ಮನಕುಲ ಒಳಿತಿಗೆ ಬೇಕು ಸಮೃದ್ಧ ಸಸ್ಯ ಸಂಪತ್ತು: ಪ್ರಾಚಾರ್ಯ ಡಾ|ಎಸ್.ಎನ್. ಶಿವರೆಡ್ಡಿ ಅಭಿಮತ
ಎಸ್.ಎಂ.ಭೂಮರಡ್ಡಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
Team Udayavani, Jun 10, 2022, 2:11 PM IST
ಗಜೇಂದ್ರಗಡ: ಜಾಗತಿಕ ಮಟ್ಟದಲ್ಲಿ ಮನಕುಲ ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾದರೆ, ಸಮೃದ್ಧ ಸಸ್ಯ ಸಂಪತ್ತು ಸೃಷ್ಟಿಯಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪರಿಸರ ಉಳಿಸುವ ಬಗ್ಗೆ ಬೋಧನೆ ಮಾಡುವ ಅಗತ್ಯವಿದೆ ಎಂದು ಪ್ರಾಚಾರ್ಯ ಡಾ|ಎಸ್. ಎನ್. ಶಿವರೆಡ್ಡಿ ಹೇಳಿದರು.
ಪಟ್ಟಣದ ಎಸ್.ಎಂ.ಭೂಮರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿ ನೆಟ್ಟು ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪಠ್ಯದ ಬೋಧನೆ ಮಾಡುವುದರ ಜತೆಗೆ ಮನುಕುಲ ಉಳಿವಿಗೆ ಅಗತ್ಯವಾಗಿರುವ ಪರಿಸರ ಬೆಳವಣಿಗೆ ಬಗ್ಗೆ ಮೊದಲ ಆದ್ಯತೆ ನೀಡಿ ಪರಿಸರ ಕುರಿತು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಈ ದಿಸೆಯಲ್ಲಿ ಶಾಲಾ ಆವರಣದ ಸುತ್ತಲೂ ಹಲವಾರು ಗಿಡಗಳನ್ನು ಪೋಷಿಸಲಾಗುತ್ತಿದೆ ಎಂದರು.
ಅಲ್ಲದೇ, ಪರಿಸರದ ಮೇಲೆ ನಿತ್ಯ ನಡೆಯುತ್ತಿರುವ ದೌರ್ಜನ್ಯದಿಂದಾಗಿ ಜೀವ ಸಂಕುಲಕ್ಕೆ ತೊಂದರೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಉಪನ್ಯಾಸ ಬಿ.ವಿ. ಮುನವಳ್ಳಿ ಮಾತನಾಡಿ, ಭೂಗೋಳ ಹಸಿರಾದಾಗ ಮಾತ್ರ ಪ್ರಕೃತಿಯ ಎಲ್ಲ ಜೀವಿಗಳು ಉಸಿರಾಡಲು ಸಾಧ್ಯ. ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು, ಪೋಷಿಸಿ ಮರವಾಗಿ ಬೆಳೆಸಬೇಕು. ಅರಣ್ಯ ನಾಶವಾದರೆ ಎದುರಾಗುವ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ನೀರು, ಆಹಾರದಷ್ಟೇ ಅರಣ್ಯವೂ ಮುಖ್ಯ ಎನ್ನುವಸಂಗತಿ ಸಮಾಜಕ್ಕೆ ಮನದಟ್ಟು ಮಾಡಿಕೊಡಬೇಕಾದ ಜವಾಬ್ದಾರಿ ವಿದ್ಯಾರ್ಥಿ ಸಮೂಹದ್ದಾಗಿದೆ ಎಂದರು.
ಎಂ.ಎಲ್. ಕ್ವಾಟಿ, ಎಸ್.ಕೆ. ಕಟ್ಟಿಮನಿ, ಎಲ್.ಕೆ. ಹಿರೇಮಠ, ಎಲ್. ಕೆ. ವದ್ನಾಳ, ಐ.ಎನ್. ಹಾಳಿ ಇತರರಿದ್ದರು.
ಸರ್ಕಾರಿ ಶಾಲೆ ನಂ. 4: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 4ರಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಡಲಾಯಿತು. ಈ ವೇಳೆ ಕಸಾಪ ನಿಕಟಪೂರ್ವ ತಾಲೂಕು ಅಧ್ಯಕ್ಷ ಐ.ಎ. ರೇವಡಿ, ಮುಖ್ಯ ಶಿಕ್ಷಕಿ ಬಿ.ಟಿ. ಹೊಸಮನಿ, ಬಸವರಾಜ ಕೊಟಗಿ, ಎಸ್.ಕೆ. ಮಠದ, ಬಿ.ಸಿ. ಅಂಗಡಿ, ಬಸವರಾಜ ಪಟ್ಟೇದ, ಅಕ್ಕಮ್ಮ ನರಗುಂದ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.