ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆನ್‌ಲೈನ್ ತರಬೇತಿ
Team Udayavani, Jun 9, 2020, 2:40 PM IST
ಗದಗ: ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರ ನಿರ್ದೇಶನದಂತೆ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ ಅವರ ನೇತೃತ್ವದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್ ವಿಷಯ ಕುರಿತು ನಗರದಲ್ಲಿ ಆನ್‌ಲೈನ್ ತರಬೇತಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮಾತನಾಡಿದ ಡಿಡಿಪಿಐ ಎನ್.ಎಚ್. ನಾಗೂರ, ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಉಪನ್ಯಾಸ, ವಸ್ತುವಿಷಯವನ್ನು ಸಮರ್ಪಕವಾಗಿ ಅರ್ಥೈಸಿಕೊಳ್ಳಬೇಕು. ಅವುಗಳನ್ನು ತರಗತಿ ಕೊಠಡಿಯಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು. ಶಿಕ್ಷಕರು ತಮ್ಮ ತರಗತಿ ಬೋಧನೆಗೆ ಸಂಬಂಧಿ ಸಿದ ಸಮಸ್ಯೆಗಳಿಗೆ ಶಿಬಿರದಲ್ಲಿ ಪರಿಹಾರ ಕಂಡುಕೊಳ್ಳಬೇಕು. ಮಕ್ಕಳಿಗೆ ಆಂಗ್ಲಭಾಷೆ ಕಲಿಸುವ ಕ್ರಮವನ್ನು ರೂಢಿಸಿಕೊಂಡು ಗ್ರಾಮೀಣ ಭಾಗದ ಮಕ್ಕಳಿಗೆ ವಿಷಯವನ್ನು ಮನ ಮುಟ್ಟುವಂತೆ ಪಾಠ ಮಾಡಬೇಕು ಎಂದು ಸಲಹೆ ನೀಡಿದರು.
ಲಿಂಗದಾಳ ಸರಕಾರಿ ಪ್ರೌಢಶಾಲೆ ಶಿಕ್ಷಕ ಕುಮಾರಸ್ವಾಮಿ, ಅವರು ಇಂಗ್ಲಿಷ್ ವಿಷಯ ಬೋಧನೆ ಕುರಿತು ವಿಚಾರ ಮಂಡಿಸಿದರು. ಡಯಟ್ ಕಾಲೇಜಿನ ಪ್ರಾಚಾರ್ಯ ಎಸ್.ಡಿ. ಗಾಂಜಿ, ತರಬೇತಿಯ ನೋಡಲ್ ಅಧಿಕಾರಿ ಎಚ್.ಬಿ. ರಡ್ಡೇರ, ತಾಂತ್ರಿಕ ಸಹಾಯಕ ತೇಜಸ್ ರಡ್ಡೇರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.