ಸರಕಾರದ ವಿರುದ್ಧ ಆಕ್ರೋಶ
•ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ•ರಸ್ತೆ ತಡೆ ನಡೆಸಿ ಪ್ರತಿಭಟನೆ
Team Udayavani, Jun 11, 2019, 7:42 AM IST
ಗದಗ: ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ರೈತರು ರಸ್ತೆ ತಡೆ ನಡೆಸಿದರು.
ಗದಗ: ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸಮ್ಮಿಶ್ರ ಸರಕಾರದ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನೂರಾರು ರೈತರು ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಇಲ್ಲಿನ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಮೂರೂವರೆ ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ತಡೆ ನಡೆಸಿ, ರಸ್ತೆಯಲ್ಲೇ ಊಟ ಮಾಡುವ ಮೂಲಕ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಮಧ್ಯಾಹ್ನ 12ರ ವೇಳೆಗೆ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಮುಳಗುಂದ ನಾಕಾ ಮಾರ್ಗವಾಗಿ ಸಾಗಿತು. ಇದೇ ವೇಳೆ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಬಳಿಕ ಮಾರ್ಗ ಮಧ್ಯೆ ಪ್ಲಾಸ್ಟಿಕ್ ಹಾಸಿಕೊಂಡು ಮಹಿಳೆಯರು ಮನೆಯಿಂದ ತಂದಿದ್ದ ರೊಟ್ಟಿ, ಪಲ್ಲೆಯೊಂದಿಗೆ ಊಟ ಸೇವಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ, ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತರಿಗೆ ಮರಣ ಶಾಸನ ಬರೆದಂತೆ: ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ರೈತ ಸಂಘದ ಅಧ್ಯಕ್ಷ ಬಸವರಾಜ ಸಾಬಳೆ, ಎಸ್‌ಇಝಡ್, ಕೈಗಾರಿಕೆ ಸ್ಥಾಪನೆ ಮತ್ತು ನಗರೀಕರಣದ ಹೆಸರಲ್ಲಿ ದೇಶದ್ಯಂತ ರೈತರ ಜಮೀನುಗಳನ್ನು ಬೇಕಾಬಿಟ್ಟಿ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿತ್ತು. ಅದಕ್ಕೆ ಕಡಿವಾಣ ಹಾಕಲು ಯುಪಿಎ ಸರಕಾರ ಏ. 1, 2014ರಲ್ಲಿ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿತ್ತು.
ರೈತರ ಜಮೀನುಗಳನ್ನು ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಪ್ರತಿಯಾಗಿ ರೈತರಿಗೆ ಗ್ರಾಮೀಣ ಭಾಗದಲ್ಲಿ ನಾಲ್ಕು ಪಟ್ಟು, ನಗರ ಪ್ರದೇಶದಲ್ಲಿ ಎರಡು ಪಟ್ಟು ಪರಿಹಾರ ನೀಡಬೇಕೆಂಬ ಷರತ್ತು ವಿಧಿಸಿದೆ. ಆದರೆ, ರಾಜ್ಯ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಈ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಮುಂದಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.
ಸರಕಾರದ ಈ ಕ್ರಮದಿಂದ ರೈತ ಕುಟುಂಬಗಳು ಬೀದಿಗೆ ಬರಬೇಕಾಗುತ್ತದೆ. ರೈತರ ಹಿತದೃಷ್ಟಿಯಿಂದ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿರುವ ಪರಿಹಾರ ತಾರತಮ್ಯ ಸರಿಪಡಿಸಬೇಕು. ಭೂಸ್ವಾಧೀನ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಬೇಕು. ಅಲ್ಲದೇ, ಜಿಂದಾಲ್ ಕಂಪನಿಗೆ 3667 ಎಕರೆ ರೈತರ ಭೂಮಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೀವು ಯಾವ ಸೀಮೆ ರೈತನ ಮಗ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ವಿಜಯಕುಮಾರ ಸುಂಕದ ಮಾತನಾಡಿ, ಏಳು ವರ್ಷಗಳಿಂದ ಸತತ ಬರಗಾಲ ಎದುರಿಸುತ್ತಿರುವ ಕಾರಣ ಆಹಾರ ಉತ್ಪಾದನೆ ಕಡಿಮೆಯಾಗುತ್ತಿದೆ. ಬಾಕಿ ಇರುವ ಬರಪರಿಹಾರ ಒದಗಿಸಬೇಕು. ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಕೈಬಿಟ್ಟು, ಜಿಂದಾಲ್ ಕಂಪನಿಗೆ ಭೂ ಮಾರಾಟ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಬಳಿಕ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕುಸುಮಾ ಜಾಧವ, ವಿಠಲ ಜಾಧವ, ವಿಜಯಕುಮಾರ ಸುಂಕದ, ಶರೀಫ್ ನಮಾಜಿ, ರಾಜು ಬಾಳಿಕಾಯಿ, ರವಿ ಒಡೆಯರ, ಗಂಗಾಧರ ಮೇಟಿ, ಮುತ್ತಪ್ಪ ಆರೇರ, ಶರಣಪ್ಪ ಇನಾಮತಿ, ಶಿವಕ್ಕ ಬಾವಿ, ಅನುಸೂಯಾ ಬಾವಿ, ಗಿರಿಜವ್ವ ಅಸೂಟಿ, ಯಲ್ಲವ್ವ ಕಾಕನೂರ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಮುಖ ಬೇಡಿಕೆ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.