ಜಿಂದಾಲ್‌ಗೆ 3665 ಎಕರೆ ಭೂಮಿ ಪರಭಾರೆಗೆ ವಿರೋಧ
Team Udayavani, Apr 28, 2021, 4:43 PM IST
ಗದಗ: ಹಿಂದಿನ ಸಮ್ಮಿಶ್ರ ಸರಕಾರದಲ್ಲಿ ಬಳ್ಳಾರಿ ಜಿಲ್ಲೆಯ 3665 ಎಕರೆ ಭೂಮಿಯನ್ನು ಜಿಂದಾಲ್‌ಗೆ ಪರಭಾರೆ ವಿರೋಧಿಸಿ ಗಾಂಧಿ ಪುತ್ಥಳಿ ಎದುರು ಅಹೋರಾತ್ರಿ ಹೋರಾಟ ನಡೆಸಿದ್ದ ಬಿ.ಎಸ್. ಯಡಿಯೂರಪ್ಪ ಅವರೇ ಇದೀಗ ಪರಭಾರೆ ಮಾಡಿದ್ದಾರೆ. ಕೊರೊನಾದಿಂದ ಜನರು ಕಣ್ಣೀರಿಡುವ ವಿಷಮ ಪರಿಸ್ಥಿತಿಯಲ್ಲಿ ಸರಕಾರದ ಈ ನಿರ್ಣಯ ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ತೀವ್ರ ವಾಗ್ಧಾಳಿ ನಡೆಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಜಿಂದಾಲ್ ಕಂಪನಿಗೆ 3665 ಎಕರೆ ಜಮೀನು ಕ್ರಯ ಶುದ್ಧಿಗೆ ಮುಂದಾಗಿತ್ತು. ಅದಕ್ಕೆ ತಾವು ಸೇರಿದಂತೆ ಬಳ್ಳಾರಿ ಜಿಲ್ಲೆಯ ರೈತರಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಂದಿನ ವಿಪಕ್ಷ ನಾಯಕರಾಗಿದ್ದ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೆಂಗಳೂರಿನ ಗಾಂಧಿ ಪ್ರತಿಮೆ ಎದುರು ಅಹೋರಾತ್ರಿ ಧರಣಿ ನಡೆಸಿದ್ದರು. ಅದಕ್ಕೆ ಸ್ಪಂದಿಸಿದ್ದ ಅಂದಿನ ಸಮ್ಮಿಶ್ರ ಸರಕಾರ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದರು. ಆದರೆ, ಇದೀಗ ಅದೇ ಜಿಂದಾಲ್ ಕಂಪನಿಗೆ ಇಂದಿನ 3665 ಎಕರೆ ಜಮೀನು ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟ ಸಭೆ ನಿರ್ಣಯಿಸಿದೆ. ಈ ಮೂಲಕ ರಾಜ್ಯ ಸರಕಾರ ಹಾಗೂ ಸಾರ್ವಜನಿಕರ ಬೊಕ್ಕಸಕ್ಕೆ ದೊಡ್ಡ ಧಕ್ಕೆ ತರುವ ಬಹುದೊಡ್ಡ ನಿರ್ಣಯ ಇದಾಗಿದೆ ಎಂದು ಟೀಕಿಸಿದರು.
ಕೆಐಎಡಿಬಿ ಅಭಿವೃದ್ಧಿ ಪಡಿಸಿರುವ ಜಮೀನು ಎಕರೆಗೆ 80 ರೂ. ದರದಲ್ಲಿ ಮಾರಾಟವಾಗುತ್ತದೆ. ಆದರೆ, ಜಿಂದಾಲ್ ಕಂಪನಿಗೆ ಕೇವಲ 1.22 ಲಕ್ಷ ರೂ. ಗೆ ಎಕರೆಯಂತೆ 3665 ಎಕರೆ ಜಮೀನು ಮಾರುವ ಅಗತ್ಯವೇನಿದೆ. ಕೊರೊನಾ ಸೊಂಕಿತರ ಚಿಕಿತ್ಸೆಗಾಗಿ ಜಮೀನು ಮಾರಲಾಗುತ್ತಿದೆಯೇ ಎಂದು ಖಾರವಾಗಿ ಪ್ರಶ್ನಿಸಿದರು. ಇಂತಹ ಜನವಿರೋಧಿ ನಿರ್ಣಯವನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲವಾದರೆ, ಸರಕಾರಕ್ಕೂ ಒಳ್ಳೆಯದಾಗಲ್ಲ. ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಎಚ್ಚರಿಸಿದರು.ಜಿ.ಪಂ. ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ತಾ.ಪಂ. ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಕಾಂಗ್ರೆಸ್ ಶಹರ ಅಧ್ಯಕ್ಷ ಗುರಣ್ಣ ಬಳಗಾನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.