್ಗ ಕಟ್ಟಿ ನೇಣು ಹಾಕಿಕೊಳ್ಳಲು ಮುಂದಾದ ಘಟನೆ ಗುರುವಾರ ನಡೆದಿದೆ.
ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಶಿವರಾಜ್ ಹೊಳಿಯಾಚೆ ಎನ್ನುವ ರೈತ ಆತ್ಮಹತ್ಯೆಗೆ ಯತ್ನಿಸಿದ್ದು,ಕಚೇರಿಯಲ್ಲಿದ್ದವರು ತಡೆದಿದ್ದಾರೆ.
ಜಮೀನಿನಲ್ಲಿ ಹಾದು ಹೋಗಿರುವ ಶಿಂಗಟಾಲೂರು ಏತ ನೀರಾವರಿ ಕಾಲುವೆಯ ನೀರು ಉಕ್ಕಿ ಹರಿದು ಜಮೀನಿಗೆ ನುಗ್ಗಿ ಬೆಳೆಗಳು ಹಾನಿಯಾಗಿದ್ದವು. ಇದರಿಂದ ಬೇಸತ್ತು ನೇರವಾಗಿ ಕಚೇರಿಗೆ ಬಂದು ಆತ್ಮಹತ್ಯೆಗೆ ಮುಂದಾಗಿದ್ದಾನೆ ಎಂದು ತಿಳಿದು ಬಂದಿದೆ.
ಹಲವು ವರ್ಷಗಳಿಂದ ಬೆಳೆಹಾನಿಗೆ ಪರಿಹಾರ ನೀಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪರಿಹಾರ ನೀಡದೇ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವರಾಜ್ ಮಾತ್ರವಲ್ಲದೆ ಮಲ್ಲಪ್ಪ ಸುಣಗಾರ ಸೇರಿದಂತೆ ಅಕ್ಕಪಕ್ಕದ ರೈತರ ಜಮೀನುಗಳಿಗೂ ಕಾಲುವೆ ನೀರು ನುಗ್ಗಿ ಹಾನಿಯಾಗಿದೆ. ಕಾಲುವೆ ನೀರು ಸರಾಗವಾಗಿ ಹರಿದು ಹೋಗದ ಹಿನ್ನೆಲೆ ಜಮೀನಿಗೆ ನುಗ್ಗಿ ಹಾನಿಯಾಗುತ್ತಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.