ಮಂದಗತಿ ಕಾಮಗಾರಿಗೆ ಜನಾಕ್ರೋಶ


Team Udayavani, Jan 24, 2020, 3:41 PM IST

gadaga-tdy-1

ಗದಗ: ಮಂದಗತಿಯಲ್ಲಿ ಸಾಗುತ್ತಿರುವ ನಗರದ ಹಳೇಬಸ್‌ ನಿಲ್ದಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಹಳೇ ಬಸ್‌ ನಿಲ್ದಾಣಕ್ಕೆ ಪಂ| ಪಟ್ಟರಾಜಕವಿ ಗವಾಯಿಗಳ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಪ್ರಗತಿ ಪರ ಸಂಘಟನೆಗಳು ಗುರುವಾರ ಹಳೇ ಬಸ್‌ ನಿಲ್ದಾಣ ಬಳಿ ರಸ್ತೆ ತಡೆ ಮಾಡಿ, ಪ್ರತಿಭಟನೆ ನಡೆಸಿದರು.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಳೇ ಬಸ್‌ ನಿಲ್ದಾಣ ಸಮೀಪದ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ನಗರದ ಹಳೆ ಬಸ್‌ ನಿಲ್ದಾಣವು ಸುಮಾರು 3 ವರ್ಷಗಳಿಂದ ನವೀಕರಣ ಕಾಮಗಾರಿಯು ನಡೆಯುತ್ತಿದ್ದು, ಈವರೆಗೂ ಪೂರ್ಣವಾಗುತ್ತಿಲ್ಲ. ಇದರಿಂದಾಗಿ ಬೇರೆ ಹಳ್ಳಿಗಳಿಂದ ಬರುವ ಪ್ರಯಾಣಿಕರು, ಪ್ರವಾಸಿಗರು ಪರದಾಡುವಂತಾಗಿದೆ. ಜೊತೆಗೆ ಹೊಸ ಬಸ್‌ ನಿಲ್ದಾಣದಿಂದ ಜಿಲ್ಲಾಸ್ಪತ್ರೆಗೆ ತೆರಳುವವರಿಗೆ ಸಾಕಷ್ಟುತೊಂದರೆಯಾಗುತ್ತಿದೆ ಎಂದು ದೂರಿದರು.

ಮುಖ್ಯವಾಗಿ ಎಲ್ಲ ಬಸ್‌ಗಳು ಹೊಸ ಬಸ್‌ ನಿಲ್ದಾಣದಿಂದ ಕಾರ್ಯಾಚರಣೆ ನಡೆಸುತ್ತಿದ್ದು,ಈ ಭಾಗದ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಜನಸಂಪರ್ಕವೇ ಇಲ್ಲದಂತಾಗಿದೆ. ಪರಿಣಾಮ ಗದಗಿನ ಮಾರುಕಟ್ಟೆ ಮಂಕಾಗಿದೆ. ಬಹುತೇಕ ಎಲ್ಲ ವ್ಯಾಪಾರಗಳು ನೆಲಕ್ಕಚ್ಚಿದ್ದು, ಸಣ್ಣ- ಪುಟ್ಟವ್ಯಾಪಾರಿಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಬಸ್‌ ನಿಲ್ದಾಣದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ಕಾಮಗಾರಿ ವರ್ಷದಿಂದ ಕುಂಟುತ್ತಾ ಸಾಗಿದ್ದು, ಸಾಕಷ್ಟು ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಬೇಕು. ಹಳೆ ಬಸ್‌ ನಿಲ್ದಾಣಕ್ಕೆ ಸಂಗೀತ ಲೋಕದ ಧ್ರುವತಾರೆ, ಅಂಧ, ಅನಾಥರ ಆಶ್ರಯದಾತ ಡಾ|ಪಂಡಿತ ಪುಟ್ಟರಾಜ ಗವಾಯಿಗಳ ನಾಮಕರಣ ಮಾಡಬೇಕು ಎಂದು ಕೋರಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬೀದಿ ವ್ಯಾಪಾರಸ್ಥರ ಸಂಘದ ಕಾರ್ಯದರ್ಶಿ ಭಾಷಾಸಾಬ ಮಲ್ಲಸಮುದ್ರ, ಕರ್ನಾಟಕ ರಾಜ್ಯ ಯುವ ಸೇನೆ ಸಂಸ್ಥಾಪಕ ಮಹಾಂತೇಶ ಮದ್ದೂರ, ಸಯ್ಯದ ಕೊಪ್ಪಳ, ಶೌಕತ ಕಾತರಕಿ, ದಾದಾಪೀರ ಮುಂಡರಗಿ, ಕುಮಾರ ತಡಸದ, ಉಸ್ಮಾನ ಚಿತ್ತಾಪೂರ, ಅಬ್ದುಲ್‌ ಮುನಾಫ ಮುಲ್ಲಾ, ಲುಕ್ಕಣಸಾ ರಾಜೋಳಿ, ಸಂಗನಗೌಡ ಪಾಟೀಲ, ಸಿದ್ದಯ್ಯ ಚನ್ನಳ್ಳಿಮಠ, ಮಕು¤ಸಮಾಬ, ಬಸವರಾಜ ಗಾಮನಕಟ್ಟಿ, ಕಿರಣ ಗಾಮನಗಟ್ಟಿ, ಶರಣಪ್ಪ ಚಿಂಚಲಿ, ಕಾಶೀಮಸಾಬ ಸಾಲಗಾರ, ಶರಣಪ್ಪ ಮಡಿವಾಳರ, ರಾಮು ಕಬಾಡಿ, ಭೀಮಾ ಕಾಟಿಗರ, ಭರತ ಮಾರೆಪ್ಪನವರ, ಪ್ರವೀಣ ಹಬೀಬ, ಬಸವರಾಜ ಬಾರಕೇರ ಹಾಗೂ ಬೀದಿ ಬದಿ ವ್ಯಾಪಾರಸ್ಥರ ಸಂಘ, ಸಂಗಮೇಶ ಅಂಗಡಿಬಳಗ, ಕ್ರಾಂತಿ ಸೇನಾ, ಕರ್ನಾಟಕ ರಕ್ಷಣಾ ವೇದಿಕೆ,ಭಗತಸಿಂಗ್‌ ಅಭಿಮಾನಿ ಬಳಗ, ಎ.ಡಿ.ಎಸ್‌. ಎಸ್‌. ಅಲ್ಪಸಂಖ್ಯಾತರ ಘಟಕದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.