ಆರಂಭವಾಗಿಲ್ಲ ಅಂಗನವಾಡಿ
•ಚಿಕ್ಕ ಕೊಠಡಿಯಲ್ಲಿಯೇ ಎಲ್ಲ ಕೆಲಸ•ಹೊಸ ಅಂಗನವಾಡಿ ಸುತ್ತಲೂ ಬೆಳೆದಿವೆ ಗಿಡ-ಗಂಟಿಗಳು
Team Udayavani, May 17, 2019, 4:28 PM IST
ಲಕ್ಷ್ಮೇಶ್ವರ: ಅಡರಕಟ್ಟಿ ಗ್ರಾಪಂ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ 2 ವರ್ಷಗಳ ಹಿಂದೆಯೇ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕಟ್ಟಡ ಇನ್ನೂ ಕಾರ್ಯಾರಂಭವಾಗಿಲ್ಲ.
ಸರ್ಕಾರ 0-3 ವಯೋಮಾನದ ಮಕ್ಕಳಿಗೆ ಅಕ್ಷರ ಜ್ಞಾನದ ಜತೆಗೆ ಪೌಷ್ಟಿಕ ಆಹಾರ ನೀಡಿ ಸದೃಢ ನಾಗರಿಕರನ್ನಾಗಿ ರೂಪಿಸುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿವೆ. ಗ್ರಾಮದಲ್ಲಿನ ಅಂಗನವಾಡಿ ಕೇಂದ್ರ ಸಂಖ್ಯೆ 218ರಲ್ಲಿ 20ಕ್ಕೂ ಮಕ್ಕಳು ಓದುತ್ತಿದ್ದು, ಸ್ವಂತ ಅಂಗನವಾಡಿ ಕಟ್ಟಡವಿಲ್ಲದ್ದರಿಂದ ಗ್ರಾಮದ ಸೇವಾಲಾಲ ಸಮುದಾಯ ಭವನ ಕೊಠಡಿಯಲ್ಲಿ ಕಳೆದ 4 ವರ್ಷದಿಂದ ಕಾರ್ಯನಿರ್ವಹಿಸುತ್ತಿದೆ. ಅತ್ಯಂತ ಚಿಕ್ಕದಾದ ಕೊಠಡಿಯಲ್ಲಿಯೇ ಸಿಲಿಂಡರ್ ಬಳಸಿ ಅಡುಗೆ ಸಿದ್ಧಪಡಿಸುವುದು, ಪಾಠ ಹೇಳುವುದು, ಪಡಿತರ ಸಂಗ್ರಹಿಸಲಾಗುತ್ತಿದೆ. ಈ ಕೊಠಡಿ ಪಕ್ಕ ಇರುವ ಇನ್ನೊಂದು ಕೊಠಡಿಯಲ್ಲಿ ಗ್ರಾಮದ ಜನರಿಗೆ ಪಡಿತರ ವಿತರಿಸುವುದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗುತ್ತದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
ಇಷ್ಟಾದರೂ ಹೊಸ ಅಂಗನವಾಡಿ ಕಟ್ಟಡಕ್ಕೆ ಸ್ಥಳಾಂತರಗೊಳ್ಳದಿರುವುದು ಯಕ್ಷ ಪ್ರಶ್ನೆಯಾಗಿದೆ. ಹೊಸ ಅಂಗನವಾಡಿ ಸುತ್ತಲೂ ಗಿಡ-ಗಂಟಿಗಳು ಬೆಳೆದು ಕಟ್ಟಡ ದುರ್ಬಳಕೆಯಾಗುತ್ತಿದೆ. ಅಂಗನವಾಡಿ ಕೇಂದ್ರ ಗ್ರಾಪಂ ಅಧ್ಯಕ್ಷರ ಹಾಗೂ ತಾಪಂ ಅಧ್ಯಕ್ಷರ ಸ್ವಗ್ರಾಮದಲ್ಲಿಯೇ ಇದೆ. ಅಲ್ಲದೇ ಜಿಪಂ ಅಧ್ಯಕ್ಷರ ಕ್ಷೇತ್ರವ್ಯಾಪ್ತಿಯೂ ಇದೇ ಆಗಿದ್ದರೂ ಯಾರೊಬ್ಬರೂ ಇತ್ತ ಗಮನ ಹರಿಸದಿರುವುದು ದುರ್ದೈವ.ಹೊಸ ಅಂಗನವಾಡಿ ಕಟ್ಟಡ ನಿರ್ಮಾಣವಾಗಿದ್ದರೂ ಮಕ್ಕಳು ಮಾತ್ರ ಸಮುದಾಯ ಭವನದ ಚಿಕ್ಕ ಕೊಠಡಿಯಲ್ಲಿಯೇ ಪಾಠ ಕೇಳುವುದು ಯಾವ ನ್ಯಾಯ. ಲಕ್ಷಾಂತರ ರೂ ಖರ್ಚು ಮಾಡಿ ಯಾವ ಪುರುಷಾರ್ಥಕ್ಕೆ ಈ ಕಟ್ಟಡ ನಿರ್ಮಿಸಿದ್ದಾರೆ ಎಂಬುದನ್ನು ಅಧಿಕಾರಿಗಳು ಸಷ್ಟಪಡಿಸಬೇಕು. ಇನ್ನೊಂದು ವಾರದಲ್ಲಿ ಹೊಸ ಅಂಗನವಾಡಿ ಕಟ್ಟಡ ಕಾರ್ಯಾರಂಭಗೊಳ್ಳದಿದ್ದರೆ ಅಧಿಕಾರಿಗಳು ಮತ್ತು ಜನಪ್ರತಿನಿಗಳ ವಿರುದ್ಧ ಮಕ್ಕಳೊಡಗೂಡಿ ಪ್ರತಿಭಟನೆ ಮಾಡುವುದಾಗಿ ತಾರಮ್ಮ ಲಮಾಣಿ, ಗಂಗಮ್ಮ ಲಮಾಣಿ, ಮಹಾದೇವ ಮಾಳಗಿಮನಿ, ಲಕ್ಷ್ಮಣ ಪೂಜಾರ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.