ಮತದಾರರ ವಿಶೇಷ ನೋಂದಣಿಯಲ್ಲಿ ಪಾಲ್ಗೊಳ್ಳಿ
Team Udayavani, Dec 13, 2020, 3:23 PM IST
ಗದಗ: ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಪರಿಷ್ಕರಣೆಗಾಗಿಆಯೋಜಿಸಲಾದ ವಿಶೇಷ ನೋಂದಣಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ನಿಯೋಜಿತ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ಜರುಗಿದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಿ.13 ರಂದು ಮತದಾರರ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಕ್ರಮ ಜರುಗಿಸಬೇಕು. ವಿಶೇಷ ಅಭಿಯಾನದಂದು ಮತಗಟ್ಟೆಗಳಿಗೆ ಅನೀರಿಕ್ಷಿತ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಬಿಎಲ್‌ಒ ಹಾಗೂ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ಗೈರಾಗಿದ್ದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ವಿಧಾನ ಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಅಭಿಯಾನ ಯಶಸ್ವಿಗೊಳಿಸಲು ಸೂಚಿಸಿದರು.
ಗ್ರಾಮ ಪಂಚಾಯತ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆಗಾಗಿತಾಪಂ ಇಒಗಳನ್ನು ನೋಡೆಲ್ ಅಧಿಕಾರಿಗಳೆಂದು ನಿಯಮಿಸಲಾಗಿದೆ. ನೋಡೆಲ್ ಅಧಿಕಾರಿಗಳುತಮ್ಮ ವ್ಯಾಪ್ತಿಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾ ವಹಿಸಬೇಕು. ಈ ಕುರಿತು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸುವಂತೆ ತಿಳಿಸಿದರು. ಅಲ್ಲದೆ, ಸದಸ್ಯ ಸ್ಥಾನಗಳಿಗೆ ಹರಾಜು ಮಾಡುವದು ಕಂಡುಬಂದಲ್ಲಿ ಅಂತಹವರ ವಿರುದ್ಧ ದೂರು ದಾಖಲಿಸಲು ಸೂಚಿಸಿದರು.
ಜಿಲ್ಲೆಯ ಮೊದಲನೆ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಎರಡನೇಹಂತದ ನಾಮಪತ್ರ ಸಲ್ಲಿಕೆ ಪಾರಂಭವಾಗುತ್ತಿದೆ. ಎರಡನೇ ಹಂತದಲ್ಲಿ ಉಮೇದುವಾರಿಕೆ ಸಲ್ಲಿಸುವ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಕೆ ಕೊನೆಯ ದಿನದವರೆಗೆ ಕಾಯದೇಉಮೇದುವಾರಿಕೆ ಸಲ್ಲಿಕೆಗೆ ಬೇಕಾಗುವ ಜಾತಿ, ಆದಾಯ ಪ್ರಮಾಣ ಪತ್ರ ಮುಂತಾದಅವಶ್ಯಕ ದಾಖಲೆಗಳನ್ನು ಮುಂಚಿತವಾಗಿಯೇಪಡೆದಿಟ್ಟುಕೊಳ್ಳಬೇಕು. ತಾಲೂಕು ಕಚೇರಿಗಳಲ್ಲಿ ಉಮೇದುವಾರಿಕೆ ಸಲ್ಲಿಕೆಗೆ ಅವಶ್ಯವಿರುವ ದಾಖಲೆಗಳನ್ನು ಪೂರೈಸಲು ಎಲ್ಲ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳುವಂತೆ ತಿಳಿಸಿದರು.
ಗ್ರಾಮ ಪಂಚಾಯತ ಚುನಾವಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗದಂತೆ ನಿಯಂತ್ರಿಸಲು ಅಗತ್ಯದ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು. ಆರೋಗ್ಯಾಧಿಕಾರಿಗಳಿಗೆ ನಿಗದಿಪಡಿಸಲಾದ ಗುರಿಗಳನ್ನು ಪೂರ್ಣಗೊಳಿಸಿ ಮಾದರಿ ಸಂಗ್ರಹ ಹಾಗೂ ಪರೀಕ್ಷೆಗಳಲ್ಲಿ ನಿರ್ಲಕ್ಷ್ಯ ತೋರದೆ ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಲು ತಿಳಿಸಿದರು.
ದಿ. 22, 27 ರಂದು ಗ್ರಾಮ ಪಂಚಾಯತಗಳಿಗೆ ಮತದಾನ ಜರುಗಲಿದ್ದು, ಮತಗಟ್ಟೆಗಳಿಗೆ ಕೋವಿಡ್ ಸೋಂಕು ನಿಯಂತ್ರಣಮುಂಜಾಗ್ರತಾ ಕ್ರಮವಾಗಿ ಅಗತ್ಯದ ಆರೋಗ್ಯ ಸಿಬ್ಬಂದಿ ನಿಯೋಜಿಸಬೇಕು. ಸೋಂಕಿತರಿಗೆ ಹಾಗೂ ಶಂಕಿತರಿಗೆ ಮತದಾನದ ದಿನದಂದುಕೊನೆಯ ಒಂದು ಗಂಟೆ ಮತದಾನಕ್ಕೆ ಸಮಯ ನಿಗದಿಪಡಿಸಿದ್ದು, ಈ ಸಮಯದಲ್ಲಿ ಅವರನ್ನು ನಿಗದಿಪಡಿಸಿದ ಆ್ಯಂಬುಲೆನ್ಸ್ ಮೂಲಕ ಕರೆತರಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್. ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ ಜಾದವ, ಗದಗ ತಹಶೀಲ್ದಾರ್‌ಶ್ರೀನಿವಾಸಮೂರ್ತಿ ಕುಲಕರ್ಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ್ ಬಸರಿಗಿಡದ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.