ಸುರಕ್ಷತಾ ಕ್ರಮದೊಂದಿಗೆ ಉದ್ಯೋಗ ಖಾತ್ರಿಗೆ ಚಾಲನೆ
Team Udayavani, Apr 28, 2020, 5:09 PM IST
ಸಾಂದರ್ಭಿಕ ಚಿತ್ರ
ನರಗುಂದ: ತಾಲೂಕಿನಲ್ಲಿ ಕೃಷಿ ಇಲಾಖೆ ವತಿಯಿಂದ ವಿವಿಧ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೃಷಿ ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಕೋವಿಡ್-19 ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧವನ್ನು ಉದ್ಯೋಗ ಖಾತ್ರಿ ಯೋಜನೆಗೆ ವಿನಾಯಿತಿ ನೀಡಿದ್ದರಿಂದ ಕೆಲಸ ಪ್ರಾರಂಭಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಚನ್ನಪ್ಪ ಅಂಗಡಿ ಅವರು ತಿಳಿಸಿದ್ದಾರೆ.
ನರೇಗಾ ಕಾಮಗಾರಿ ಕೈಗೊಳ್ಳಲು ರೈತರು, ಕೂಲಿ ಕಾರ್ಮಿಕರು ಮುಂದೆ ಬರುತ್ತಿದ್ದು ಬಹುತೇಕ ಪಂಚಾಯತ್‌ಗಳಲ್ಲಿ ಕೆಲಸ ಪುನರಾರಂಭವಾಗಿದೆ. 2019-20ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಅನುಮೋದನೆಗೊಂಡು ಕಾಮಗಾರಿ ಅನುಷ್ಠಾನವಾಗದೇ ಇರುವ ಜಮೀನಿನ ರೈತರು ಕೃಷಿ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದೆ. ಹೊಸದಾಗಿ ಕಾಮಗಾರಿ ಸೇರಿಸಬಯಸುವ ರೈತರು ಗ್ರಾಮ ಪಂಚಾಯತ್ ಅಧಿಕಾರಿಗಳನ್ನಾಗಲಿ, ಕೃಷಿ ಇಲಾಖೆಯನ್ನಾಗಲಿ ಸಂಪರ್ಕಿಸಿ ಸೂಕ್ತ ದಾಖಲೆಗಳನ್ನು ನೀಡಿದರೆ ಅರ್ಹ ಫಲಾನುಭವಿಗಳ ಹೆಸರನ್ನು ಪ್ರಸ್ತುತ ಸಾಲಿನ ಕ್ರಿಯಾ ಯೋಜನೆಯಲ್ಲಿ ಸೇರಿಸಬಹುದಾಗಿದೆ. ಜಮೀನಿನಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಒಳಗಟ್ಟಿ, ಎರೆಹುಳು ತೊಟ್ಟಿ ನಿರ್ಮಾಣ ಮಾಡಲು ರೈತರು ಮುಂದೆ ಬರಬೇಕೆಂದು ಕೋರಿಕೊಳ್ಳಲಾಗಿದೆ. ಸದರಿ ಯೋಜನೆ ಮಾರ್ಗಸೂಚಿ, ನಿಯಮಾವಳಿ ಪ್ರಕಾರ ಮಾತ್ರ ಕಾಮಗಾರಿ ನಿರ್ಮಿಸಿಕೊಳ್ಳಲು ವಿನಂತಿಸಲಾಗಿದೆ.
ಸುರಕ್ಷತಾ ಕ್ರಮ: ಸದ್ಯ ಕೋವಿಡ್-19 ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಪೂರೈಸಲು ಸೂಚಿಸಲಾಗಿದೆ. ಕಾಮಗಾರಿ ಸಂದರ್ಭದಲ್ಲಿ 4, 5 ಕೂಲಿ ಕಾರ್ಮಿಕರಿಂದ ಚಿಕ್ಕ ಚಿಕ್ಕ ಗುಂಪುಗಳಲ್ಲಿ ಪ್ರತ್ಯೇಕವಾಗಿದ್ದುಕೊಂಡು ಕೆಲಸ ಮಾಡಲು ತಿಳಿಸಲಾಗಿದೆ. ಪ್ರತಿಯೊಬ್ಬರು ಮಾಸ್ಕ್ ಧರಿಸಿಕೊಂಡು ಬರುವುದು ಕಡ್ಡಾಯವಾಗಿದೆ. ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಯಶಸ್ವಿ ಅನುಷ್ಠಾನಕ್ಕೆ ರೈತರು, ಕೂಲಿ ಕಾರ್ಮಿಕರ ಸಹಕಾರ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆ ಅಥವಾ ಗ್ರಾಮ ಪಂಚಾಯತ್ ಸಂಪರ್ಕಿಸಲು ಸೂಚನೆ ನೀಡಲಾಗಿದೆ ಎಂದು ಚನ್ನಪ್ಪ ಅಂಗಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.