ಬೆಳೆ ವಿಮೆ ಹಣ ಬಿಡುಗಡೆಗೆ ಒತ್ತಾಯ
Team Udayavani, Oct 30, 2020, 5:41 PM IST
ಗದಗ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿ ವಿಮಾ ಕಂತು ತುಂಬಿದ ರೈತರಿಗೆ ಬೆಳೆ ವಿಮೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಗುರುವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಹಾಲಪ್ಪ ಅರಹುಣಸಿ ಮಾತನಾಡಿ, ಮುಂಗಾರು ಹಂಗಾಮಿಗೆಹೆಸರು, ಸೂರ್ಯಕಾಂತಿ, ಹಿಂಗಾರಿ ಬೆಳೆಗಳಾದ ಜೋಳ, ಕಡಲೆ ಬೆಳೆ ಬೆಳೆಯುತ್ತಾರೆ. ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾ.ಪಂ. ವ್ಯಾಪ್ತಿಯ ವೆಂಕಟಾಪೂರ, ಹಳ್ಳಿಕೇರಿ, ಹಳ್ಳಿಗುಡಿ ಗ್ರಾಮಗಳರೈತರು ಬೆಳೆಗಳ ವಿಮೆ (2019-20) ತುಂಬಿದ್ದಾರೆ. ಈ ನಡುವೆ ಬೆಳೆಗಳು ಸಂಪೂರ್ಣ ಹಾನಿಯಾಗಿದೆ. ಆದರೆ, ರೈತರಿಗೆ ಪರಿಹಾರ ಹಣ ಕೈಸೇರದೇ ಕಂಗಾಲಾಗಿದ್ದಾರೆ ಎಂದು ದೂರಿದರು.
ಸರಕಾರ ಕೂಡಲೇ ವೆಂಕಟಾಪೂರ, ಹಳ್ಳಿಕೇರಿ, ಹಳ್ಳಿಗುಡಿ ಗ್ರಾಮಗಳನ್ನು ಪುನರ್ ಪರಿಶೀಲನೆ ಮಾಡಿ, ರೈತರಿಗೆ ಆದ ಅನ್ಯಾಯ ಸರಿಪಡಿಸಬೇಕು. ಮುಂಗಾರು ಬೆಳೆಗಳಾದ ಹೆಸರು, ಸೂರ್ಯಕಾಂತಿ ಹಿಂಗಾರು ಬೆಳೆಗಳಾದ ಕಡಲೆ, ಜೋಳ ಬೆಳೆಗಳಿಗೆ ಸೂಕ್ತ ವಿಮಾ ತುಂಬಲು ಸರ್ಕಾರ ಕಾರ್ಯೋನ್ಮುಖರಾಗಬೇಕು. ಇಲ್ಲವೇ, ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯೂಸೂಫ್ ಡಂಬಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಕೋರ್ಲಗಟ್ಟಿ, ಜಿಲ್ಲಾ ಗೌರವಾಧ್ಯಕ್ಷ ಮುತ್ತಣ್ಣ ಚವಡಣ್ಣವರ, ಬಸವರಾಜ ಕರಿಯವರ, ರೈತರಾದ ವಿರೂಪಾಕ್ಷಗೌಡ ಮರಿಗೌಡರ, ಶರಣಪ್ಪ ತಳಕಲ್ಲ, ಸಂಗಪ್ಪ ತಳಕಲ್ಲ, ಅಂದಾನಯ್ಯ ಹಿರೇಮಠ, ಶರಣಪ್ಪ ಶಿವಶಿಂಪಗೇರ, ಶೇಖಪ್ಪ ತಳಕಲ್ಲ, ಶಿವನಗೌಡ ಮಂಟಗೇರಿ, ಹನಮಪ್ಪ ಬಿ. ಕಿನ್ನಾಳ, ಶಿವಪುತ್ರಪ್ಪ ಸಂಗನಾಳ, ಯಲ್ಲಪ್ಪಗೌರ ಕರಕರೆಡ್ಡಿ, ತಳಕಪ್ಪ ತುಪ್ಪದ, ಮುದಕಪ್ಪ ಸೂರಿ, ಮಲ್ಲಪ್ಪ ಆಲೂರ, ಹ.ಬಿ.ಸೂಡಿ, ಚನ್ನಪ್ಪ ಹಾ. ಕಲ್ಲೂರ, ರುದ್ರಪ್ಪ ಅಸೂಟಿ, ಶರಣಪ್ಪಅಸೂಟಿ, ಕೋಟೆಪ್ಪ ಹೊಸಮನಿ, ವೀರನಗೌಡ ಮೂಗನೂರ,ಶೌಕತ ಪೀರಜಾದೆ, ದಾವಲಸಾಬ ಕಣಕಿ, ಸದ್ದಾಂ ಕರ್ಜಗಿ, ಸಂತೋಷ ಕುರಿ, ಸದ್ದಾಂ ಈ. ಅಕ್ಕಿ, ಮಲ್ಲನಗೌಡ ಹುಲ್ಲೂರ, ದಾವಲಸಾಬ ದಾಯಣ್ಣವರ ಯಲ್ಲಪ್ಪ ಮಾಳೆಕೊಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.