ಕೋವಿಡ್ ಪರೀಕ್ಷೆ: ವರದಿ ಬಾಕಿ ಇಲ್ಲ
Team Udayavani, Jun 16, 2020, 7:20 AM IST
ಗದಗ: ಕೋವಿಡ್ ಪತ್ತೆಗಾಗಿ 7,599 ಜನರಿಂದ ಗಂಟಲಿನ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಿದ್ದು, 7,550 ಜನರ ವರದಿಗಳು ನೆಗೆಟೀವ್ ಆಗಿದೆ. ಆ ಪೈಕಿ ಒಟ್ಟು 49 ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ವರದಿ ಬರಲು ಬಾಕಿ ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 7,080 ಜನರು ನಿಗಾಕ್ಕೆ ಒಳಗಾಗಿದ್ದು, ವೈದ್ಯಕೀಯ ಸೌಲಭ್ಯದೊಂದಿಗೆ 12 ಜನರು ಆಸ್ಪತ್ರೆಯಲ್ಲಿದ್ದಾರೆ. ಒಟ್ಟು 49 ಪಾಸಿಟಿವ್ ಪ್ರಕರಣಗಳಲ್ಲಿ 8 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿ-166 ಹಾಗೂ ಪಿ-4082 ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದಂತೆ 39 ಜನ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮುಂಬೈ-ಗದಗ ರೈಲಿನಲ್ಲಿ ಮಹಾರಾಷ್ಟ್ರದಿಂದ ಗದಗ ರೈಲು ನಿಲ್ದಾಣಕ್ಕೆ ಜೂ.15ರ ವರೆಗೆ 747 ಪ್ರಯಾಣಿಕರು ಆಗಮಿಸಿದ್ದಾರೆ. ಅದರಲ್ಲಿ 314 ಜನ ಗದಗ ಜಿಲ್ಲೆಯವರಿದ್ದಾರೆ. ಇದರಲ್ಲಿ 271 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಹಾಗೂ 43 ಜನರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ. 314 ಜನರ ಪೈಕಿ 8 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. 433 ಜನರು ಬೇರೆ ಜಿಲ್ಲೆಯವರಾಗಿದ್ದು, ಸಂಬಂಧಪಟ್ಟ ಜಿಲ್ಲೆಗಳಿಗೆ ಕಳುಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.