ಗಜೇಂದ್ರಗಡದಲ್ಲಿ ಕ್ರಿಮಿನಾಶಕ ಸಿಂಪಡಣೆ
Team Udayavani, Mar 25, 2020, 4:17 PM IST
ಗಜೇಂದ್ರಗಡ: ಪಟ್ಟಣದಲ್ಲಿ ಪುರಸಭೆ ವತಿಯಿಂದ ಸ್ಥಳೀಯ ಪ್ರಮುಖ ರಸ್ತೆಗಳಲ್ಲಿ ಮಂಗಳವಾರ ಕ್ರಿಮಿನಾಶಕ ಸಿಂಪಡಿಸಲಾಯಿತು.
ಕೋವಿಡ್ 19 ವೈರಸ್ ಸೋಂಕಿತರು ಜಿಲ್ಲೆಗೆ ಯಾರೂ ಬರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದೆ. ಇದಕ್ಕೆ ಗಜೇಂದ್ರಗಡ ಪುರಸಭೆಯೂ ಹೊರತಾಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಕೋವಿಡ್ 19 ವೈರಸ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಲ್ಲದೇ, ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಂಗಳವಾರ ಸಂಪೂರ್ಣ ಬಂದ್ ಆಚರಣೆಯಲ್ಲಿದ್ದ ಕಾರಣದಿಂದಾಗಿ ಪುರಸಭೆ ಫಾಗಿಂಗ್ ಮಾಡಿದರು.
ಸ್ಥಳೀಯ ಬಸವೇಶ್ವರ ವೃತ್ತ, ಕಮ್ಮಾರ ಸಾಲು, ಕೊಳ್ಳಿಯವರ ಕತ್ರಿ, ಕಟ್ಟಿಬಸವೇಶ್ವರ ರಂಗಮಂದಿರ, ದುರ್ಗಾ ವೃತ್ತ, ಜೋಡು ರಸ್ತೆ, ಶ್ರೀ ಕಾಲಕಾಲೇಶ್ವರ ವೃತ್ತ, ಬಸ್ ನಿಲ್ದಾಣ ರಸ್ತೆ, ಕುಷ್ಟಗಿ ರಸ್ತೆ, ರೋಣ ರಸ್ತೆ ಮತ್ತು ಬಸ್ ನಿಲ್ದಾಣದಲ್ಲಿ ಕ್ರಿಮಿನಾಶಕ ಸಿಂಪರಣೆ ಮಾಡುವ ಮೂಲಕ ಕೊರೊನಾ ವೈರಸ್ ವಿರುದ್ಧ ಹೋರಾಡಲು ಅಣಿಯಾಗಿದೆ. ಈಗಾಗಲೇ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸ್ವತ್ಛತೆ ಮತ್ತು ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಕ್ರಿಮಿನಾಶಕ ಸಿಂಪರಣೆ ಮಾಡಲಾಗುತ್ತಿದೆ.
ಗಜೇಂದ್ರಗಡ ಲಾಕ್‌ಡೌನ್ ಇದ್ದ ಕಾರಣದಿಂದ ಪ್ರಮುಖ ರಸ್ತೆಯಲ್ಲಿ ಫಾಗಿಂಗ್ ಮಾಡಲಾಗಿದೆ ಎಂದು ಪುರಸಭೆಯ ಆರೋಗ್ಯ ಅಧಿಕಾರಿ ರಾಘವೇಂದ್ರ ಮಂತಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.