ಭವನಲ್ಲಿ ಕೋವಿಡ್‌ ಕೇಂದ್ರ ತೆರೆಯಲು ಆಕ್ಷೇಪ

Team Udayavani, Jul 8, 2020, 4:52 PM IST

ಭವನಲ್ಲಿ ಕೋವಿಡ್‌ ಕೇಂದ್ರ ತೆರೆಯಲು ಆಕ್ಷೇಪ

ಗದಗ: ಜಿಲ್ಲೆಯ ನರಗುಂದ ಪಟ್ಟಣದ ಬಸವೇಶ್ವರ ಸಮುದಾಯ ಭವನವನ್ನು ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸುವ ಜಿಲ್ಲಾಡಳಿತದ ನಿರ್ಧಾರವನ್ನು ಆಕ್ಷೇಪಿಸಿ ಸ್ಥಳೀಯರು ಸೋಮವಾರ ರಾತ್ರಿ ಕೆಲಕಾಲ ಪ್ರತಿಭಟನೆ ನಡೆಸಿದರು.

ಪಟ್ಟಣದ ಹೃದಯ ಭಾಗದಲ್ಲಿರುವ ಬಸವೇಶ್ವರ ಸಮುದಾಯ ಭವನದಲ್ಲಿ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಈ ಹಿನ್ನೆಲೆಯಲ್ಲಿ ಸ್ಥಳೀಯರ ಆರೋಗ್ಯದ ದೃಷ್ಟಿಯಿಂದ ಪಟ್ಟಣದ ಹೊರ ವಲಯ ಅಥವಾ ಊರಿಂದ ದೂರವಿರುವ ಕಟ್ಟಡದಲ್ಲಿ ಸೋಂಕಿತರ ಕ್ವಾರಂಟೈನ್‌ ಹಾಗೂ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಈ ಕುರಿತು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಿಪಿಐ ಡಿ.ಬಿ. ಪಾಟೀಲ್‌, ಸ್ಥಳೀಯರಿಂದ ಅಹವಾಲು ಆಲಿಸಿದರು. ಅಲ್ಲದೇ ಸದ್ಯಕ್ಕೆ ಇಲ್ಲಿಗೆ ಕೋವಿಡ್‌ ಸೋಂಕಿತರನ್ನು ಕರೆತರಲಾಗುತ್ತಿಲ್ಲ. ಮುಂಬರುವ ದಿನಗಳಲ್ಲಿ ಅಂತಹ ಪರಿಸ್ಥಿತಿ ಎದುರಾದರೆ ಮುಂಜಾಗ್ರತಾ ಕ್ರಮವಾಗಿ ಬಸವೇಶ್ವರ ಸಮುದಾಯ ಭನವವನ್ನು ಗುರುತಿಸಲಾಗಿದೆ. ಈ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಎಷ್ಟೇ ಮನವರಿಕೆ ಮಾಡಿದರೂ ಪ್ರತಿಭಟನಾಕಾರರು ಪಟ್ಟು ಸಡಿಲಿಸಲಿಲ್ಲ. ಕೊನೆಗೆ ಮಂಗಳವಾರ ಬೆಳಗ್ಗೆ ಈ ಕುರಿತು ಚರ್ಚೆ ನಡೆಸಲಾಗುವುದು. ಅಲ್ಲಿವರೆಗೆ ಯಾರೊಬ್ಬರನ್ನೂ ಸಮುದಾಯ ಭವನದಲ್ಲಿ ಇರಿಸಲಾಗದು ಎಂದು ಆಶ್ವಾಸನೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು. ಅದರಂತೆ ಮಂಗಳವಾರ ಬೆಳಗ್ಗೆ ಡಿವೈಎಸ್‌ಪಿ ಶಿವಾನಂದ ಕಟಗಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಸ್ಥಳೀಯ ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅಧಿ ಕಾರಿಗಳು ಸದ್ಯಕ್ಕೆ ಬಸವೇಶ್ವರ ಸಮುದಾಯ ಭವನದಲ್ಲಿ ಕ್ವಾರಂಟೈನ್‌ ಹಾಗೂ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತಿಲ್ಲ. ಈಗಾಗಲೇ ತಾಲೂಕಿನ ಬೆನಕನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬೆಳ್ಳೇರಿ ಗ್ರಾಮದ ಡಿಪ್ಲೋಮಾ ಕಾಲೇಜುಗಳನ್ನು ಕ್ವಾರಂಟೈನ್‌ ಕೇಂದ್ರಗಳನ್ನಾಗಿಸಿದೆ. ಈ ಪೈಕಿ ಬೆನಕನಕೊಪ್ಪ ಮೊರಾರ್ಜಿ ಶಾಲೆ ಕೇವಲ 18 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಸವೇಶ್ವರ ಸಮುದಾಯ ಭವನವನ್ನು ತಾಲೂಕು ಆಡಳಿತ ಗುರುತಿಸಿದೆ ಎಂದು ಸ್ಥಳೀಯರ ಮನವೊಲಿಸಲಾಯಿತು ಎಂದು ಸಿಪಿಐ ಡಿ.ಬಿ. ಪಾಟೀಲ ಮಾಹಿತಿ ನೀಡಿದರು.

ಟಾಪ್ ನ್ಯೂಸ್

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ

ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.