ವೈದ್ಯರ ನಿರ್ಲಕ್ಷ್ಯಕ್ಕೆ 60ಕ್ಕೂ ಅಧಿಕ ಕುರಿಗಳ ಸಾವು
Team Udayavani, Dec 20, 2019, 5:02 PM IST
ಗದಗ: ಇಲ್ಲಿನ ಪಶು ವೈದ್ಯರ ನಿರ್ಲಕ್ಷ್ಯದಿಂದ ಸುಮಾರು 60ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಕೂಡಲೇ ತಪ್ಪಿತಸ್ಥ ಪಶು ವೈದ್ಯರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಕುರಿಗಾಹಿಗಳು ಗುರುವಾರ ಮೃತ ಕುರಿಗಳ ಕಳೆಬರದೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಕಳಸಾಪುರ ಗ್ರಾಮದ ಈರಪ್ಪ ಕನ್ಯಾಳ ಎಂಬುವರಿಗೆ ಸೇರಿದ್ದ ಕುರಿಗಳು ಮೃತಪಟ್ಟಿವೆ. ಕುರಿಗಳು ನಿತ್ರಾಣಗೊಂಡ ಬಗ್ಗೆ ಪಶು ವೈದ್ಯರಿಗೆ ಮಾಹಿತಿ ನೀಡಿದರೂ, ಸ್ಥಳಕ್ಕೆ ಬಾರದಿದ್ದರಿಂದ ಕುರಿಗಳು ಸಾವನ್ನಪ್ಪಿವೆ ಎಂದು ಆರೋಪಿಸಿ, ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲು ಮೃತ ಕುರಿಗಳನ್ನು ಟ್ರಾಕ್ಟರ್‌ನಲ್ಲಿ ಹಾಕಿಕೊಂಡು ಬಂದಿದ್ದರು. ಆದರೆ, ರಾಜ್ಯಾದ್ಯಂತ 144 ಸೆಕ್ಷನ್ ಜಾರಿಯಲ್ಲಿರುವುದನ್ನು ಅರಿತು ಮೌನಕ್ಕೆ ಶರಣಾದರು. ಅಲ್ಲದೇ ಘಟನೆಗೆ ಕಾರಣರಾದ ಪಶು ವೈದ್ಯರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪಶು ವೈದ್ಯರ ವಿರುದ್ಧ ಲಂಚಾರೋಪ: ಇದಕ್ಕೂ ಮುನ್ನ ಮೃತಪಟ್ಟಿರುವ 50ಕ್ಕೂ ಹೆಚ್ಚು ಕುರಿಗಳೊಂದಿಗೆ ಕುರಿಗಾರರು ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ್ದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಜಿಪಂ ಸದಸ್ಯ ವಾಸಣ್ಣ ಕುರಡಗಿ ಕುರಿಗಾಹಿಗಳ ಅಹವಾಲು ಆಲಿಸಿದರು.
ಕುರಿಗಾರರ ದೂರಿನಿಂದ ಸಿಡಿಮಿಡಿಗೊಂಡ ಜಿಪಂ ಸದಸ್ಯ ವಾಸಣ್ಣ ಕುರಡಗಿ ಅಧಿಕಾರಿಗಳಿಗೆ ಫೋನ್ ಮಾಡಿ ತರಾಟೆಗೆ ತೆಗೆದುಕೊಂಡರು. ಅಲ್ಲದೇ ತಕ್ಷಣವೇ ಜಿಪಂಗೆ ಬರುವಂತೆ ಸೂಚಿಸಿದರು. ನಂತರ ಕುರಿಗಾಹಿಗಳಿಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.