ಸಮರ್ಪಕ ನೀರು ಪೂರೈಸಲು ಜಿಲ್ಲಾಧಿಕಾರಿ ಸೂಚನೆ
ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರ ವಿತರಿಸಿ
Team Udayavani, Apr 15, 2020, 6:35 PM IST
ನರೇಗಲ್ಲ: ಪಪಂ ಕಾರ್ಯಾಲಯಕ್ಕೆ ಸೋಮವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ನರೇಗಲ್ಲ: ಸ್ಥಳೀಯ ಪಪಂ ಕಾರ್ಯಾಲಯಕ್ಕೆ ಸೋಮವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿ, ಕುಡಿಯುವ ನೀರು ಮತ್ತು ಬಹುಗ್ರಾಮ ಕುಡಿಯುವ ನೀರು ಸರಬರಾಜು ಮಾಡುವ ಬಗ್ಗೆ ಹಾಗೂ ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಮುಖ್ಯಾಧಿಕಾರಿ ಎಂ.ಎ. ನುರಾಲ್ಲಾಖಾನ ಅವರನ್ನು ತರಾಟೆಗೆ ತಗೆದುಕೊಂಡು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಟ್ಟಣದ ಜನತೆಗೆ ಕುಡಿಯುವ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ. ಮೇಲಿಂದ ಮೇಲೆ ಜಿಲ್ಲಾದಳಿತ ಕಚೇರಿಗೆ ದೂರುಗಳು ಬರುತ್ತಿವೆ. ಈಗಾಗಲೇ ಜಿಲ್ಲಾಡಳಿತದಿಂದ ಕುಡಿಯುವ ನೀರಿನ ಯೋಜನೆಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡುತ್ತಿದೆ. ಸಮರ್ಪಕವಾಗಿ ಬಳಕೆ ಮಾಡಬೇಕು. ಪಟ್ಟಣದ ಜನತೆಗೆ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ನಿರ್ಲಕ್ಷ್ಯ
ಧೋರಣೆ ಸಲ್ಲದು. ಕೂಡಲೇ ಪಟ್ಟಣದಲ್ಲಿರುವ ಖಾಸಗಿ ಕೊಳವೆ ಬಾವಿಗಳ ಮಾಲೀಕರ ಸಭೆ ನಡೆಸಿ, ಅವರಿಂದ ಕೊಳವೆಬಾವಿಗಳನ್ನ ಬೇಸಿಗೆ ಮುಗಿಯುವರೆಗೂ ಇಲಾಖೆಗೆ ಪಡೆದುಕೊಳ್ಳಿ. ಅದಕ್ಕೆ ಅನುದಾನವನ್ನು ನೀಡುವುದಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ಅಲ್ಲದೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ವಾರದೊಳಗೆ ಸರಬರಾಜು ನೀರು ಮಾಡುವಂತೆ ಡಿಬಿಟಿಒ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Ranji Trophy: ಭಾರತ ಕ್ರಿಕೆಟ್ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?
Bigg Boss: ಟಾಸ್ಕ್ ಮೂಲಕ ನಡೆಯಿತು ಮಿಡ್ ವೀಕ್ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್
Gundlupete: ಮಾರಾಟದ ಉದ್ದೇಶದಿಂದ ಗಾಂಜಾ ಗಿಡ ಬೆಳೆದವನ ಬಂಧನ
Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ
Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.