ಶೌಚಾಲಯವಿದ್ದರೂ ಬಯಲು ಶೌಚ
Team Udayavani, Nov 24, 2019, 12:41 PM IST
ನರೇಗಲ್ಲ: ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಶೌಚಾಲಯ ನಿರ್ಮಿಸಿ ಬಯಲು ಶೌಚ ಮುಕ್ತ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಂತರ ಅನುದಾನ ಸುರಿಯುತ್ತಿವೆ. ಆದರೆ ಇಲ್ಲಿನ ಹೋಬಳಿ ವ್ಯಾಪ್ತಿಯ ಜನ ಶೌಚಾಲಯ ಕಟ್ಟಿಕೊಂಡರೂ ಇನ್ನೂ ಬಯಲು ಶೌಚ ಬಿಟ್ಟಿಲ್ಲ!
ಪ್ರತಿ ಗ್ರಾಮ ಹಾಗೂ ಪಟ್ಟಣಗಳನ್ನು ಬಯಲು ಶೌಚಮುಕ್ತವಾಗಿಸುವ ನಿಟ್ಟಿನಲ್ಲಿ ಸರ್ಕಾರ ಸ್ವತ್ಛ ಭಾರತ ಯೋಜನೆ, ಸ್ವಚ್ಛಗ್ರಾಮ, ಗ್ರಾಮ ನೈರ್ಮಲ್ಯ, ಓಡಿಎಫ್ ಸೇರಿದಂತೆ ಹಲವಾರು ಯೋಜನೆ ಜಾರಿಗೆ ತಂದಿದೆ. ಆದರೆ ಸಮರ್ಪಕ ಜಾರಿಯಾಗಿಲ್ಲ. ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡರೂ ಕೆಲವರು ಬಳಕೆ ಮಾಡುತ್ತಿಲ್ಲ.
ಸಂಗ್ರಹ ಕೊಠಡಿಯಾದ ಶೌಚಾಲಯ: ಪ.ಪಂ ಹಾಗೂ ಗ್ರಾ.ಪಂ ಅನುದಾನದಲ್ಲಿ ನಿರ್ಮಿಸಿಕೊಂಡಿರುವ ವೈಯಕ್ತಿಕ ಶೌಚಾಲಯಗಳಲ್ಲಿ ಜನರು ಕಟ್ಟಿಗೆ, ಕುಳ್ಳು, ಹಳೇ ಬಟ್ಟೆ ಸೇರಿದಂತೆ ಇತರೆ ವಸ್ತುಗಳನ್ನು ಇಡುವುದಕ್ಕೆ ಮಾತ್ರ ಸೀಮಿತವಾಗಿವೆ. ಶೌಚಾಲಯಗಳು ಬಳಕೆಯಾಗದೇ ಯೋಜನೆ ಹಳ್ಳ ಹಿಡಿದಿದ್ದು, ಉದ್ದೇಶ ಈಡೇರುತ್ತಿಲ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ನೀಡಿದೆ. ಆದರೆ, ಜನರು ಸರ್ಕಾರದ ಹಣ ಪಡೆದು ಶೌಚಾಲಯ ನಿರ್ಮಿಸಿಕೊಂಡರೂ ಬಳಕೆ ಮಾತ್ರ ಮಾಡುತ್ತಿಲ್ಲ. ಆರೋಗ್ಯದ ದೃಷ್ಟಿಯಿಂದ ಜನರು ಶೌಚಾಲಯ ಬಳಕೆ ಮಾಡುವುದು ಅವಶ್ಯಕವಾಗಿವೆ. ಶೌಚಾಲಯ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮ ನಡೆಯಬೇಕಿದೆ.-ಎಂ.ಎಸ್. ಧಡೇಸೂರಮಠ, ಪರಿಸರ ಪ್ರೇಮಿ
-ಸಿಕಂದರ ಎಂ. ಆರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.