Nargund: ಶಿರೋಳ ತೋಂಟದಾರ್ಯ ಮಠದ ಗುರುಬಸವ ಶ್ರೀ ಅಂತ್ಯಕ್ರಿಯೆ

Team Udayavani, Nov 15, 2023, 2:15 PM IST

Nargund: ಶಿರೋಳ ತೋಂಟದಾರ್ಯ ಮಠದ ಗುರುಬಸವ ಶ್ರೀ ಅಂತ್ಯಕ್ರಿಯೆ

ನರಗುಂದ: ಲಿಂಗೈಕ್ಯರಾಗಿದ್ದ ತಾಲೂಕಿನ ಶಿರೋಳ ತೋಂಟದಾರ್ಯ ಮಠದ ಶ್ರೀ ಮನಿಪ್ರ ಗುರುಬಸವ ಮಹಾಸ್ವಾಮಿಗಳ ಅಂತ್ಯಕ್ರಿಯೆ ಗದಗ ತೋಂಟದಾರ್ಯ ಮಠದ ಡಾ|ಸಿದ್ಧರಾಮ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬಸವ ತತ್ವದ ಪ್ರಕಾರ ವಚನ ಘೋಷಣೆದೊಂದಿಗೆ ನೆರವೇರಿತು.

ಬೆಳಗಾವಿ ಜಿಲ್ಲೆಯ ಚಿಂಚಣಿಯಿಂದ ರವಿವಾರ ರಾತ್ರಿ 9-30 ಸುಮಾರಿಗೆ ಶಿರೋಳ ಗ್ರಾಮದ ಆಗಮಿಸಿದ ಪೂಜ್ಯರ ಪಾರ್ಥಿವ ಶರೀರದ ಅಂತಿಮ ಯಾತ್ರೆ ತೆರೆದ ವಾಹನದಲ್ಲಿ ನೆರವೇರಿತು. ಈ ಮೊದಲೇ ನಿರ್ಮಿಸಲಾಗಿದ್ದ ಸಮಾಧಿಯಲ್ಲಿ ಅಂದು ತಡರಾತ್ರಿ 11-35 ರ ಸುಮಾರಿಗೆ ತೋಂಟದ ಜ.ಡಾ|ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸನ್ನಿಧಾನ ಹಾಗೂ ಹರ ಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮಿಗಳು, ನವಲಗುಂದ ಗವಿಮಠದ ಶ್ರೀ ಬಸವಲಿಂಗ ಸ್ವಾಮಿಗಳು, ಸೊಂಡೂರ ಪ್ರಭು ಸ್ವಾಮಿಗಳು, ಹರ್ತಿಕೇರಿ ಶಾಂತಲಿಂಗ ದೇಶೀಕೇಂದ್ರ ಸ್ವಾಮಿಗಳು, ಆಡಿ ಸಿದ್ದೇಶ್ವರ ಸ್ವಾಮಿಗಳು, ಅವರಾದಿ ಶಿವಕುಮಾರ ಸ್ವಾಮಿಗಳು, ಬಾದಾಮಿ ಶಿವಪೂಜಾ ಶಿವಾಚಾರ್ಯರು, ಸಿಂಧನೂರ ಸಿದ್ಧಲಿಂಗ ಶಿವಾಚಾರ್ಯರು, ಗದಗ ಶಿವಾನಂದ ಮಠದ ಅಭಿನವ ಶಿವಾನಂದ ಸ್ವಾಮಿಗಳು, ಮುದಗಲ್ಲ ಮಹಾಂತ ಸ್ವಾಮಿಗಳು, ಕಿತ್ತಲಿ ಮಂಜುನಾಥ ಸ್ವಾಮಿಗಳು, ಬೆಂಡವಾಡ ಸೇರಿದಂತೆ ವಿವಿಧ ಪೂಜ್ಯರು ಪಾಲ್ಗೊಂಡಿದ್ದರು.

ಸಂಸದ ಪಿ.ಸಿ.ಗದ್ದಿಗೌಡ್ರ, ಮಾಜಿ ಶಾಸಕ ಬಿ.ಆರ್‌ .ಯಾವಗಲ್ಲ, ಜಿಪಂ ಮಾಜಿ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಗದಗ ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್‌.ಎಸ್‌.ಪಟ್ಟಣಶೆಟ್ಟಿ, ತಾಪಂ ಮಾಜಿ ಅಧ್ಯಕ್ಷ ಪ್ರಕಾಶಗೌಡ ತಿರಕನಗೌಡ್ರ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರಶೆಟ್ಟಿ, ಸಾಹಿತಿ ಚಂದ್ರಶೇಖರ ವಸ್ತ್ರದ, ಚಿಂಚಣಿಯ ಬಾಬಾಸಾಹೇಬ ಪಾಟೀಲ, ಎಸ್‌. ಎಸ್‌.ಹರ್ಲಾಪೂರ, ನಾಗನಗೌಡ ತಿಮ್ಮನಗೌಡ್ರ ಸೇರಿದಂತೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಅಲ್ಲಮಪ್ರಭು ಸಂಸ್ಥಾನಮಠ ಮತ್ತು ಶಿರೋಳ ತೋಂಟದಾರ್ಯ ಮಠದ ಅಸಂಖ್ಯಾತ ಭಕ್ತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಡಿ.2ರಂದು ಪುಣ್ಯತಿಥಿ: ಈ ಸಂದರ್ಭದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ತೋಂಟದ ಜಗದ್ಗುರು ಡಾ|ಸಿದ್ಧರಾಮ
ಮಹಾಸ್ವಾಮಿಗಳು, ಲಿಂಗೈಕ್ಯ ಪೂಜ್ಯರ ಪ್ರಥಮ ಪುಣ್ಯ ಸ್ಮರಣೆಯನ್ನು ಡಿ. 2ರಂದು ನೆರವೇರಿಸಲಾಗುವುದು. ರಾಜ್ಯದ ಮಠಾ ಧೀಶರು, ಜನಪ್ರತಿನಿಧಿಗಳು, ಶ್ರೀಮಠದ ಭಕ್ತರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಟಾಪ್ ನ್ಯೂಸ್

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.