ಗುಳೆ ಹೋದವರನ್ನು ಶೀಘ್ರ ಕರೆತನ್ನಿ
Team Udayavani, Apr 26, 2020, 5:23 PM IST
ಸಾಂದರ್ಭಿಕ ಚಿತ್ರ
ಗದಗ: ಹೊರ ರಾಜ್ಯಗಳಲ್ಲಿರುವ ಜಿಲ್ಲೆಯ ವಲಸೆ ಕಾರ್ಮಿಕರನ್ನು ಆದಷ್ಟು ಬೇಗನೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊರ ರಾಜ್ಯದಲ್ಲಿ ಸಿಲುಕಿರುವ ಜವಾಹರ ಶಾಲೆ ವಿದ್ಯಾರ್ಥಿಗಳನ್ನು ಜಿಲ್ಲೆಗೆ ಕರೆತರಲು ಅಗತ್ಯದ ಕ್ರಮ ಜರುಗಿಸಬೇಕು. ಹೊರ ಜಿಲ್ಲೆಯಿಂದ ಜಿಲ್ಲೆಗೆ ಆಗಮಿಸಿದ ಪ್ರತಿಯೊಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚಿಸಿದ ಅವರು, ಜಿಲ್ಲೆಗೆ ಶೀಘ್ರವೇ ಲೈಫ್ ಸೇವಿಂಗ್ ಸಾಧನೆಗಳನ್ನು ಒಳಗೊಂಡಂತಹ ಆಂಬ್ಯುಲೆನ್ಸ್‌ಗಳನ್ನು ಒದಗಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದರು. ಸಂಸದ ಸಿ.ಎಂ. ಉದಾಸಿ ಮಾತನಾಡಿ, ಮುಂಗಾರು ಹಂಗಾಮು ಪ್ರಾರಂಭವಾಗುತ್ತಿದ್ದು, ರೈತರಿಗೆ ಅಗತ್ಯದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಆಗದಂತೆ ನಿಗಾವಹಿಸಲು ತಿಳಿಸಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಗದಗ-ಬೆಟಗೇರಿ ನಗರಸಭೆಯ ವ್ಯಾಪ್ತಿಯ ವಾರ್ಡ್ ನಂ. 31ರ ರಂಗನವಾಡ ಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶದ ಎಲ್ಲರನ್ನು ವಿವಿಧ ವಸತಿ ಶಾಲೆಗಳಿಗೆ ವರ್ಗಾಯಿಸಲಾಗಿದೆ. ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರನ್ನು ಗುರುತಿಸಿ, ಅವರಿಗೆ ಅಗತ್ಯ ಊಟ ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕ್ರಿಮಿನಾಶಕ ಸಿಂಪಡಿಸಲಾಗುತ್ತಿದೆ ಎಂದರು.
ಸಂಸದರಾದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಪಂ ಸಿಇಒ ಡಾ| ಆನಂದ ಕೆ., ಎಸ್‌ಪಿ ಯತೀಶ ಎನ್., ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಉಪವಿಭಾಗಾ ಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.