ಮತದಾರರ ಪಟ್ಟಿಗೆ ಅರ್ಹರನ್ನು ಸೇರಿಸಲು ಅಗತ್ಯ ಕ್ರಮ
Team Udayavani, Oct 4, 2019, 2:50 PM IST
ಗದಗ: ಅ. 15ರ ವರೆಗೆ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ಜರುಗಲಿದ್ದು, ಈ ಅವಧಿಯಲ್ಲಿ 18 ವರ್ಷ ಪೂರ್ಣಗೊಳ್ಳುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮತದಾರರ ಪಟ್ಟಿ ಪರಿಶೀಲನೆ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಜಿಲ್ಲೆಯನ್ನು ಅಗ್ರಸ್ಥಾನಕ್ಕೆ ತರಲು ಭಾರತ ಚುನಾವನಾ ಆಯೋಗವು ಪರಿಚಯಿಸಿದ ವೋಟರ್ ಹೆಲ್ಪ್ ಲೈನ್ ಮೊಬೈಲ್ ಆ್ಯಪ್ ಉಪಯೋಗಿಸಿ ಜಿಲ್ಲೆಯನ್ನು ಅಗ್ರಸ್ಥಾನಕ್ಕೆ ತರಲು ಅಧಿಕಾರಿಗಳು ಮುಂದಾಗಬೇಕು ಎಂದರು.
ಮತದಾರರ ಪಟ್ಟಿಯಲ್ಲಿರುವ ಮತದಾರರ ವಿವರಗಳನ್ನು ಪರಿಶೀಲಿಸಲು, ಹೆಸರನ್ನು ತೆಗೆದು ಹಾಕಲು, ಪರಿಶೀಲನೆ ಮತ್ತು ದೃಢೀಕರಣ, ತಿದ್ದುಪಡಿಗಳಿಗಾಗಿ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಆಧಾರ್ ಪತ್ರ, ಪಡಿತರ ಚೀಟಿ, ಸರಕಾರಿ ಅರೆ ಸರಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್, ರೈತರ ಗುರುತಿನ ಚೀಟಿ, ಚುನಾವಣಾ ಆಯೋಗ ಅನುಮೋದಿಸಿರುವ ಯಾವುದೇ ದಾಖಲೆಗಳನ್ನು ಇವುಗಳ ಪೈಕಿ ಒಂದನ್ನು ದಾಖಲೆ ರೂಪದಲ್ಲಿ ಮೊಬೈಲ್ ಆ್ಯಪ್ ಮೂಲಕ ಅಪ್ ಲೋಡ್ ಮಾಡಬಹುದಾಗಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿ.ಪಂ. ಸಿಇಓ ಡಾ| ಆನಂದ ಕೆ. ಮಾತನಾಡಿ, ವೋಟರ್ ಹೆಲ್ಪ್ಲೈನ್ ಮೊಬೈಲ್ ಆ್ಯಪನ್ನು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಪಡೆದುಕೊಂಡು, ಈಗಾಗಲೇ ನೋಂದಣಿಯಾಗಿರುವ ಮತದಾರರು ತಮ್ಮ ಹಾಗೂ ಕುಟುಂಬ ಸದಸ್ಯರುಗಳ ಹೆಸರು, ವಿಳಾಸ ಮತ್ತಿತರೆ ಮಾಹಿತಿ ಪರಿಶೀಲಿಸಿಕೊಳ್ಳಬೇಕು. ಆಯೋಗದ ವೆಬ್‌ಸೈಟ್ ಎನ್.ವಿ.ಎಸ್.ಪಿ ಪೋರ್ಟಲ್ ಮತದಾರರ ಸಹಾಯವಾಣಿ 1950, ಸಾಮಾನ್ಯ ಸೇವಾ ಕೇಂದ್ರ, ಮತದಾರ ನೋಂದಣಿ ಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ, ಗ್ರಾ.ಪಂ.ಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರ ಅಲ್ಲದೇ, ಮತಗಟ್ಟೆ ಅಧಿಕಾರಿ ಬಳಿ ಇರುವ ಮತದಾರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಂಗನವಾಡಿ ಸಹಾಯಕಿಯರನ್ನು ಅಂಗನವಾಡಿ ಕಾರ್ಯಕರ್ತೆಯರನ್ನಾಗಿ ಬಡ್ತಿ ನೀಡುವ ಹಾಗೂ ಸೇವಾ ವೇತನ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರಿ ಉಪನಿರ್ದೇಶಕಿ ಅಕ್ಕಮಹಾದೇವಿ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!
ಗದಗ: ಭೀಷ್ಮ ಕೆರೆಗೆ ಸಚಿವ ಎಚ್.ಕೆ. ಪಾಟೀಲ ಬಾಗಿನ ಅರ್ಪಣೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.