ಶಾಲೆ ಶುರುವಾಗುವವರೆಗೂ ಸಂಬಳ ನೀಡಿ
Team Udayavani, May 27, 2020, 6:26 AM IST
ರೋಣ: ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಲೆ ಪ್ರಾರಂಭವಾಗುವವರೆಗೆ ಪೂರ್ಣ ವೇತನ ಹಾಗೂ ಜೀವನ ನಿರ್ವಹಣೆಗೆ ಪರಿಹಾರ ಒದಗಿಸಬೇಕು ಎಂದು ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಸಮಿತಿ ವತಿಯಿಂದ ಮಂಗಳವಾರ ತಾಪಂ ಇಒ ಸಂತೋಷ ಪಾಟೀಲ ಹಾಗೂ ಅಕ್ಷರ ದಾಸೋಹ ಅಧಿಕಾರಿ ಬಸವರಾಜ ಅಂಗಡಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಅಕ್ಷರ ದಾಸೋಹ ನೌಕರರ ಸಮಿತಿ ತಾಲೂಕು ಅಧ್ಯಕ್ಷೆ ಸುನಂದಾ ಘಂಟಿ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಆಹಾರ ಧಾನ್ಯಗಳನ್ನು ಮಕ್ಕಳ ಮನೆಗೆ ತಲುಪಿಸಲಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರ ಸಹಾಯಹಸ್ತ ನೀಡಿದೆ. ಅದರಂತೆ ಬಿಸಿಯೂಟ ನೌಕರರಿಗೂ ಪರಿಹಾರ ನೀಡಬೇಕು. ಜೊತೆಗೆ ಏಪ್ರಿಲ್ ತಿಂಗಳಿನಿಂದ ಶಾಲೆ ಪ್ರಾರಂಭವಾಗುವವರೆಗೂ ಸಂಪೂರ್ಣ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಗಂಗಮ್ಮ ಪೂಜಾರ, ರೋಷನಬೀ ಕುರಹಟ್ಟಿ, ಮಮತಾಜಬೇಗಂ ಹೊಸಮನಿ, ಪ್ರೇಮಾ ಜಾಧವ, ನೀಲಮ್ಮ ಬೀರನೂರ, ಸರೋಜಾ ಬೀತನೂರ, ಲಕ್ಷ್ಮೀ ಗಾಣಿಗೇರ, ಎಸ್.ಎ. ಹೊಂಬಳ, ಬಿ.ಎಚ್. ಬಾವಿ, ಎಸ್.ಎ. ತೊಂಡಿಹಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.