‘ಕಳಕಾಪುರ’ದತ್ತ  ಇಲ್ಲ ‘ಕಾಳಜಿ’

ಚುನಾವಣೆ ಬಂದಾಗ ಗ್ರಾಮದ ನೆನಪು  ಗ್ರಾಮಕ್ಕಿಲ್ಲ ಸಮರ್ಪಕ ಸಾರಿಗೆ ವ್ಯವಸ್ಥೆ 

Team Udayavani, Mar 28, 2019, 5:42 PM IST

28-March-18

ನರೇಗಲ್ಲ: ಕಳಕಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಚರಂಡಿ ನೀರು ನಿಂತಿರುವುದು

ನರೇಗಲ್ಲ: ಚುನಾವಣೆ ಸಮಯದಲ್ಲಿ ಮತದಾರರಿಗೆ ಹಲವು ರೀತಿಯ ಆಶ್ವಾಸನೆನೀಡಿ ಮತ ಪಡೆಯುವ ಜನಪ್ರತಿನಿಧಿಗಳು ಗೆದ್ದ ಮೇಲೆ ಅತ್ತ ಕಡೆ ತಲೆಯೂ ಹಾಕುವುದಿಲ್ಲ ಎಂಬುದಕ್ಕೆ ಕಳಕಾಪುರ ಗ್ರಾಮವೇ ಸಾಕ್ಷಿಯಾಗಿದೆ.
 ಹೊಸಳ್ಳಿ ಗ್ರಾಮ ಪಂಚಾಯತ್‌ಗೆ ಒಳಪಡುವ ಈ ಗ್ರಾಮ ಮೂವರು ಗ್ರಾಪಂ ಸದಸ್ಯರನ್ನು ಹೊಂದಿದೆ. ಈ ಗ್ರಾಮ ಇಟಗಿ ತಾಪಂ ಕ್ಷೇತ್ರ ಹಾಗೂ ನಿಡಗುಂದಿ ಜಿಪಂ ವಿಭಾಗಕ್ಕೆ ಒಳಪಟ್ಟಿದ್ದು, ಮೂಲ ಸೌಲಭ್ಯ ಮಾತ್ರ ಮರೀಚಿಕೆಯಾಗಿದೆ.
1200 ಮತದಾರರನ್ನು ಹೊಂದಿರುವ ಗ್ರಾಮ ಸರ್ಕಾರಿ ಪ್ರೌಢಶಾಲೆ ಇದೆ. ಗ್ರಾಮದಲ್ಲಿ ಅ ಧಿಕ ಕುಟುಂಬಗಳು ಕೃಷಿ ಅವಲಂಬಿಸಿವೆ. ಗ್ರಾಮಸ್ಥರಿಗೆ ಮಾರುಕಟ್ಟೆ ಅನಿವಾರ್ಯತೆ ಇದೆ. ಆದರೆ ಇಂದಿಗೂ ಗ್ರಾಮಕ್ಕೆ ಸಮರ್ಪಕ ಸಾರಿಗೆ ಸಂಚಾರವಿಲ್ಲ. ಹೀಗಾಗಿ ಇಲ್ಲಿನ ನಿವಾಸಿಗಳಿಗೆ
ಕಾಲ್ನಡಿಗೆಯೇ ಅನಿವಾರ್ಯವಾದಂತಾಗಿದೆ. ಅಧಿಕಾರಿಗಳು-ಜನಪ್ರತಿನಿಧಿಗಳು ಸಾರಿಗೆ ಸೌಲಭ್ಯ ನೀಡುವ ಗೋಜಿಗೆ ಹೋಗಿಲ್ಲ.
ಚರಂಡಿ ದುರ್ವಾಸನೆ: ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಅನೇಕ ಗ್ರಾಮಗಳು ಅಭಿವೃದ್ಧಿಯತ್ತ ಹೆಜ್ಜೆ ಹಾಕಿದ್ದು, ಈ ಗ್ರಾಮವು ಇದಕ್ಕೆ ವಿರುದ್ಧ ಎನ್ನುವಂತಿದೆ. ಮುಖ್ಯವಾಗಿ ಗ್ರಾಮವನ್ನು ಸಂಪರ್ಕಿಸುತ್ತಿದ್ದಂತೆ ಚರಂಡಿ ದುರ್ವಾಸನೆ ಬೀರುತ್ತದೆ. ಇಲ್ಲಿ ರಸ್ತೆ ಯಾವುದೋ.. ಚರಂಡಿ ಯಾವುದೋ ಎಂಬುದೇ
ತಿಳಿಯದಂತಾಗಿದೆ. ರಸ್ತೆಯಲ್ಲಿ ಅಳವಾದ ತಗ್ಗುಗಳು ಬಿದ್ದಿದ್ದರೂ ಇತ್ತ ಯಾರೂ ಗಮನ ಹರಿಸಿಲ್ಲ.
ಹೆಸರಿಗೆ ಮಾತ್ರ ಶುದ್ಧ ಕುಡಿವ ನೀರಿನ ಘಟಕ: ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹೆಸರಿಗೆ ಮಾತ್ರ ಇದ್ದು, ಇಂದಿಗೂ ಕಾರ್ಯನಿರ್ವಹಿಸುತ್ತಿಲ್ಲ. ಸರ್ಕಾರ ಲಕ್ಷಾಂತರ ರೂ. ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದ್ದು, ನಿರ್ವಹಣೆಯಿಲ್ಲದೆ ಶುದ್ಧ ನೀರು ಪೂರೈಕೆ ಸ್ಥಗಿತಗೊಂಡಿದೆ. ಇದರ ಜವಾಬ್ದಾರಿ ವಹಿಸಿಕೊಂಡಿರುವ ಭೂ ಸೇನಾ ನಿಗಮವು ನಮಗೂ ಘಟಕಕ್ಕೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದೆ.
 ಗ್ರಾಮದ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಹಾಗೂ ಅ ಧಿಕಾರಿಗಳಿಗೆ ತಿಳಿಸಿದ್ದೇವೆ. ಇಲ್ಲಿಯವರೆಗೂ ಯಾರೂ ಗ್ರಾಮದತ್ತ ಬಂದಿಲ್ಲ. ಚುನಾವಣೆಗಳು ಬಂದಾಗ ಮಾತ್ರ ಜನಪ್ರತಿನಿಧಿಗಳಿಗೆ ಕಳಕಾಪುರ ನೆನಪಾಗುತ್ತದೆ. ನಂತರ ಯಾರೂ ಇತ್ತ ನೋಡುವುದಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.
ಕಳೆದ ಒಂದೂವರೆ ತಿಂಗಳಿಂದ ಹೊಸಳ್ಳಿ ಗ್ರಾಪಂ ಅಧಿಕಾರ ವಹಿಸಿಕೊಂಡಿದ್ದೇನೆ. ಕೂಡಲೇ
ಕಳಕಾಪುರ ಗ್ರಾಮಕ್ಕೆ ತೆರಳಿ ಅಲ್ಲಿನ ಸಮಸ್ಯೆಗಳನ್ನು ಬಗ್ಗೆಹರಿಸಲು ಪ್ರಯತ್ನಿಸುತ್ತೇನೆ.
ಲೋಹಿತ್‌, ಗ್ರಾಪಂ ಅಭಿವೃದ್ಧಿ ಅಧಿಕಾರಿ

ಟಾಪ್ ನ್ಯೂಸ್

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.