ಚುನಾವಣಾ ಅಕ್ರಮಕ್ಕೆ ಅವಕಾಶ ಬೇಡ
ಮತದಾನ ಪೂರ್ಣಗೊಂಡ ನಂತರ ನಿಗದಿತ ನಮೂನೆಯಲ್ಲಿ ವರದಿಯನ್ನು ಸಲ್ಲಿಸಬೇಕು.
Team Udayavani, Dec 4, 2021, 6:13 PM IST
ಗದಗ: ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳ ಕ್ಷೇತ್ರಕ್ಕೆ ದ್ವೈವಾರ್ಷಿಕ ಚುನಾವಣೆಯ ಮತದಾನದ ದಿನದಂದು ಮೈಕ್ರೋ ಆಬ್ಸರ್ವರ್ಗಳು ಚುನಾವಣಾ ಆಯೋಗದ ನಿರ್ದೇಶನದಂತೆ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವದರ ಮೂಲಕ ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಯಶಸ್ವಿಗೊಳಿಸಬೇಕೆಂದು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕ ಎಸ್.ಆರ್. ಉಮಾಶಂಕರ ತಿಳಿಸಿದರು.
ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳ ಕ್ಷೇತ್ರಕ್ಕೆ ನಿಯೋಜಿಸಲಾದ ಮೈಕ್ರೋ ಆಬ್ಸರ್ವರ್, ವಿಡಿಯೋ ಗ್ರಾಫರ್‌ಗಳಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚುನಾವಣಾ ಅಕ್ರಮಗಳಿಗೆ ಆಸ್ಪದ ನೀಡದಂತೆ ನಿಗಾ ವಹಿಸಬೇಕು. ಮತದಾನದ ದಿನದಂದು ಗುರುತಿನ ಚೀಟಿಗಳನ್ನು ಹೊಂದಿದವರನ್ನು ಮಾತ್ರ ಮತಗಟ್ಟೆ ಪ್ರವೇಶಿಸಲು ಅನುಮತಿಸಬೇಕು. ಚುನಾವಣೆಯಲ್ಲಿ ಗ್ರಾಪಂ, ಪಪಂ ಹಾಗೂ ಪುರಸಭೆಗಳ ಚುನಾಯಿತ ಜನಪ್ರತಿನಿಧಿಗಳು ಮತದಾರರಾಗಿದ್ದು, ಮತದಾನದ ದಿನದಂದು ಮತ ಚಲಾವಣೆಗೆ ಆಗಮಿಸುವ ಮತದಾರರ ಹೆಸರು, ಹುಟ್ಟಿದ ದಿನಾಂಕಗಳು ಮತ ಪಟ್ಟಿಯೊಂದಿಗೆ ತಾಳೆಯಾಗುತ್ತದೆಯೇ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಹೇಳಿದರು.
ಮತದಾನದ ದಿನದಂದು ನಿಗದಿತ ಮತದಾನ ಸಮಯಕ್ಕೆ ಮುಂಚಿತವಾಗಿ ಮತಗಟ್ಟೆಗಳಿಗೆ ಭೇಟಿ ನೀಡಿ, ಅಲ್ಲಿಯ ವ್ಯವಸ್ಥೆಗಳನ್ನು ಪರಿಶೀಲಿಸಬೇಕು. ಹಾಗೂ ಮತದಾನ ಪೂರ್ಣಗೊಂಡ ನಂತರ ನಿಗದಿತ ನಮೂನೆಯಲ್ಲಿ ವರದಿಯನ್ನು ಸಲ್ಲಿಸಬೇಕು. ಒಟ್ಟಾರೆಯಾಗಿ ಮೈಕ್ರೋ ಆಬ್ಸರ್ವರ್‌ಗಳಿಗೆ ಒದಗಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಮಾತನಾಡಿ, ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳ ಕ್ಷೇತ್ರಕ್ಕೆ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 1967 ಮತದಾರರಿದ್ದು, 130 ಮತಗಟ್ಟೆಗಳನ್ನು ತೆರೆಯಲಾಗಿದೆ. ಮತದಾನದ ದಿನದಂದು ತಮ್ಮ ಮೇಲೆ ಗುರುತರ ಜವಾಬ್ದಾರಿಯಿದ್ದು, ಮತದಾನದ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು.
ಉಳಿದ ಚುನಾವಣೆಗಳಿಗಿಂತ ಈ ಚುನಾವಣೆ ಭಿನ್ನವಾಗಿದ್ದು, ಮೈಕ್ರೋ ಆಬ್ಸರ್ವರ್ ಗಳು ಉದಾಸೀನತೆ ತೋರದೇ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆಯೇ ಎಂಬುದರ ಕುರಿತು ನಿಗಾ ವಹಿಸಬೇಕು. ಒಟ್ಟಾರೆಯಾಗಿ ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಪ್ರಾಚಾರ್ಯ ಬಸವರಾಜ ಗಿರಿತಿಮ್ಮನ್ನವರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ, ಮತದಾನದ ದಿನದಂದು ಮೈಕ್ರೋ ಆಬ್ಸರ್ವರ್ ಹಾಗೂ ವಿಡಿಯೋ ಗ್ರಾಫರ್‌ಗಳ ಜವಾಬ್ದಾರಿಗಳ ಕುರಿತು ತರಬೇತಿ ನೀಡಿದರು. ಜಿಪಂ ಸಿಇಒ ಭರತ ಎಸ್., ಅಪರ ಜಿಲ್ಲಾ ಧಿಕಾರಿ ಎಂ.ಸತೀಶ್ ಕುಮಾರ, ಉಪವಿಭಾಗಾ ಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಮೈಕ್ರೋ ಆಬ್ಸರ್ವರ್ ಹಾಗೂ ವಿಡೀಯೊ ಗ್ರಾಫರ್ ತರಬೇತಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.