117 ಜನರ ವರದಿ ಬರುವುದು ಬಾಕಿ
Team Udayavani, Jun 5, 2020, 6:22 AM IST
ಗದಗ: ಜಿಲ್ಲೆಯಲ್ಲಿ ಕೋವಿಡ್ ನಿಗಾಕ್ಕೆ ಒಳಗಾದವರ ಸಂಖ್ಯೆ 6,453ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಪೈಕಿ 17 ಜನರು ಆಸ್ಪತ್ರೆಯಲ್ಲಿ ಹಾಗೂ ಇನ್ನುಳಿದವರು ಮನೆಯಲ್ಲಿ ನಿಗಾದಲ್ಲಿದ್ದಾರೆ.
ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು 6,937 ಮಾದರಿಗಳಲ್ಲಿ 6,785 ನಕಾರಾತ್ಮಕವಾಗಿವೆ. 117 ಜನರ ವರದಿಗಳು ಬರಬೇಕಿವೆ. ಈ ವರೆಗೆ 35 ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಪಿ-166 ಕಾರ್ಡಿಕ್ ಅರೆಸ್ಟ್‌ನಿಂದ ಮೃತಪಟ್ಟಿದ್ದರು. 17 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿದ್ದು, ಇನ್ನುಳಿದ 17 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತೂಂದು ಪ್ರಕರಣ ಪಾಸಿಟಿವ್ : ನಗರದ ಹುಡ್ಕೊ ಕಾಲೋನಿ ನಿವಾಸಿ 54 ವರ್ಷದ ವ್ಯಕ್ತಿ (ಪಿ-4079)ಗೆ ಕೋವಿಡ್-19 ಇರುವುದು ಗುರುವಾರ ಬೆಂಗಳೂರಿನಲ್ಲಿ ದೃಡಪಟ್ಟಿದೆ. ಇವರು ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೇ 27ರಂದು ಗದಗನಿಂದ ಖಾಸಗಿ ವಾಹನದಲ್ಲಿ ಬೆಂಗಳೂರಿಗೆ ಪ್ರಯಾಣಿಸಿ ಎಚ್‌ಸಿಎಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಅಲ್ಲಿ ಅವರ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದ್ದದು, ಕೋವಿಡ್-19 ಸೊಂಕು ದೃಢಪಟ್ಟಿದೆ. ಪಿ-4079 ಅವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರನ್ನು ಪತ್ತೆ ಮಾಡಲಾಗುತ್ತಿದೆ. ಅದರೊಂದಿಗೆ ಲಕ್ಕುಂಡಿ ಗ್ರಾಮದ ನಿವಾಸಿ 44 ವರ್ಷದ ವ್ಯಕ್ತಿ (ಪಿ-4082) ಅವರು ಹುಬ್ಬಳ್ಳಿಯಲ್ಲಿ ಮೃತಪಟ್ಟಿದ್ದು, ಕೋವಿಡ್-19 ವಿಪತ್ತು ನಿರ್ವಹಣೆ ಮಾರ್ಗ ಸೂಚಿಯಂತೆ ಮೃತರ ಅಂತ್ಯ ಸಂಸ್ಕಾರ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.