ನಿಯಮ ಉಲ್ಲಂಘಿದರೆ ದಂಡ
Team Udayavani, May 6, 2020, 5:14 PM IST
ಗದಗ: ಸಾರ್ವಜನಿಕ ಸ್ಥಳದಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಇಲ್ಲವೇ 250 ರೂ. ದಂಡ ವಿಧಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ತಿಳಿಸಿದ್ದಾರೆ.
ನಗರದ ಮಾರುಕಟ್ಟೆ ಪ್ರದೇಶ, ಅಂಗಡಿ ಮಳಿಗೆ, ಮೆಡಿಕಲ್ ಶಾಪ್, ಮಟನ್ ಶಾಪ್ ಹಾಗೂ ಇನ್ನಿತರೆ ಯಾವುದೇ ಕೆಲಸ ಕಾರ್ಯ ಗಳಿಗಾಗಿ ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಜನರು ಮುಖಕ್ಕೆ ಮಾಸ್ಕ್ ಧರಿಸಬೇಕು. ಅಂಗಡಿ ಮಾಲೀಕರು ಹಾಗೂ ಕೆಲಸಗಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ. ಈ ನಿಯಮವನ್ನು ಉಲ್ಲಂಘಿಸಿ ಕಂಡಲ್ಲಿ ಉಗುಳುವುದು, ಮಾಸ್ಕ್ ಧರಿಸದೇ ಇರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರ ವಿರುದ್ಧ 250 ರೂ. ದಂಡ ವಿಧಿ ಸಲಾಗುವುದು ಎಂದು ಎಚ್ಚರಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.